ರಾಮಮಂದಿರ ಲೂಟಿ: ಮೋದಿ ಸರ್ಕಾರದಿಂದ ‘ಮಹಾ-ಪಾಪ’ ಮಾಡಿದವರ ರಕ್ಷಣೆ; ಎಎಪಿ ಸಹಿ ಸಂಗ್ರಹ

Date:

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಲೂಟಿ ಮಾಡಿದ ಅಪರಾಧಿಗಳಿಗೆ ಕಠಿಣ ಶಿಕ್ಷ ವಿಧಿಸುವಂತೆ ಕೋರಿ ಕೋರಿ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ (ಜುಲೈ 12) ರಾಷ್ಟ್ರವ್ಯಾಪಿ ಸಹಿ ಅಭಿಯಾನ ಆರಂಭಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ‘ಮಹಾ-ಪಾಪ’ ಮಾಡಿದವರನ್ನು ರಕ್ಷಿಸುತ್ತಿದೆ ಎಂದು ಎಎಪಿ ಆರೋಪಿಸಿದೆ.

- Advertisement -

ರಾಮಮಂದಿರ ದೇಣಿಗೆ ಲೂಟಿ ಪ್ರಕರಣದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿದೆ. ಆದರೆ ಆರ್‌ಎಸ್‌ಎಸ್‌ನ ಪ್ರಭಾವಿಗಳನ್ನು ರಕ್ಷಿಸಲಾಗುತ್ತಿದೆ ಎಂಬ ಆರೋಪ ಆಗಾಗೇ ಕೇಳಿಬರುತ್ತಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, “ಈ ದರೋಡೆಯಲ್ಲಿ ಭಾಗಿಯಾಗಿರುವ ಎಲ್ಲ ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗುತ್ತಿದೆ. ಅದಕ್ಕಾಗಿ ಕೆಳ ಹಂತದ ಎಂಟು ಉದ್ಯೋಗಿಗಳನ್ನು ಮಾತ್ರ ಬಂಧಿಸಲಾಗಿದೆ. ಇದು ಜನರು ಧ್ವನಿ ಎತ್ತುವ ಸಮಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ರಾಮಮಂದಿರ ದೇಣಿಗೆ ಲೂಟಿ; ಹಿಂದೂಗಳಿಗೆ ‘ದ್ರೋಹ’ ಬಗೆದ ಬಿಜೆಪಿ: ಉದ್ಧವ್ ಠಾಕ್ರೆ

“ದೇವಾಲಯದ ಕಾಣಿಕೆಗಳ ಕಳ್ಳತನವು ಬೃಹತ್ ಪ್ರಮಾಣದಲ್ಲಿ ನಡೆದಿದೆ. ಹಲವಾರು ಘಟನೆಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಆದರೂ ಯಾವುದೇ ತನಿಖೆ ನಡೆದಿಲ್ಲ. ಈ ನಿಟ್ಟಿನಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೋರಿ ಸಹಿ ಸಂಗ್ರಹ ನಡೆಸಲಾಗುತ್ತದೆ. ಜತೆಗೆ ರಾಮಾಯಣದ ‘ಸುಂದರ ಖಂಡ’ ಪಠಣವೂ ನಡೆಸಲಾಗುತ್ತದೆ” ಎಂದು ತಿಳಿಸಿದರು.

“ದೆಹಲಿ ಮತ್ತು ದೇಶಾದ್ಯಂತ ಎಎಪಿ ಸ್ವಯಂಸೇವಕರು ಇರುವಲ್ಲೆಲ್ಲಾ ಅಭಿಯಾನವನ್ನು ನಡೆಸಲಾಗುವುದು. ಇದು ಕೇವಲ ಆಮ್ ಆದ್ಮಿ ಪಕ್ಷದ ಅಭಿಯಾನವಲ್ಲ. ಎಲ್ಲಾ ಶ್ರೀರಾಮ ಭಕ್ತರು ಮತ್ತು ಈ ಲೂಟಿಯಿಂದ ತೊಂದರೆಗೆ ಒಳಗಾದವರು ಈ ಅಭಿಯಾನದಲ್ಲಿ ಭಾವಹಿಸಿ” ಎಂದು ಕರೆ ನೀಡಿದರು.

ಸಹಿ ಸಂಗ್ರಹ ಅಭಿಯಾನ ಪತ್ರದಲ್ಲೇನಿದೆ?

ಇನ್ನು ಈ ಅಭಿಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವನ್ನೂ ಬರೆಯಲಾಗುತ್ತದೆ. ಈ ಪತ್ರಕ್ಕೆ ಸಹಿ ಸಂಗ್ರಹ ಮಾಡಲಾಗುತ್ತದೆ. “ಪ್ರಧಾನಿಗಳೇ, ನೀವು ರಾಮಮಂದಿರದ ಪ್ರತಿಯೊಂದು ವಿಚಾರದಲ್ಲೂ ವೈಯಕ್ತಿಕವಾಗಿ ಮುಂದಾಳತ್ವ ವಹಿಸಿದ್ದೀರಿ. ನೀವು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ಸ್ಥಾಪಿಸಿದ್ದೀರಿ. ನೀವು ಟ್ರಸ್ಟ್‌ನ ಪ್ರತಿಯೊಬ್ಬ ಸದಸ್ಯರನ್ನು ವೈಯಕ್ತಿಕವಾಗಿ ಆಯ್ಕೆ ಮಾಡಿ ನೇಮಿಸಿದ್ದೀರಿ. ಹಾಗೆಯೇ ಅವರು ನಿಮಗೆ ತುಂಬಾ ಆಪ್ತರು. ಈಗ ಇಷ್ಟು ದೊಡ್ಡ ಪ್ರಮಾಣದ ತಪ್ಪು ನಡೆದಿದೆ. ಆದರೆ ನಿಮ್ಮ ಮೌನದಿಂದ ನನಗೆ ನೋವಾಗಿದೆ” ಎಂದು ಬರೆಯಲಾಗಿದೆ.

ಹಾಗೆಯೇ, “2021ರಿಂದ, ಟ್ರಸ್ಟ್‌ನಿಂದ ಭೂ ಹಗರಣ, ನಿರ್ಮಾಣ ಕಾರ್ಯಗಳಲ್ಲಿ ಶೇ. 40ರವರೆಗೆ ಕಮಿಷನ್‌ ತೆಗೆದುಕೊಂಡ ಆರೋಪಗಳಿವೆ. ಈಗ ದೇವಾಲಯದ ಕಾಣಿಕೆಗಳ ದೊಡ್ಡ ಪ್ರಮಾಣದ ಕಳ್ಳತನದ ಆರೋಪವೂ ಕೇಳಿಬಂದಿದೆ. ಇದೆಲ್ಲವೂ ನಿಮ್ಮ ಗಮನಕ್ಕೆ ಬಂದಿರಬೇಕು. ನೀವು ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ಭಾವಿಸಿದೆ. ಆದರೆ ಕಳೆದ ಕೆಲವು ದಿನಗಳ ಘಟನೆಗಳು ನನ್ನ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿದೆ. ಭಗವಂತ ರಾಮನ ಮಂದಿರದಲ್ಲಿ ತಪ್ಪು ಕಾರ್ಯ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಬದಲಾಗಿ, ಅವರನ್ನು ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗೋಚರಿಸುತ್ತಿದೆ” ಎಂದು ಕೇಜ್ರಿವಾಲ್ ಬರೆದಿರುವ ಪತ್ರದಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...