ಸರ್ಕಾರಿ ಶಾಲೆಗಳ ದುಸ್ಥಿತಿ: ಮಹಾರಾಷ್ಟ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಅಭಿಜೀತ್ ದೀಪ್ಕೆ ಆಗ್ರಹ

Date:

ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲಸೌಕರ್ಯಗಳಾದ ತರಗತಿ ಕೊಠಡಿ, ಬೆಂಚ್, ಶೌಚಾಲಯ ಹಾಗೂ ಸುಸಜ್ಜಿತ ರಸ್ತೆಗಳ ಕೊರತೆ ಎದ್ದು ಕಾಣುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಾಲಾ ಶಿಕ್ಷಣ ಸಚಿವ ದಾದಾ ಭೂಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಆಗ್ರಹಿಸಿದ್ದಾರೆ.

- Advertisement -

​ಲಾತೂರ್‌ನ ಔಸಾ ತಾಲೂಕಿನ ಉಜನಿ ಗ್ರಾಮದ ಜಿಲ್ಲಾ ಪಂಚಾಯಿತಿ ಶಾಲೆಯೊಂದಕ್ಕೆ ತಮ್ಮ ‘ಶಾಲೆಗಳನ್ನು ಸರಿಪಡಿಸಿ’ (School Thik Karo) ಅಭಿಯಾನದ ಅಡಿಯಲ್ಲಿ ಭೇಟಿ ನೀಡಿದ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಶಾಲೆಯ ದುಸ್ಥಿತಿಗೆ ಜನಪ್ರತಿನಿಧಿಗಳು ಮತ್ತು ಸಚಿವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳಿದ ಅವರು, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುವಂತೆ ರಾಜಕೀಯ ನಾಯಕರ ಮೇಲೆ ಒತ್ತಡ ಹೇರುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

​ಸುದ್ದಿಗಾರರೊಂದಿಗೆ ಮಾತನಾಡಿದ ದೀಪ್ಕೆ, “ಅನೇಕ ಶಾಲೆಗಳಲ್ಲಿ ಈಗಲೂ ಸರಿಯಾದ ತರಗತಿ ಕೊಠಡಿ, ಶೌಚಾಲಯ, ಬೆಂಚ್ ಅಥವಾ ಸುರಕ್ಷಿತ ರಸ್ತೆಗಳಿಲ್ಲ. ವಿದ್ಯಾರ್ಥಿಗಳನ್ನು ಪ್ರಾಣಿಗಳಿಗಿಂತ ಕಡೆಯಾಗಿ ನೋಡಿಕೊಳ್ಳಲಾಗುತ್ತಿದೆ. ರಾಜಕೀಯ ನಾಯಕರು ವಿದ್ಯಾರ್ಥಿಗಳಿಗಾಗಿ ಏನನ್ನೂ ಮಾಡದಿದ್ದಾಗ, ಜನರು ಅವರಿಗೇಕೆ ಮತ ಹಾಕಬೇಕು? ಕೇವಲ ಅವರು ಹೆಲಿಕಾಪ್ಟರ್‌ಗಳಲ್ಲಿ ಓಡಾಡಲಿ ಎಂದು ಮತ ಹಾಕಬೇಕೆ? ಈ ಸಚಿವರು ಸಾಕುವ ನಾಯಿಗಳಿಗೆ ಸಿಗುವ ಸೌಲಭ್ಯಗಳೂ ಸಹ ನಮ್ಮ ಶಾಲಾ ಮಕ್ಕಳಿಗೆ ಸಿಗುತ್ತಿಲ್ಲ” ಎಂದು ತೀವ್ರ ವಾಗ್ದಾಳಿ ನಡೆಸಿದರು.

​”ಚುನಾವಣೆಗಾಗಿ ಜಾತಿ, ಧರ್ಮದ ಧ್ವಜ ಹಿಡಿದುಕೊಂಡು ಬರುವ ನಾಯಕರ ಬಳಿ ಜನರು ಶಿಕ್ಷಣಕ್ಕಾಗಿ ಕೆಲಸ ಮಾಡುವಂತೆ ಆಗ್ರಹಿಸಬೇಕು. ಶಿಕ್ಷಣದ ಅಭಿವೃದ್ಧಿಗೆ ಶ್ರಮಿಸದಿದ್ದರೆ ಮತ ಕೇಳಲು ನಮ್ಮ ಮನೆ ಬಾಗಿಲಿಗೆ ಬರಬೇಡಿ ಎಂದು ಖಡಕ್ ಆಗಿ ಹೇಳಬೇಕು. ಧರ್ಮ ಅಪಾಯದಲ್ಲಿದೆ ಎಂದು ರಾಜಕೀಯ ಮಾಡಲಾಗುತ್ತದೆ. ಇಷ್ಟು ವರ್ಷಗಳಲ್ಲಿ ನಾಶವಾಗದ ಧರ್ಮ ಇವರ ಅಧಿಕಾರಾವಧಿಯಲ್ಲಿ ನಾಶವಾಗುತ್ತದೆಯೇ? ಧರ್ಮಕ್ಕೆ ಏನೂ ಆಗುವುದಿಲ್ಲ, ಆದರೆ ಮಕ್ಕಳ ಭವಿಷ್ಯ ಮಾತ್ರ ಹಾಳಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಸಚಿವರು ಮತ್ತು ಶಾಸಕರು ಮೊದಲು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದರು.

​ಹತ್ತು ವರ್ಷಗಳಿಂದ ಅಧಿಕಾರದಲ್ಲಿದ್ದರೂ ಶಾಲೆಗಳ ದುಸ್ಥಿತಿ ಬದಲಾಗಿಲ್ಲ ಎಂಬುದನ್ನು ಬೊಟ್ಟು ಮಾಡಿದ ಅವರು, “ಸೋರುವ ಛಾವಣಿಗಳು, ಬೆಂಚ್‌ಗಳಿಲ್ಲದ ಕೊಠಡಿಗಳಲ್ಲೇ ಮಕ್ಕಳು ಕಲಿಯುತ್ತಿದ್ದಾರೆ. ಶಾಲೆಗಳ ಆವರಣದಲ್ಲಿ ಕಸ, ಗುಜರಿ ವಸ್ತುಗಳು ತುಂಬಿ ಹಾವುಗಳ ಆವಾಸಸ್ಥಾನವಾಗಿವೆ. ಇದರಿಂದ ಹಾವು ಕಚ್ಚಿ ಮಕ್ಕಳು ಸಾವನ್ನಪ್ಪುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಸುರಕ್ಷಿತ ಸಾರಿಗೆ ವ್ಯವಸ್ಥೆ ಇಲ್ಲದೆ ಮಕ್ಕಳು ಕಿಲೋಮೀಟರ್‌ಗಟ್ಟಲೆ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ” ಎಂದು ಸರ್ಕಾರದ ವೈಫಲ್ಯವನ್ನು ಟೀಕಿಸಿದರು.

​ಲಾತೂರ್‌ನಲ್ಲಿ ನಡೆದ ನೀಟ್ (NEET) ಪತ್ರಿಕೆ ಸೋರಿಕೆ ಪ್ರಕರಣದ ಸಿಬಿಐ ತನಿಖೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದಲ್ಲಿ ಕೇವಲ ಕೆಳಮಟ್ಟದ ಸಿಬ್ಬಂದಿಯನ್ನು ಬಂಧಿಸಿ, ಉನ್ನತ ಮಟ್ಟದ ಅಧಿಕಾರಿಗಳನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ, 2029ರ ಚುನಾವಣೆ ವೇಳೆಗೆ ಇಂದಿನ ಯುವಪೀಳಿಗೆ (Gen Z) ಪ್ರಬಲ ಮತ ಬ್ಯಾಂಕ್ ಆಗಿ ಹೊರಹೊಮ್ಮಲಿದ್ದು, ಸರ್ಕಾರ ಈಗಲೇ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಯುವ ಮತದಾರರು ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ,...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...