ಅಪ್ ಪಕ್ಷ ಪಂಜಾಬ್ ಒಳಗೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಐದು ರಾಜ್ಯಗಳಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದೆ.
ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಪ್ ರಾಷ್ಟ್ರೀಯ ವಕ್ತಾರ ಗೋಪಾಲ್ ರೈ, ಚರ್ಚೆ ಇಲ್ಲಿಯವರೆಗೂ ಸಕಾರಾತ್ಮಕವಾಗಿದೆ. ಸ್ಥಾನ ಹಂಚಿಕೆಯ ಬಗ್ಗೆ ಎರಡು ಪಕ್ಷಗಳಲ್ಲಿ ಮಾತುಕತೆ ಶುರುವಾಗಿದೆ. ಕಾಂಗ್ರೆಸ್‌ನೊಂದಿಗೆ ದೆಹಲಿ, ಪಂಜಾಬ್, ಹರುಯಾಣ, ಗೋವಾ ಹಾಗೂ ಗುಜರಾತ್‌ನಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳಲು ನಮ್ಮ ಪಕ್ಷ ಬದ್ಧವಾಗಿದೆ” ಎಂದು ತಿಳಿಸಿದರು.
ಸ್ಥಾನ ಹಂಚಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೋಪಾಲ್ ರೈ, ಈ ರಾಜ್ಯಗಳಲ್ಲಿ ನಿರ್ದಿಷ್ಟ ಸ್ಥಾನ ಹಂಚಿಕೆಯ ಬಗ್ಗೆ ಮಾತುಕತೆ ನಡೆದಿಲ್ಲ ಎಂದು ತಿಳಿಸಿದರು.
ಎಎಪಿ ದೆಹಲಿ ಹಾಗೂ ಪಂಜಾಬ್‌ಗಳಲ್ಲಿ ಅಧಿಕಾರದಲ್ಲಿದೆ. ಎರಡೂ ರಾಜ್ಯಗಳ ಕಾಂಗ್ರೆಸ್ ಘಟಕ ಎಎಪಿ ಜೊತೆಗಿನ ಮೈತ್ರಿಯನ್ನು ವಿರೋಧಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್ ರಾಜಕಾರಣ
ಪಂಜಾಬ್‌ನಲ್ಲಿ ಕಾಂಗ್ರೆಸ್ ಹಾಗೂ ಎಎಪಿ ಲೋಕಸಬಾ ಚುನಾವಣಾ ಮೈತ್ರಿಯ ಬಗ್ಗೆ ಬಹಿರಂಗವಾಗಿ ವಾಗ್ದಾಳಿ ನಡೆಸಿವೆ.
“ನಾವು ಮೈತ್ರಿಯೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಮುಂದಿನ ಸಭೆಯಲ್ಲಿ ಸ್ಥಾನ ಹಂಚಿಕೆಯ ಬಗ್ಗೆ ಮಾತುಕತೆ ನಡೆಯಲಿದೆ. ನಾವು ಒಕ್ಕೂಟದಲ್ಲಿರುವುದರಿಂದ ಅಧಿಕೃತ ನಿಲುವನ್ನು ತೆಗೆದುಕೊಳ್ಳಬೇಕಿದೆ. ಅದಕ್ಕಾಗಿ ಎರಡೂ ಪಕ್ಷಗಳು ಸಿದ್ದತೆ ಮಾಡಿಕೊಂಡು ಚರ್ಚೆ ನಡೆಸುತ್ತವೆ” ಎಂದು ಗೋಪಾಲ್ ರೈ ತಿಳಿಸಿದ್ದಾರೆ.
ಐದು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಯ ಸ್ಥಾನ ಹಂಚಿಕೆ ನಿರೀಕ್ಷೆಯ ಬಗ್ಗೆ ಕಾಂಗ್ರೆಸ್ ಮತ್ತು ಎಎಪಿ ಸೋಮವಾರ ಚರ್ಚೆ ನಡೆಸಿದ್ದವು. ಇಂಡಿಯಾ ಒಕ್ಕೂಟದಲ್ಲಿ ಎರಡೂ ಪ್ರಮುಖ ಪಕ್ಷಗಳಾಗಿರುವುದರಿಂದ ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.