ಪಂಜಾಬ್ ಚುನಾವಣೆಗೆ AAP ಮೊದಲ ಪಟ್ಟಿ ಬಿಡುಗಡೆ!

Date:

ಆಮ್ ಆದ್ಮಿ ಪಾರ್ಟಿ (ಎಎಪಿ) 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ತನ್ನ ಮೊದಲ 40 ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ (ಅಕ್ಟೋಬರ್ 31, 2026) ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ಪ್ರಸ್ತುತ ಶಾಸಕರಿಗೆ ಮಾತ್ರ ಟಿಕೆಟ್ ನೀಡಲಾಗಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸಂಗ್‌ರೂರ್ ಜಿಲ್ಲೆಯ ಧುರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

- Advertisement -

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯ ಅವಧಿ 2027ರ ಮಾರ್ಚ್ 16ರಂದು ಕೊನೆಗೊಳ್ಳಲಿದೆ. 2022ರ ಚುನಾವಣೆಯಲ್ಲಿ ಎಎಪಿ 92 ಸ್ಥಾನಗಳನ್ನು ಗೆದ್ದು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಮೊದಲ ಪಟ್ಟಿಯ ಪ್ರಮುಖ ಅಭ್ಯರ್ಥಿಗಳು

ವಿಧಾನಸಭಾ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್: ಕೋಟ್‌ಕಪುರಾ ಕ್ಷೇತ್ರ

ಸಂಜೀವ್ ಅರೋರಾ (ಸಚಿವ): ಲೂಧಿಯಾನ ವೆಸ್ಟ್

ಕುಲದೀಪ್ ಸಿಂಗ್ ಧಲಿವಾಲ್: ಅಜ್ನಾಲಾ

ಇಂದರ್‌ಬೀರ್ ಸಿಂಗ್ ನಿಜಾರ್: ಅಮೃತಸರ ಸೌತ್

ಕುಲ್ವಂತ್ ಸಿಂಗ್: ಎಸ್‌ಎಎಸ್ ನಗರ್ (ಮೊಹಾಲಿ)

ಬ್ರಹ್ಮ ಶಂಕರ್ ಶರ್ಮಾ “ಜಿಂಪಾ”: ಹೋಶಿಯಾರ್‌ಪುರ್

ಅಭ್ಯರ್ಥಿಗಳ ಆಯ್ಕೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಭಗವಂತ್ ಮಾನ್, “ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ (PAC) ವಿಸ್ತೃತ ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಸಾರ್ವಜನಿಕ ಸಮೀಕ್ಷೆಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಟಿಕೆಟ್ ನೀಡಲಾಗಿದೆ. ಮುಂಬರುವ ಪಟ್ಟಿಗಳಲ್ಲಿ ಹೊಸ ಮುಖಗಳಿಗೂ ಅವಕಾಶ ನೀಡಲಾಗುವುದು” ಎಂದು ತಿಳಿಸಿದರು.

ಚುನಾವಣೆಗೆ 3-4 ತಿಂಗಳು ಮುಂಚಿತವಾಗಿ ಅಭ್ಯರ್ಥಿಗಳನ್ನು ಘೋಷಿಸುವುದು ಎಎಪಿ ಪಕ್ಷದ ಸಿದ್ಧಾಂತವಾಗಿದೆ. ಇದರಿಂದ ಅಭ್ಯರ್ಥಿಗಳಿಗೆ ಜನರನ್ನು ತಲುಪಲು ಮತ್ತು ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು ಸೂಕ್ತ ಸಮಯ ಸಿಗುತ್ತದೆ ಎಂದು ಮಾನ್ ಸ್ಪಷ್ಟಪಡಿಸಿದರು.

