ಎಎಪಿ ಸದಸ್ಯನಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನಿರಾಕರಿಸಿದ ರಾಜ್ಯಸಭೆ ಅಧ್ಯಕ್ಷ

Date:

ರಾಜ್ಯಸಭೆ ಅಧ್ಯಕ್ಷರಾದ ಜಗದೀಪ್ ಧನಕರ್ ಅವರು ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನಿರಾಕರಿಸಿದ್ದಾರೆ.

ದೆಹಲಿ ಮಾಜಿ ಸಚಿವರು ಆಗಿರುವ ಸಂಜಯ್ ಸಿಂಗ್ ದೆಹಲಿ ಅಬಕಾರಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನವಾಗಿ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ.

ಕಳೆದ ಜನವರಿಯಲ್ಲಿ ರಾಜ್ಯಸಭೆಗೆ ಮತ್ತೊಂದು ಅವಧಿಗೆ ಮರು ನಾಮಕರಣವಾಗಿದ್ದ ಸಂಜಯ್ ಅವರಿಗೆ ದೆಹಲಿ ಹೈಕೋರ್ಟ್ ಫೆ.5ರೊಳಗಾಗಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸಂಜಯ್‌ ಅವರಿಗೆ ಸೂಚನೆ ನೀಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ ಪ್ರಕರಣವು ಪ್ರಸ್ತುತ ಹಕ್ಕು ಭಾದ್ಯತಾ ಸಮಿತಿಯಲ್ಲಿರುವ ಕಾರಣ ಪ್ರಮಾಣ ವಚನ ಸ್ವೀಕರಿಸದಂತೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ದೆಹಲಿ ಹೈಕೋರ್ಟ್‌ನ ವಿಶೇಷ ನ್ಯಾಯಾಧೀಶರಾದ ಎಂ ಕೆ ನಾಗಪಾಲ್ ಅವರು ಸಂಸತ್ತಿನಲ್ಲಿ ಇಂದು ಬೆಳಿಗ್ಗೆ 10 ಗಂಟೆಯೊಳಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ಆದೇಶ ನೀಡಿದ್ದರು.

ಸಂಜಯ್ ಸಿಂಗ್ ಅವರಲ್ಲದೆ ಎಎಪಿಯಿಂದ ಸ್ವಾತಿ ಮಲಿವಾಲ್ ಹಾಗೂ ನರೈನ್ ದಾಸ್ ಗುಪ್ತ ಅವರು ರಾಜ್ಯಸಭೆಗೆ ನಾಮ ನಿರ್ದೇಶಿತರಾಗಿದ್ದರು.

ಸಂಜಯ್ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಡಿ ಕಳೆದ ವರ್ಷ ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದ ಅಪರಾಧಿ ಸಾವು

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ಬಳಿಕ ಬಿಡುಗಡೆಗೊಂಡಿದ್ದ...

6 ಕಾಂಗ್ರೆಸ್ ಶಾಸಕರನ್ನು ಕರೆದೊಯ್ದ ಸೇನೆ: ಬಿಜೆಪಿ ವಿರುದ್ಧ ಹಿಮಾಚಲ ಪ್ರದೇಶ ಸಿಎಂ ಆರೋಪ

ಅರೆಸೇನಾ ಪಡೆ ಮತ್ತು ರಾಜ್ಯ ಪೊಲೀಸ್‌ ಬೆಂಗಾವಲೊಂದಿಗೆ ಕಾಂಗ್ರೆಸ್‌ನ ಐದರಿಂದ ಆರು...

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ಮುಂದಿನ ತಿಂಗಳು ಜಾರಿ ಸಾಧ್ಯತೆ

ನೆರೆಯ ದೇಶಗಳಿಂದ ಭಾರತಕ್ಕೆ ಬಂದು ನೆಲಸಿರುವ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ...