ಭಾರತಕ್ಕೆ ಬಂದಿಳಿದ ಅಭಿಜೀತ್ ದೀಪ್ಕೆ: ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ ದೆಹಲಿ ಪೊಲೀಸರ ಅನುಮತಿ

Date:

ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಮೂಡಿಸಿರುವ ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಇಂದು ಭಾರತಕ್ಕೆ ಬಂದಿಳಿದಿದ್ದಾರೆ. ಈ ನಡುವೆ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ.

- Advertisement -

ಅಮೆರಿಕದಿಂದ ಭಾರತಕ್ಕೆ ಬಂದಿಳಿದ ದೀಪ್ಕೆ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಭಾರತಕ್ಕೆ ಬಂದಿದ್ದೇನೆ. ಜಂತರ್ ಮಂತರ್‌ನಲ್ಲಿ ನಿಮ್ಮೆಲ್ಲರನ್ನೂ ಭೇಟಿಯಾಗಲು ಕಾಯುತ್ತಿದ್ದೇನೆ. ಪುಸ್ತಕ ಮತ್ತು ನಮ್ಮ ದೇಶದ ಭಾವುಟವನ್ನು ಕೊಂಡೊಯ್ಯಲು ಮರೆಯಬೇಡಿ! ಕರುಣೆ ಮತ್ತು ಕೃತಜ್ಞತೆಯ ಸಂಕೇತವಾಗಿ ಪೊಲೀಸರಿಗೆ ಹೂವುಗಳನ್ನು ನೀಡಿ. ನಾವು ಈ ಚಳವಳಿಯನ್ನು ಪ್ರೀತಿ ಮತ್ತು ಶಾಂತಿಯಿಂದ ಮುನ್ನಡೆಸೋಣ” ಎಂದು ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದನ್ನು ಓದಿದ್ದೀರಾ?  ‘ಕಾಕ್ರೋಚ್ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6ರಂದು ಭಾರತಕ್ಕೆ; ಬಂಧಿಸಲಿದೆಯೇ ಮೋದಿ ಸರ್ಕಾರ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳ ಅಧ್ವಾನಕ್ಕೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಗೆ ಆರಂಭದಲ್ಲಿ ಅನುಮತಿ ನೀಡಿರಲಿಲ್ಲ.

7ರಿಂದ 10 ದಿನಗಳ ಮುಂಚಿತವಾಗಿ ಅನುಮತಿ ಕೋರಿ ಅರ್ಜಿ ಸಲ್ಲಿಸಬೇಕು ಎಂದು ಹೇಳಿ ಅನುಮತಿ ನೀಡಲು ನಿರಾಕರಿಸಲಾಗಿತ್ತು. ಆದರೆ ಯುವಕರ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಇದೀಗ ಸಿಜೆಪಿ ಮುಖ್ಯಸ್ಥ ಅಭಿಜೀತ್ ದೀಪ್ಕೆ ಅಮೆರಿಕದಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಕ್ಷಣ ಪೊಲೀಸ್ ಅಧಿಕಾರಿಗಳು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಬಳಿಕ ಪ್ರತಿಭಟನೆಗೆ ಅನುಮತಿ ನೀಡಿದ್ದಾರೆ. ಹತ್ತು ಗಂಟೆಗೆ ಪ್ರತಿಭಟನೆ ಆರಂಭವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...