ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ತಮ್ಮ ಪಕ್ಷದ ಮುಖಂಡನನ್ನು ಸ್ವಾಗತಿಸಲು ನೂರಾರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ನೆರೆದಿದ್ದರು. ಸಂಜಯ್ ಸಿಂಗ್ ಜೈಲಿನಿಂದ ಹೊರಬರುತ್ತಿದ್ದಂತೆಯೇ ಸಂಭ್ರಮಾಚರಣೆ ನಡೆಸಿದರು.
Delhi: Aam Aadmi Party MP Sanjay Singh greets party workers as he walks out of Tihar Jail after nearly six months. pic.twitter.com/BXc48cwcsW
— IANS (@ians_india) April 3, 2024
ಜಾಮೀನಿನಿಂದ ಹೊರಬಂದ ತಕ್ಷಣ ನೆರೆದಿದ್ದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಎಎಪಿ ಸಂಸದ ಸಂಜಯ್ ಸಿಂಗ್, “ಇದು ನಾವು ಸಂಭ್ರಮಿಸಬೇಕಾದ ಸಮಯವಲ್ಲ. ಹೋರಾಟ ಸಂಘರ್ಷ ನಡೆಸಬೇಕಾದ ಸಮಯ” ಎಂದು ಹೇಳಿದರು.
#WATCH | As soon as AAP MP Sanjay Singh walks out of Tihar Jail on bail, he says, “Jashn manane ka waqt nahi aya hai, sangharsh ka waqt hai’…Our party’s senior leaders Arvind Kejriwal, Satyendar Jain and Manish Sisodia are being kept behind bars. I have confidence that the… pic.twitter.com/bIYrJzUC5i
— ANI (@ANI) April 3, 2024
“ನಮ್ಮ ಪಕ್ಷದ ಹಿರಿಯ ನಾಯಕರಾದ ಅರವಿಂದ್ ಕೇಜ್ರಿವಾಲ್, ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಜೈಲಿನ ಕಂಬಿಗಳ ಹಿಂದೆ ಇರಿಸಲಾಗಿದೆ. ಅವರೆಲ್ಲರೂ ಶೀಘ್ರದಲ್ಲೇ ಹೊರಬರಲಿದ್ದಾರೆ ಎಂಬ ವಿಶ್ವಾಸ ನನಗಿದೆ” ಎಂದು ಆಪ್ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ತಿಳಿಸಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನ ಹಾಗೂ ರಿಮ್ಯಾಂಡ್ ಕಸ್ಟಡಿಯಲ್ಲಿರುವುದನ್ನು ಪ್ರಶ್ನಿಸಿ ಸಂಜಯ್ ಸಿಂಗ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಹೆಚ್ಚುವರಿ ಸಾಲಿಟರ್ ಜನರಲ್ ಎಸ್ ವಿ ರಾಜು ಅವರಿಗೆ ಮುಂದಿನ ಕಸ್ಟಡಿ ಅವಧಿಯ ಬಗ್ಗೆ ತಿಳಿಸಲು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತ ಹಾಗೂ ಪಿ ಬಿ ವರಾಳೆ ಅವರಿದ್ದ ಪೀಠ ಮಂಗಳವಾರ ನಿರ್ದೇಶಿಸಿತ್ತು.
ಅಬಕಾರಿ ಹಗರಣದಲ್ಲಿ ತಮ್ಮದು ಯಾವುದೇ ಪಾತ್ರವಿಲ್ಲ ಎಂದು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಸಂಜಯ್ ಸಿಂಗ್ ಅವರು ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ದೆಹಲಿ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಿದೆ.
