ಗುಜರಾತ್ ಸ್ಥಳೀಯ ಸಂಸ್ಥೆಗಳಲ್ಲಿ ತಲೆ ಎತ್ತಿದ ಆಪ್: ಕಾಂಗ್ರೆಸ್ ಗೆ ಹೊಸ ಸವಾಲು

Date:

ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (AAP) ಪ್ರವೇಶ ರಾಜ್ಯದ ರಾಜಕೀಯ ಸಮೀಕರಣವನ್ನು ಬದಲಿಸಿದೆ. ಇದು ಕೇವಲ ಬಿಜೆಪಿಗೆ ಮಾತ್ರವಲ್ಲದೆ, ದಶಕಗಳಿಂದ ಪ್ರಬಲ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್‌ಗೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ.

- Advertisement -

ಸಾಂಪ್ರದಾಯಿಕವಾಗಿ ಗುಜರಾತ್ ರಾಜಕಾರಣ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನೇರ ಹಣಾಹಣಿಯಾಗಿತ್ತು. ಆದರೆ ‘ಆಪ್’ ಪ್ರವೇಶದಿಂದಾಗಿ ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗುತ್ತಿವೆ. ಇದರ ನೇರ ಲಾಭ ಬಿಜೆಪಿಗೆ ಸಿಗುತ್ತಿದ್ದರೆ, ಕಾಂಗ್ರೆಸ್ ತನ್ನ ಭದ್ರಕೋಟೆಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ನಗರ ಪ್ರದೇಶಗಳಲ್ಲಿ ‘ಆಪ್’ ಪ್ರಭಾವ ಹೆಚ್ಚಿಸಿಕೊಳ್ಳುತ್ತಿದೆ. ಸೂರತ್‌ನಂತಹ ಮಹಾನಗರ ಪಾಲಿಕೆಗಳಲ್ಲಿ ಆಮ್ ಆದ್ಮಿ ಪಕ್ಷ ಗಮನಾರ್ಹ ಸಾಧನೆ ಮಾಡಿದೆ. ಕಾಂಗ್ರೆಸ್ ಶೂನ್ಯಕ್ಕೆ ತಲುಪಿದ ಕಡೆಗಳಲ್ಲಿ ಆಪ್ ವಿರೋಧ ಪಕ್ಷವಾಗಿ ಹೊರಹೊಮ್ಮಿರುವುದು ಕಾಂಗ್ರೆಸ್‌ ಗೆ ಎಚ್ಚರಿಕೆಯ ಗಂಟೆಯಾಗಿದೆ.

ಆಪ್‌ ನ ಉಚಿತ ಶಿಕ್ಷಣ, ಉಚಿತ ಆರೋಗ್ಯ ಮತ್ತು ಉಚಿತ ವಿದ್ಯುತ್ ನೀಡುವ ಭರವಸೆಗಳು ಯುವ ಮತ್ತು ಮಧ್ಯಮ ವರ್ಗದ ಮತದಾರರನ್ನು ಹೆಚ್ಚು ಆಕರ್ಷಿಸುತ್ತಿವೆ. ಕಾಂಗ್ರೆಸ್ ತನ್ನ ಕಾರ್ಯಕರ್ತರನ್ನು ಮತ್ತು ಮತದಾರರನ್ನು ಹಿಡಿದಿಟ್ಟುಕೊಳ್ಳಲು ಹೆಣಗಾಡುತ್ತಿದೆ ಎಂಬ ವಾತಾವರಣವಿದೆ.

