ಎಎಪಿಯ ಏಕೈಕ ಸಂಸದ ಬಿಜೆಪಿ ಸೇರ್ಪಡೆ

Date:

ಎಎಪಿ ಯಿಂದ ಆಯ್ಕೆಯಾಗಿದ್ದ ಏಕೈಕ ಸಂಸತ್ ಸದಸ್ಯ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಂಜಾಬ್‌ನ ಜಲಂಧರ್‌ ಕ್ಷೇತ್ರದ ಸಂಸದ ಸುಶೀಲ್ ಕುಮಾರ್ ರಿಂಕು ಹಾಗೂ ಪಶ್ಚಿಮ ಜಲಂಧರ್‌ನ ಶಾಸಕ ಶೀತಲ್‌ ಅಂಗುರಾಲ್‌ ಅವರು ಇಂದು ದೆಹಲಿಯ ಮುಖ್ಯ ಕಚೇರಿಯಲ್ಲಿ ಬಿಜೆಪಿಗೆ ಸೇರಿದರು.

ಸುಶೀಲ್ ಕುಮಾರ್‌ ರಿಂಕು ಅವರು 2023ರ ಲೋಕಸಭೆಯ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಈ ಮೊದಲು ಕಾಂಗ್ರೆಸ್‌ನಲ್ಲಿದ್ದ ರಿಂಕು 2022ರ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ನಂತರ ಎಎಪಿಗೆ ಸೇರ್ಪಡೆಗೊಂಡಿದ್ದರು.

ರಿಂಕು ವಿರುದ್ಧ ಪಶ್ಚಿಮ ಜಲಂಧರ್‌ನ ವಿಧಾನಸಭಾ ಕ್ಷೇತ್ರದಲ್ಲಿ 2022ರಲ್ಲಿ ಜಯ ಸಾಧಿಸಿದ್ದ ಎಎಪಿಯ ಶಾಸಕ ಶೀತಲ್‌ ಅಂಗುರಾಲ್‌ ಕಮಲ ಪಕ್ಷಕ್ಕೆ ಸೇರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಳುವವರ ಕೊಡಲಿಗೆ ಹಾಡಹಗಲೇ ಬಲಿಯಾಗತೊಡಗಿವೆ ಒಕ್ಕೂಟದ ಬೇರುಗಳು

ಸುಶೀಲ್‌ ಕುಮಾರ್ ರಿಂಕು ಅವರು 543 ಸಂಸತ್‌ ಸದಸ್ಯರಲ್ಲಿ ಎಎಪಿಯ ಏಕೈಕ ಸಂಸದರಾಗಿದ್ದರು. ಬಿಜೆಪಿಗೆ ಜಿಗಿದಿರುವ ರಿಂಕು ತಮ್ಮ ಸ್ವಕ್ಷೇತ್ರದಿಂದಲೇ ಲೋಕಸಭಾ ಚುನಾವಣೆಗೆ ಕಮಲ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

“ನನಗೆ ಅಧಿಕಾರದ ದಾಹವಿಲ್ಲ.ಜಲಂಧರ್‌ನ ಒಳಿತಿಗಾಗಿ ಹಾಗೂ ಅಭಿವೃದ್ಧಿಪಡಿಸುವ ಕಾರಣದಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ” ಎಂದು ಸುಶೀಲ್ ಕುಮಾರ್‌ ರಿಂಕು ತಿಳಿಸಿದ್ದಾರೆ.

ಪಂಜಾಬ್‌ನ ಒಟ್ಟು 13 ಲೋಕಸಭಾ ಕ್ಷೇತ್ರಗಳಿಗೆ ಜೂನ್‌ 1ರಂದು, ಕೊನೆಯ ಹಾಗೂ ಏಳನೇ ಹಂತದ ಚುನಾವಣೆಯಲ್ಲಿ ಮತದಾನ ನಡೆಯಲಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ...

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...