ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

Date:

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಪಂಜಾಬ್‌ನ ಎಎಪಿ ಶಾಸಕ ಸುಖವೀರ್ ಸಿಂಗ್ ಮೈಸರ್‌ಖಾನಾ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

- Advertisement -

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಮೌರ್ ಕ್ಷೇತ್ರದ ಶಾಸಕರಾಗಿರುವ ಸುಖವೀರ್ ಸಿಂಗ್, ತಮ್ಮ ಕ್ಷೇತ್ರದಲ್ಲಿನ ಕೆಲವು ಸರ್ಕಾರಿ ಶಾಲೆಗಳಲ್ಲಿ ಎದುರಾಗಿರುವ ಶಿಕ್ಷಕರ ಕೊರತೆಯ ಸಮಸ್ಯೆಯನ್ನು ಬಗೆಹರಿಸದ ಹಿನ್ನೆಲೆಯಲ್ಲಿ ಶನಿವಾರ ಫೇಸ್‌ಬುಕ್ ಲೈವ್ ಬಂದಿದ್ದರು. ಲೈವ್ ವಿಡಿಯೋದಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಅವರು, “ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ನಿರಂತರವಾಗಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ನಮ್ಮ ಸರ್ಕಾರದ ಪ್ರತಿಪಾದಿಸುತ್ತಿದೆ. ಆದರೆ, ವಾಸ್ತವ ಪರಿಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ” ಎಂದು ಆರೋಪಿಸಿದ್ದರು.

“ಸರ್ಕಾರ ನಿರ್ಮಿಸಿರುವ ‘ಸ್ಕೂಲ್ ಆಫ್ ಎಮಿನೆನ್ಸ್’ನಲ್ಲೂ ಶಿಕ್ಷಕರ ಅಭಾವವಿದೆ. ನನ್ನ ಮಗ ಕೂಡ ಅದೇ ಶಾಲೆಯಲ್ಲಿ ಓದುತ್ತಿದ್ದು, ಶಾಲೆಯ ಪ್ರಾಂಶುಪಾಲರೇ ಶಿಕ್ಷಕರ ನೇಮಕಕ್ಕೆ ನನ್ನ ಬಳಿ ಒತ್ತಾಯಿಸುವಂತೆ ಮಗನಿಗೆ ತಿಳಿಸಿದ್ದರು” ಎಂದು ಅವರು ಹೇಳಿಕೊಂಡಿದ್ದರು.

Advertisements

“ನಮ್ಮ ಪಕ್ಷದ ಎಲ್ಲ ಶಾಸಕರ ಪೈಕಿ ನಮ್ಮ ಮಕ್ಕಳು ಮಾತ್ರ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ” ಎಂದು ಸುಖವೀರ್ ಸಿಂಗ್ ಹೇಳಿದ್ದರು.

“ಸರ್ಕಾರಿ ಶಾಲೆಯಲ್ಲಿನ ಶಿಕ್ಷಕರ ಕೊರತೆ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಯತ್ನಿಸಿದರೂ ಅವಕಾಶ ಸಿಗಲಿಲ್ಲ, ನಮ್ಮ ಬೇಸರವನ್ನು ತೋಡಿಕೊಳ್ಳಲು ಬೇರೆ ದಾರಿಯಿಲ್ಲದೆ ಸಾಮಾಜಿಕ ಜಾಲತಾಣದ ಮೊರೆ ಹೋಗಬೇಕಾಯಿತು” ಎಂದು ಅವರು ತಿಳಿಸಿದ್ದರು.

ಶಾಸಕರ ಈ ಬಹಿರಂಗ ಹೇಳಿಕೆ ಬೆನ್ನಲ್ಲೇ, ಅವರನ್ನು‌ ಪಕ್ಷದಿಂದ ಅಮಾನತು ಮಾಡಲಾಗಿದೆ. “ಶಾಸಕರು ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ತೀವ್ರ ಶಿಸ್ತು ಉಲ್ಲಂಘನೆಯಲ್ಲಿ ತೊಡಗಿರುವುದು ಕಂಡುಬಂದಿದೆ” ಎಂದಿರುವ ಪಂಜಾಬ್ ಎಎಪಿ ಪ್ರಧಾನ ಕಾರ್ಯದರ್ಶಿ ಹರ್ಚಂದ್ ಸಿಂಗ್ ಬರ್ಸಾತ್ ಅವರು, ಸುಖವೀರ್ ಸಿಂಗ್ ಮೈಸರ್‌ಖಾನಾ ಅವರ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...