ಗುಜರಾತ್‌ನಲ್ಲಿ ಕಾಂಗ್ರೆಸ್ ನಾಯಕತ್ವದ ಕೊರತೆ ಮತ್ತು ಆಂತರಿಕ ಕಲಹದಿಂದ ಬಳಲುತ್ತಿದ್ದರೆ, ಆಪ್ ಸ್ಥಳೀಯ ಮಟ್ಟದಲ್ಲಿ ಸದೃಢ ಸಂಘಟನೆಯನ್ನು ಕಟ್ಟುತ್ತಿದೆ. ಹೀಗಾಗಿ, ಕಾಂಗ್ರೆಸ್‌ಗೆ ಈಗ ಕೇವಲ ಆಡಳಿತಾರೂಢ ಬಿಜೆಪಿಯನ್ನು ಎದುರಿಸುವ ಸವಾಲಷ್ಟೇ ಅಲ್ಲ, ತನ್ನ ‘ಮುಖ್ಯ ವಿರೋಧ ಪಕ್ಷ’ ಎಂಬ ಸ್ಥಾನವನ್ನು ಉಳಿಸಿಕೊಳ್ಳಲು ಆಪ್ ಜೊತೆಗೂ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ‘ತ್ರಿಕೋನ ಸ್ಪರ್ಧೆ’ಯಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೊಸ ತಂತ್ರಗಾರಿಕೆಯ ಮೊರೆ ಹೋಗಬೇಕಿದೆ.

ಬಿಜೆಪಿ, ಕಾಂಗ್ರೆಸ್ ಮಣಿಸಲು ಆಪ್ ಯತ್ನ

ಗುಜರಾತ್ ರಾಜಕಾರಣದಲ್ಲಿ ದಶಕಗಳಿಂದ ನೆಲೆಯೂರಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನೇರ ಹಣಾಹಣಿಗೆ ಆಮ್ ಆದ್ಮಿ ಪಕ್ಷ (AAP) ಈಗ ಹೊಸ ಆಯಾಮ ನೀಡುತ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ (Sthanik Swaraj Election 2026) ಆಪ್ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಎರಡೂ ಪ್ರಮುಖ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಮಣಿಸಲು ‘ಆಪ್’ ಅನುಸರಿಸುತ್ತಿರುವ ಪ್ರಮುಖ ತಂತ್ರಗಳು ಮತ್ತು ಸವಾಲುಗಳೇನೆಂದರೆ, ‘ಡೆಲ್ಲಿ ಮಾಡೆಲ್’ ಭರವಸೆಗಳನ್ನು ಸ್ಥಳೀಯ ಚುನಾವಣೆಗಳಲ್ಲಿಯೂ ಆಪ್‌ ಗುಜರಾತ್‌ನ ಮನೆಮನೆಗೆ ತಲುಪಿಸುತ್ತಿದೆ. ನಗರ ಪ್ರದೇಶಗಳಲ್ಲಿನ ಮಧ್ಯಮ ವರ್ಗದ ಮತದಾರರನ್ನು ಸೆಳೆಯಲು ಯಶಸ್ವಿಯಾಗಿ ಬಳಸುತ್ತಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್‌ನ ಭದ್ರಕೋಟೆಗಳಾಗಿದ್ದ ಹಲವು ವಾರ್ಡ್‌ಗಳಲ್ಲಿ ಆಪ್ ಈಗ ಪರಿಣಾಮಕಾರಿಯಾಗಿ ಕಾರ್ಯತಂತ್ರ ರೂಪಿಸುತ್ತಿದೆ.

2022ರ ವಿಧಾನಸಭಾ ಚುನಾವಣೆಯ ನಂತರ, ಕಾಂಗ್ರೆಸ್‌ನಿಂದ ಬೇಸತ್ತಿರುವ ಮತದಾರರಿಗೆ ಆಪ್ ಒಂದು ಸಶಕ್ತ ಪರ್ಯಾಯವಾಗಿ ಕಾಣಿಸಿಕೊಳ್ಳುತ್ತಿದೆ. ಇತ್ತೀಚಿನ ಸಮೀಕ್ಷೆಗಳ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್‌ಗಿಂತ ಆಪ್ ಹೆಚ್ಚು ಸದ್ದು ಮಾಡುತ್ತಿದ್ದು, ‘ಮುಖ್ಯ ವಿರೋಧ ಪಕ್ಷ’ದ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದೆ.

ಇನ್ನು, ಇತ್ತೀಚೆಗೆ ನಡೆದ ವಿಸಾವದರ್ ಉಪಚುನಾವಣೆಯಲ್ಲಿ ಆಪ್ ಅಭ್ಯರ್ಥಿ ಗೋಪಾಲ್ ಇಟಾಲಿಯಾ ಅವರು ಬಿಜೆಪಿಯನ್ನು ಸೋಲಿಸಿ ಜಯಗಳಿಸಿದ್ದು ಪಕ್ಷಕ್ಕೆ ಆನೆಬಲ ತಂದಿದೆ. ಇದು 2027ರ ವಿಧಾನಸಭಾ ಚುನಾವಣೆಗೆ ಆಪ್‌ಗೆ ಒಂದು ‘ಸೆಮಿ ಫೈನಲ್’ ಗೆಲುವಿನಂತೆ ಭಾಸವಾಗುತ್ತಿದೆ.