ಅಭ್ಯರ್ಥಿಗಳ ಆಯ್ಕೆಯಲ್ಲಿ ವಿಳಂಬ ಧೋರಣೆ ಅನುಸರಿಸುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾನ್, “ಬಂಡಾಯ ಅಥವಾ ಪಕ್ಷೇತರರಾಗಿ ಸ್ಪರ್ಧಿಸುವ ಭೀತಿಯಿಂದ ಕಾಂಗ್ರೆಸ್ ಕೊನೆಯ ಕ್ಷಣದವರೆಗೂ ಅಭ್ಯರ್ಥಿಗಳನ್ನು ಘೋಷಿಸುವುದಿಲ್ಲ. ಆದರೆ ಎಎಪಿ ಮುಂಚಿತವಾಗಿಯೇ ಪಟ್ಟಿ ಬಿಡುಗಡೆ ಮಾಡಿ, ಪಕ್ಷದ ನಾಯಕರಲ್ಲಾಗುವ ಅಸಮಾಧಾನವನ್ನು ಶಮನಗೊಳಿಸಲು ಮತ್ತು ಸಂಘಟನೆಯಲ್ಲಿ ಅವರಿಗೆ ಸೂಕ್ತ ಜವಾಬ್ದಾರಿ ನೀಡಲು ಅವಕಾಶ ಕಲ್ಪಿಸುತ್ತದೆ” ಎಂದಿದ್ದಾರೆ. 

ವಿರೋಧ ಪಕ್ಷಗಳ ಅಭಿವೃದ್ಧಿ ಆಗಿಲ್ಲ ಎಂಬ ಆರೋಪಗಳನ್ನು ತಳ್ಳಿಹಾಕಿದ ಮುಖ್ಯಮಂತ್ರಿ, ಪಂಜಾಬ್‌ನ ಪ್ರತಿಯೊಂದು ಹಳ್ಳಿಗೂ ಅಭಿವೃದ್ಧಿ ಅನುದಾನ ತಲುಪಿದೆ ಎಂದಿದ್ದಾರೆ. ಥಾಪರ್ ಮತ್ತು ಸಿಸ್ವಾಲ್ ಮಾದರಿಗಳ ಮೂಲಕ ಚರಂಡಿ ಸಮಸ್ಯೆ ಬಗೆಹರಿಸುವುದು, ಗ್ರಾಮೀಣ ರಸ್ತೆಗಳ ನಿರ್ಮಾಣ, ಕೊಳವೆಬಾವಿ ಸೌಲಭ್ಯ, ಯುವಕರಿಗೆ ಉದ್ಯೋಗಾವಕಾಶ, ಆಮ್ ಆದ್ಮಿ ಕ್ಲಿನಿಕ್‌ಗಳ ಸ್ಥಾಪನೆ ಹಾಗೂ ಸರ್ಕಾರಿ ಶಾಲೆಗಳ ನವೀಕರಣ ಸೇರಿದಂತೆ ಹಲವು ಯೋಜನಾ ಸಾಧನೆಗಳನ್ನು ಅವರು ಉಲ್ಲೇಖಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ; ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಸರಳತೆ, ಜನಪರ ಕಾಳಜಿ ಮತ್ತು ಹೋರಾಟದ ಬದುಕಿನ ಪ್ರತೀಕವಾಗಿರುವ ಕಾಂಗ್ರೆಸ್‌ನ ಹಿರಿಯ...

ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್‌ನ ‘ಕಾಯಿಸುವ ಧೋರಣೆ’ಗೆ ಆಕಾಶ್ ಚೋಪ್ರಾ ಕಿಡಿ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರನ್ನು...

ಈ ದಿನ ಸಂಪಾದಕೀಯ | ದಮನಕ್ಕೆ ಮಣಿಯದೆ ಪ್ರಜಾಪ್ರಭುತ್ವದ ಹಕ್ಕು ಗೆದ್ದ ಜಾಮಿಯಾ ಯುವಶಕ್ತಿ!

ಇಪ್ಪತ್ತು ವರ್ಷಗಳಿಂದ ಕಸಿದುಕೊಳ್ಳಲಾಗಿದ್ದ ವಿದ್ಯಾರ್ಥಿ ಸಂಘದ ಚುನಾವಣೆಯ ಹಕ್ಕನ್ನು ಮರಳಿ ಪಡೆಯಲು...

ಕನ್ನಡಿಗರಿಗೆ ಉದ್ಯೋಗ ತಾರತಮ್ಯ: ಖಾಸಗಿ ಸಂಸ್ಥೆಗಳಿಗೆ ಸಿಎಂ ಎಚ್ಚರಿಕೆ, ಕನ್ನಡಪರ ಸಂಘಟನೆಗಳಿಗೆ ಶಾಂತಿ ಕಾಪಾಡಲು ಮನವಿ

ಐಟಿ-ಬಿಟಿ ಕಂಪನಿಗಳಲ್ಲಿ ನೇಮಕಾತಿ ವೇಳೆ ಸ್ಥಳೀಯ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಲಾಗುತ್ತಿದೆ...