ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆ: ಆಪ್‌ ಭರ್ಜರಿ ಜಯ; ವಿಧಾನಸಭೆ ಗೆಲ್ಲಲು ಸಜ್ಜಾಗುತ್ತಿರುವ ಬಿಜೆಪಿಗೆ ನಿರಾಸೆ

Date:

ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಸಾಧಿಸಿದೆ. ಶೇಕಡ 48ಕ್ಕೂ ಅಧಿಕ ಹೆಚ್ಚು ಪುರಸಭೆಯ ವಾರ್ಡ್‌ಗಳನ್ನು ಮತ್ತು 900ಕ್ಕೂ ಹೆಚ್ಚು ಸ್ಥಾನಗಳನ್ನು ಆಪ್ ಗೆದ್ದಿದೆ. ಎಎಪಿ ನಂತರ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ಆದರೆ 300ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ತನ್ನ ಖಾತೆ ತೆರೆದಿದೆ.

- Advertisement -

ಇವೆಲ್ಲವುದರ ನಡುವೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್ ಅನ್ನು ತನ್ನ ಹಿಡಿತಕ್ಕೆ ಪಡೆದುಕೊಳ್ಳಬೇಕೆಂದುಕೊಂಡಿದ್ದ, ಈ ನಿಟ್ಟಿನಲ್ಲಿ ಸಿದ್ದತೆ ನಡೆಸುತ್ತಿದ್ದ ಬಿಜೆಪಿಗೆ ತೀವ್ರ ನಿರಾಸೆಯಾಗಿದೆ. ಬಿಜೆಪಿ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗಳು ಮತ್ತು ಶಿರೋಮಣಿ ಅಕಾಲಿ ದಳದ ಅಭ್ಯರ್ಥಿಗಳಿಗಿಂತಲೂ ಕೆಳಗಿನ ಸ್ಥಾನದಲ್ಲಿದೆ. ಮುಂದಿನ ಚುನಾವಣೆ ಗೆಲ್ಲುವ ಸಿದ್ಧತೆ ನಡೆಸುತ್ತಿರುವ ಬಿಜೆಪಿ ಐದನೇ ಸ್ಥಾನದಲ್ಲಿದೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಬಿಜೆಪಿ & ಗೋದಿ ಮೀಡಿಯಾ ʼಪಾಕಿಸ್ತಾನ್‌ ಜಿಂದಾಬಾದ್‌ ಎಂದರುʼ ಎಂಬ ಸುಳ್ಳನ್ನು ಹಬ್ಬಿಸಿದ 22 ಪ್ರಕರಣಗಳು

ಎಎಪಿಗೆ ಮತ ನೀಡಿದ ರಾಜ್ಯದ ಜನರಿಗೆ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಧನ್ಯವಾದ ಅರ್ಪಿಸಿದ್ದಾರೆ. ಬಿಜೆಪಿಯನ್ನು ಇಡಿ ಪಕ್ಷದ ಎಂದು ಕರೆದು ಟೀಕಿಸಿದ್ದಾರೆ. “ಇಡಿ ಪಕ್ಷವನ್ನು ನಿರ್ನಾಮ ಮಾಡಲಾಗಿದೆ. ಪಂಜಾಬ್‌ನಲ್ಲಿ ಸಣ್ಣ ವ್ಯಾಪಾರಿಗಳ ಮೇಲೆ ಹಲವಾರು ದಾಳಿಗಳನ್ನು ನಡೆಸುವ ಮೂಲಕ ಜನರಿಗೆ ಕಿರುಕುಳ ನೀಡಿದ ಇಡಿ ಪಕ್ಷದ ಮೇಲೆ ಜನರು ಸೇಡು ತೀರಿಸಿಕೊಂಡಿದ್ದಾರೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ “ದ್ವೇಷದ ರಾಜಕೀಯ ಸೋಲನುಭವಿಸಿದೆ” ಎಂದಿದ್ದಾರೆ.

ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ಆಮ್ ಆದ್ಮಿ ಪಾರ್ಟಿ (AAP): 958 ಸ್ಥಾನಗಳು
ಕಾಂಗ್ರೆಸ್ (INC): 397 ಸ್ಥಾನಗಳು
ಸ್ವತಂತ್ರ ಅಭ್ಯರ್ಥಿಗಳು (IND): 251 ಸ್ಥಾನಗಳು
ಶಿರೋಮಣಿ ಅಕಾಲಿ ದಳ (SAD): 191 ಸ್ಥಾನಗಳು
ಭಾರತೀಯ ಜನತಾ ಪಾರ್ಟಿ (BJP): 172 ಸ್ಥಾನಗಳು
ಬಹುಜನ ಸಮಾಜ ಪಕ್ಷ (BSP): 7 ಸ್ಥಾನಗಳು

ಸದ್ಯ ಒಟ್ಟು 8 ಮುನ್ಸಿಪಲ್ ಕಾರ್ಪೊರೇಷನ್‌ಗಳಲ್ಲಿ 5 ಕಾರ್ಪೊರೇಷನ್‌ಗಳನ್ನು (ಮೊಹಾಲಿ, ಬಟಿಂಡಾ, ಬರ್ನಾಲಾ, ಮೊಗಾ ಮತ್ತು ಬಟಾಲಾ) ಆಪ್ ತನ್ನದಾಗಿಸಿಕೊಂಡಿದೆ. ಕಳೆದ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದ ಕಾಂಗ್ರೆಸ್ ಈ ಬಾರಿ 397 ಸ್ಥಾನಗಳನ್ನು ಮಾತ್ರ ಗೆದ್ದು ಎರಡನೇ ಸ್ಥಾನದಲ್ಲಿದೆ. ಪಂಜಾಬ್‌ನಲ್ಲಿ ಸ್ವತಂತ್ರವಾಗಿ ಅಧಿಕಾರ ಹಿಡಿಯಲು ಬಿಜೆಪಿ ಹವಣಿಸುತ್ತಿರುವ ನಡುವೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿನ್ನಡೆ ಬಿಜೆಪಿಗೆ ನಿರಾಸೆ ಮೂಡಿಸಿದೆ. ಈ ಚುನಾವಣೆಯಲ್ಲಿ ಬಿಜೆಪಿಗಿಂತ ಅಧಿಕ ಪಕ್ಷೇತರ ಅಭ್ಯರ್ಥಿಗಳು (251) ಗೆಲುವು ಸಾಧಿಸಿದ್ದಾರೆ.

ಇನ್ನು ನಾವು ಪಂಜಾಬ್‌ನ ರಾಜಕೀಯ ಇತಿಹಾಸವನ್ನು ನಾವು ಗಮನಿಸಿದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದ ಪಕ್ಷವೇ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎನ್ನಲಾಗದು. 2015ರಲ್ಲಿ ಅಕಾಲಿದಳ-ಬಿಜೆಪಿ ಮೈತ್ರಿಕೂಟವು ಸ್ಥಳೀಯ ಸಂಸ್ಥೆಗಳಲ್ಲಿ ಪ್ರಾಬಲ್ಯ ಸಾಧಿಸಿತ್ತು. ಆದರೆ ಡ್ರಗ್ಸ್ ಸಮಸ್ಯೆ, ಕೃಷಿ ಬಿಕ್ಕಟ್ಟು ಮೊದಲಾದ ಕಾರಣದಿಂದಾಗಿ 2017ರ ಹೊತ್ತಿಗೆ ಭಾರಿ ಆಡಳಿತ ವಿರೋಧಿ ಅಲೆಯನ್ನು ಎದುರಿಸಿ ಸೋಲಬೇಕಾಯಿತು.

2021ರ ಆರಂಭದಲ್ಲಿ ರೈತ ಹೋರಾಟದ ನಡುವೆ ಕಾಂಗ್ರೆಸ್ ಸ್ಥಳೀಯ ಸಂಸ್ಥೆಗಳಲ್ಲಿ ಭರ್ಜರಿ ಜಯ ಸಾಧಿಸಿತ್ತು. ಆದರೆ ನಂತರದ ದಿನಗಳಲ್ಲಿ ಕಾಂಗ್ರೆಸ್ ಒಳಗಿನ ಆಂತರಿಕ ಕಲಹ (ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವಿನ ವಿವಾದ) 2022ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಆಮ್ ಆದ್ಮಿ ಪಕ್ಷಕ್ಕೆ ಐತಿಹಾಸಿಕ ಬಹುಮತ ನೀಡಿದರು. ಈ ನಿಟ್ಟಿನಲ್ಲಿ ಬಿಜೆಪಿಯ ಕೆಲವು ನಾಯಕರು ಇನ್ನೂ ಭರವಸೆ ಉಳಿಸಿಕೊಂಡಿದ್ದಾರೆ. ಆದರೆ ಈಗಾಗಲೇ ರೈತ ವಿರೋಧಿ ಎನಿಸಿಕೊಂಡಿರುವ ಬಿಜೆಪಿಗೆ ಪಂಜಾಬ್‌ನಲ್ಲಿ ಅಧಿಕಾರ ಪಡೆಯುವುದು ದೊಡ್ಡ ಸವಾಲಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...