ಬಿಜೆಪಿ ವಿರೋಧಿ ಮತಗಳ ವಿಭಜನೆ

ಆಪ್‌ ನ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಬಿಜೆಪಿ ವಿರೋಧಿ ಮತಗಳು ಕಾಂಗ್ರೆಸ್ ಮತ್ತು ಆಪ್ ನಡುವೆ ಹಂಚಿಹೋಗುತ್ತವೆ. ಇದು ಬಿಜೆಪಿಗೆ ಪರೋಕ್ಷವಾಗಿ ಲಾಭ ನೀಡುತ್ತವೆಯಾದರೂ, ಕೆಲವು ನಗರ ಪ್ರದೇಶಗಳಲ್ಲಿ ಆಪ್ ನೇರವಾಗಿ ಪ್ರಜಾಪ್ರಭುತ್ವದ ವಿರೋಧಿ ಬಿಜೆಪಿಯ ಮತಗಳನ್ನೂ ಕಬಳಿಸುತ್ತಿದೆ.

ಇನ್ನೊಂದೆಡೆ, ಭರೂಚ್ ಮತ್ತು ಅಹಮದಾಬಾದ್‌ನಂತಹ ಭಾಗಗಳಲ್ಲಿ ಆಪ್‌ನ ಕೆಲವು ಸ್ಥಳೀಯ ನಾಯಕರು ಬಿಜೆಪಿ ಸೇರುತ್ತಿರುವುದು ಪಕ್ಷದ ಸಂಘಟನೆಗೆ ಹಿನ್ನಡೆಯೂ ಆಗಿದೆ. ನಗರ ಪ್ರದೇಶಗಳಲ್ಲಿ ಪ್ರಬಲವಾಗಿರುವ ಆಪ್, ಗ್ರಾಮೀಣ ಗುಜರಾತ್‌ನಲ್ಲಿ ಇನ್ನೂ ಕಾಂಗ್ರೆಸ್ ಮತ್ತು ಬಿಜೆಪಿಯಷ್ಟು ಆಳವಾಗಿ ಬೇರೂರಿಲ್ಲ. ಹಾಗಾಗಿ, ಗುಜರಾತ್‌ನ ಸ್ಥಳೀಯ ಸಂಸ್ಥೆಗಳ ಚುನಾವಣೆ ಈಗ ಕೇವಲ ಆಡಳಿತ ಪಕ್ಷದ ಅಸ್ತಿತ್ವದ ಪ್ರಶ್ನೆಯಲ್ಲ, ಬದಲಾಗಿ ವಿರೋಧ ಪಕ್ಷದ ಸ್ಥಾನ ಯಾರಿಗೆ ಎಂಬ ದೊಡ್ಡ ಕುತೂಹಲಕ್ಕೆ ಕಾರಣವಾಗಿದೆ.

ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಯಾಕಿಲ್ಲ? 

ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯನ್ನು ಎದುರಿಸಲು ‘ಇಂಡಿಯಾ’ (INDIA) ಮೈತ್ರಿಕೂಟ ರಚನೆಯಾಗಿದ್ದರೂ, ಸ್ಥಳೀಯ ಅಥವಾ ರಾಜ್ಯ ಮಟ್ಟದ ಚುನಾವಣೆಗಳಲ್ಲಿ ಈ ಪಕ್ಷಗಳ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ. ಕೆಲವು ರಾಜ್ಯಗಳಲ್ಲಿ ಮೈತ್ರಿಕೂಟದಲ್ಲಿರುವ ಪಕ್ಷಗಳೇ ಎದುರಾಳಿಗಳಾಗಿವೆ. ಉದಾಹರಣೆಗೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಕಾಂಗ್ರೆಸ್‌ ಎದರಾಳಿಯಾಗಿವೆ. ತೃಣಮೂಲ ಕಾಂಗ್ರೆಸ್‌, ಎಡರಂಗ, ಕಾಂಗ್ರೆಸ್‌ ನಡುವೆ ದಶಕಗಳ ಹಗೆತನವಿದೆ. ಸ್ಥಳೀಯ ಹಾಗೂ ರಾಜ್ಯ ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳಾಗಿ ಕಣದಲ್ಲಿ ಕಾದಾಡಿದರೇ, ಸಂಸತ್‌ ಚುನಾವಣೆಯಲ್ಲಿ ಬಿಜೆಪಿಯಂತಹ ಕೋಮುವಾದಿ ಪಕ್ಷದ ಎದರು ಒಂದಾಗಿ ಹೋರಾಡುತ್ತವೆ. ಕೇರಳದಲ್ಲಿ ಎಲ್‌ಡಿಎಫ್.‌ ಯುಡಿಎಫ್‌ ಭಿನ್ನ ನಿಲುವು ಹೊಂದಿ ಕಾದಾಡಿದರೆ, ಸಂಸತ್‌ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜೋಡಿಯಾಗುತ್ತವೆ. ಪಕ್ಷದ ವರಿಷ್ಠ ನಾಯಕರು ದೆಹಲಿಯಲ್ಲಿ ಕೈಕುಲುಕಿದರೂ, ಸ್ಥಳೀಯ ಮಟ್ಟದಲ್ಲಿ ದಶಕಗಳಿಂದ ಪರಸ್ಪರ ಸ್ಪರ್ಧಿಸುತ್ತಿವೆ. ಪ್ರಾದೇಶಿಕತೆ ಮತ್ತು ಅಸ್ತಿತ್ವ ಮುಖ್ಯವಾಗಿರುವ ಕಾರಣದಿಂದ ಈ ರೀತಿಯ ಸ್ಪರ್ಧೆಯೂ ಪ್ರಜಾಪ್ರಭುತ್ವದಲ್ಲಿ ಮುಖ್ಯ. ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವಲ್ಲಿಯೂ ಈ ರೀತಿಯಲ್ಲಿ ಸ್ಪರ್ಧಿಸುವುದು ಕೂಡ ಪ್ರಮುಖ ಪಾತ್ರ ವಹಿಸುತ್ತದೆ.

ರಾಷ್ಟ್ರೀಯ ಮಟ್ಟದಲ್ಲಿ ʼಬಿಜೆಪಿ ವಿರೋಧʼ ಎಂಬ ಒಂದೇ ಸದುದ್ದೇಶವಿದ್ದರೂ, ಸ್ಥಳೀಯ ಮಟ್ಟದಲ್ಲಿ ಭಿನ್ನ ನಿಲುವು ತಾಳುತ್ತವೆ. ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಒಂದಾದರೇ, ಸ್ಥಳೀಯ ಚುನಾವಣೆಗಳಲ್ಲಿ ಸ್ಥಳೀಯ ಸಮಸ್ಯೆಗಳು ಮತ್ತು ಸ್ಥಳೀಯ ಅಸ್ಮಿತೆಗಾಗಿ ಬೇರೆ ಬೇರೆಯಾಗುತ್ತವೆ.

ಒಟ್ಟಾರೆಯಾಗಿ ಹೇಳುವುದಾದರೆ, “ಲೋಕಸಭೆಯಲ್ಲಿ ಒಗ್ಗಟ್ಟು, ರಾಜ್ಯ, ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧೆ” ಎಂಬುದು ಈ ಮೈತ್ರಿಕೂಟದ ಅಲಿಖಿತ ನಿಯಮದಂತಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಅನಿವಾರ್ಯತೆಯಿಂದ ಒಂದಾಗುವ ಈ ಪಕ್ಷಗಳು, ತಮ್ಮ ಭದ್ರಕೋಟೆಗಳನ್ನು ಉಳಿಸಿಕೊಳ್ಳಲು ಸ್ಥಳೀಯವಾಗಿ ಸ್ವತಂತ್ರವಾಗಿ ಹೋರಾಡುತ್ತವೆ.

IMG 20260316 WA0002
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...