ಎಎಪಿ ಸಂಸದರು ಬಿಜೆಪಿ ಸೇರ್ಪಡೆ: ‘ತನಿಖಾ ಸಂಸ್ಥೆಗಳ ದುರುಪಯೋಗದ ಪರಿಣಾಮ’ ಎಂದ ಸಿಪಿಐಎಂ ನಾಯಕ

Date:

ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು ಶುಕ್ರವಾರ ಎಎಪಿ ತೊರೆದಿದ್ದು, ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಆದರೆ ಈ ಮೂವರು ಸಂಸದರ ಈ ನಿರ್ಧಾರವು “ಜನರ ನಂಬಿಕೆಗೆ ಬಗೆಯುವ ದ್ರೋಹ. ಇದು ಆಡಳಿತಾರೂಢ ಬಿಜೆಪಿಯ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿರುವ ಪರಿಣಾಮ” ಎಂದು ಸಿಪಿಐ(ಎಂ) ರಾಜ್ಯಸಭಾ ನಾಯಕ ಜಾನ್ ಬ್ರಿಟ್ಟಾಸ್ ಆರೋಪಿಸಿದ್ದಾರೆ.

- Advertisement -

ರಾಜ್ಯಸಭಾ ಸದಸ್ಯ ಅಶೋಕ್ ಮಿತ್ತಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಳಿಯ ನಂತರ ಇದೀಗ ಬಿಜೆಪಿ ಸೇರ್ಪಡೆಗೆ ಮುಂದಾಗುತ್ತಿದ್ದಾರೆ. ಈ ಹಿಂದೆಯೇ ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರ ಸಂಸ್ಥೆಗಳನ್ನು ಬಳಸುವುದರ ವಿರುದ್ಧ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿತ್ತು ಎಂದು ಸಿಪಿಐಎಂ ನಾಯಕ ಜಾನ್ ಬ್ರಿಟ್ಟಾಸ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನು ಓದಿದ್ದೀರಾ? BREAKING NEWS | ಎಎಪಿ ತೊರೆದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್: ಬಿಜೆಪಿ ಸೇರ್ಪಡೆ ಘೋಷಣೆ!

ಇನ್ನು “ಬಿಜೆಪಿ ವಿರೋಧಿಯಾಗಿದ್ದುಕೊಂಡು ರಾಜ್ಯಸಭೆಗೆ ಆಯ್ಕೆಯಾದ ಎಎಪಿ ಸಂಸದರು ಈಗ ಬಿಜೆಪಿಗೆ ಸೇರುವ ಮೊದಲು ರಾಜ್ಯಸಭೆಗೆ ರಾಜೀನಾಮೆ ನೀಡಬೇಕಾಗಿತ್ತು” ಎಂದು ಸಿಪಿಐ(ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಹೇಳಿದ್ದಾರೆ.

“ಬಿಜೆಪಿ ವಿರೋಧಿ ಮತಗಳನ್ನು ಪಡೆದು ಆಯ್ಕೆಯಾದವರು ಈ ಎಎಪಿ ನಾಯಕರು. ಇದೀಗ ಬಿಜೆಪಿಗೆ ಸೇರುವುದು ಮತದಾರರ ನಂಬಿಕೆ ಮತ್ತು ಜನಾದೇಶಕ್ಕೆ ಮಾಡಿದ ದ್ರೋಹ. ಈ ಸಂಸದರು ತಮ್ಮ ರಾಜಕೀಯ ಪಕ್ಷವನ್ನು ಬದಲಾಯಿಸಲು ಸ್ವತಂತ್ರರು. ಆದರೆ ತಮ್ಮ ಮತದಾರರನ್ನು ಅವಮಾನಿಸುವ ಯಾವುದೇ ಹಕ್ಕು ಅವರಿಗಿಲ್ಲ” ಎಂದು ಭಟ್ಟಾಚಾರ್ಯ ತಿಳಿಸಿದ್ದಾರೆ.

ಇಡಿ ದಾಳಿ ಬೆನ್ನಲ್ಲೇ ಬಿಜೆಪಿ ಸೇರಲು ಸಜ್ಜು!

ರಾಘವ್ ಚಡ್ಡಾ ಪಕ್ಷದ ಚಟುವಟಿಕೆಗಳಿಂದ ದೂರ ಉಳಿಯುತ್ತಿದ್ದಂತೆ ಎಎಪಿ ರಾಜ್ಯಸಭೆಯ ಉಪನಾಯಕರ ಸ್ಥಾನದಿಂದ ಚಡ್ಡಾ ಅವರನ್ನು ತೆಗೆದುಹಾಕಿ ಅಶೋಕ್ ಮಿತ್ತಲ್ ಅವರಿಗೆ ಆ ಸ್ಥಾನವನ್ನು ನೀಡಲಾಗಿತ್ತು. ಅದಾದ ಬೆನ್ನಲ್ಲೇ ಅಶೋಕ್ ಮಿತ್ತಲ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ – ಇಡಿ ದಾಳಿ ನಡೆಸಿದೆ.

ಅಶೋಕ್ ಮಿತ್ತಲ್ ಅವರ ಮೇಲೆ ಇಡಿ ದಾಳಿ ನಡೆಯಲು ರಾಘವ್ ಚಡ್ಡಾ ಅವರೇ ಕಾರಣ ಎಂದು ಆಮ್ ಆದ್ಮಿ ಪಕ್ಷದ ಕೆಲವು ನಾಯಕರು ಆರೋಪಿಸಿದ್ದರು. ರಾಘವ್ ಚಡ್ಡಾ ಅವರು ಬಿಜೆಪಿಯೊಂದಿಗೆ ಕೈಜೋಡಿಸಿ ಈ ದಾಳಿಗೆ ಸಂಚು ರೂಪಿಸಿದ್ದಾರೆ ಎಂಬುದು ಪಕ್ಷದ ಆರೋಪವಾಗಿತ್ತು. ಈ ಎಲ್ಲ ಆರೋಪಗಳ ಬೆನ್ನಲ್ಲೇ ಇದೀಗ ಚಡ್ಡಾ, ಮಿತ್ತಲ್ ಸೇರಿದಂತೆ ಮೂವರು ಎಎಪಿ ಸಂಸದರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ನಾಯಕರುಗಳು ಬಿಜೆಪಿ ಸೇರುವಂತೆ ಮಾಡುತ್ತಿದೆ ಎಂಬ ಚರ್ಚೆಗಳು ಹೆಚ್ಚಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...