ಆಪ್ ನಾಯಕ ಅರವಿಂದ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಯಿಂದ ಆಕ್ರೋಶಗೊಂಡಿದೆ. ಈ ನಡುವೆ ಆಪ್ ನಾಯಕರು ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ ಮನವಿ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
2013ರಲ್ಲಿ 40 ದಿನಗಳ ಕೇಜ್ರಿವಾಲ್ ಸರಕಾರಕ್ಕೆ ಬೆಂಬಲ ನೀಡಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲಗೊಳ್ಳಲು ಪ್ರಮುಖ ಕಾರಣ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಯ್ ಮಾಕೆನ್ ವಾಗ್ದಾಳಿ ನಡೆಸಿದ್ದರು. ಈ ಬೆಳವಣಿಗೆ ನಂತರ, ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಹೊರ ಹಾಕಲು ಇತರ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಆಪ್ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಇವೆಲ್ಲವೂ ಇಂಡಿಯಾ ಮೈತ್ರಿಕೂಟದಲ್ಲಿನ ಭಿನ್ನಾಭಿಪ್ರಾಯಗಳು ಬಿಕ್ಕಟ್ಟಿನ ಸ್ವರೂಪಕ್ಕೆ ತಿರುಗಿವೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಬರಿ ಮಸೀದಿ ಕೆಡವಿದಾಗಲೇ ‘ಸಾಮರಸ್ಯ’ ಸಮಾಧಿಯಾಗಿತ್ತಲ್ಲವೇ?
ದೆಹಲಿಯಲ್ಲಿ ಮಾಕೆನ್ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗಳಿಂದ ನಮ್ಮ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.
ಈ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ. ದೆಹಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ.
ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡ ನಂತರ, ಕಾಂಗ್ರೆಸ್ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಹಾದಿಯನ್ನೇ ಆಪ್ ಸಹ ಹಿಡಿದಿದೆ. ಇಂಡಿಯಾ ಮೈತ್ರಿಕೂಟದ ನಾಯಕತ್ವವನ್ನು ಕಾಂಗ್ರೆಸ್‌ನಿಂದ ಹಿಂಪಡೆದು, ಮಮತಾ ಬ್ಯಾನರ್ಜಿ ಅವರಿಗೆ ನೀಡಬೇಕು ಎಂಬ ಬೇಡಿಕೆಯನ್ನು ತೃಣಮೂಲ ಕಾಂಗ್ರೆಸ್ ನಾಯಕರು ಇಟ್ಟಿದ್ದಾರೆ.
