ಬಿಹಾರದ ತೀವ್ರ ಪರಿಷ್ಕರಣೆಯ ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಗುರುತನ್ನು ಸ್ಥಾಪಿಸಲು ಆಧಾರ್ ಅನ್ನು ಗುರುತಿನ ದಾಖಲೆಯಾಗಿ ಪರಿಗಣಿಸಬೇಕೆಂದು ಭಾರತದ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಬಿಹಾರ ರಾಜ್ಯದ ಮತದಾರರ ಪಟ್ಟಿಯ ಎಸ್‌ಐಆರ್‌ಗೆ ಸಂಬಂಧಿಸಿದ ವಿಚಾರಣೆಯಲ್ಲಿ ಆಧಾರ್ ಕಾರ್ಡ್ ಅನ್ನು 12ನೇ ದಾಖಲೆಯಾಗಿ ಸ್ವೀಕರಿಸಬೇಕೆಂದು ಸುಪ್ರೀಂ ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ. ಹಾಗೆಯೇ ಇದು ಪೌರತ್ವದ ಸಾಬೀತಿನ ದಾಖಲೆಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಚುನಾವಣಾ ಆಯೋಗ ಕೂಡ ಆಧಾರ್ ಅನ್ನು ಗುರುತಿನ ಪುರಾವೆಯಾಗಿ ಸ್ವೀಕರಿಸಲು ಸುಪ್ರೀಂ ಕೋರ್ಟ್ ಮುಂದೆ ಒಪ್ಪಿಕೊಂಡಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ.
ಚುನಾವಣೆ ಆಯೋಗವು ಸಲ್ಲಿಸಿದ ಟಿಪ್ಪಣಿಯ ಕುರಿತು ಆರ್‌ಜೆಡಿ , ಎಐಎಂಐಎಂ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹಾಗೂ ಇತರ ಅರ್ಜಿದಾರರ ಪ್ರಕರಣವನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ನಿರ್ಧಾರ ಕೈಗೊಂಡಿದೆ.
ಚುನಾವಣಾ ಆಯೋಗವು ಬಿಹಾರದ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಪ್ರಕಟಿಸಿದ ಟಿಪ್ಪಣಿಯಲ್ಲಿ, ಕರಡು ಮತದಾರರ ಪಟ್ಟಿಯಲ್ಲಿರುವ 7.24 ಕೋಟಿಯ ಮತದಾರರಲ್ಲಿ ಶೇ. 99.5 ಶೇಕಡಾ ಮಂದಿ ತಮ್ಮ ಅರ್ಹತಾ ದಾಖಲೆಗಳನ್ನು ಎಸ್‌ಐಆರ್ ಅಡಿಯಲ್ಲಿ ಸಲ್ಲಿಸಿದ್ದಾರೆ ಎಂದು ತಿಳಿಸಿದೆ.
ಹೆಚ್ಚಿನ ಅಪ್‌ಡೇಟ್‌ಆಗಿ ನಿರೀಕ್ಷಿಸಿ
