ನೀಟ್ ಅಕ್ರಮ; ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡಿ: ಪಿಎಂಗೆ ದೀಪ್ಕೆ ಬಹಿರಂಗ ಪತ್ರ

Date:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಪರೀಕ್ಷೆ ರದ್ದಾದ ಕಾರಣ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಬಹಿರಂಗ ಪತ್ರ ಬರೆದಿದ್ದಾರೆ.

- Advertisement -

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳು ಬೆಳಕಿಗೆ ಬಂದ ಬಳಿಕ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಮೇ 12ರಂದು ಅಧಿಕೃತವಾಗಿ ರದ್ದುಗೊಳಿಸಿದೆ. ಜೂನ್ 21ರಂದು ಮರುಪರೀಕ್ಷೆ ನಡೆಯಲಿದೆ. ಆದರೆ ಪರೀಕ್ಷೆ ರದ್ದಾದ ಬಳಿಕ ಮಾನಸಿಕವಾಗಿ ನೊಂದ ನೀಟ್ ಆಕಾಂಕ್ಷಿಗಳ ಸರಣಿ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಈವರೆಗೆ 10ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾದ ಒತ್ತಡಕ್ಕೆ ಒಳಗಾಗಿ ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ?  ‘ಕಾಕ್ರೋಚ್ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6ರಂದು ಭಾರತಕ್ಕೆ; ಬಂಧಿಸಲಿದೆಯೇ ಮೋದಿ ಸರ್ಕಾರ?

ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಗೆ ದೀಪ್ಕೆ ಬಹಿರಂಗ ಪತ್ರ ಬರೆದಿದ್ದು, “ನಮ್ಮ ದೇಶದ ಭವಿಷ್ಯವನ್ನೇ ಬೆದರಿಸುವ, ನಮ್ಮ ಯುವ ವಿದ್ಯಾರ್ಥಿಗಳ ಜೀವನ ಮತ್ತು ಮಾನಸಿಕ ಆರೋಗ್ಯಕ್ಕೆ ಬೆದರಿಕೆಯಾಗಿರುವ, ಹೆಚ್ಚುತ್ತಿರುವ ಸಮಸ್ಯೆಯ ಬಗ್ಗೆ ನಿಮ್ಮ ತುರ್ತು ಗಮನ ಸೆಳೆಯುವ ನಿಟ್ಟಿನಲ್ಲಿ ನಾನು ಭಾರವಾದ ಹೃದಯದಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ಕಳೆದ ಕೆಲವು ವಾರಗಳಲ್ಲಿ ನಾವು 11 ಯುವ ವಿದ್ಯಾರ್ಥಿಗಳನ್ನು ಕಳೆದುಕೊಂಡಿದ್ದೇವೆ. ಕಳೆದ 48 ಗಂಟೆಗಳಲ್ಲೇ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ಒಂದೆರಡು ದಿನಗಳಲ್ಲಿ ನಡೆಯಲಿರುವ ಮರುಪರೀಕ್ಷೆಯ ಒತ್ತಡದಿಂದಾಗಿ ಯುವಕರು ಈ ವಿನಾಶಕಾರಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ನೀಟ್ ಅಕ್ರಮಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳನ್ನು ನಾನು ವೈಯಕ್ತಿಕವಾಗಿ ಭೇಟಿಯಾಗಿದ್ದೇನೆ. ತಮ್ಮ ಮಗುವನ್ನು ಕಳೆದುಕೊಂಡ ಅಸಹನೀಯ ಭಾವನಾತ್ಮಕ ಆಘಾತ ಮಾತ್ರವಲ್ಲದೆ, ಈ ಕುಟುಂಬಗಳು ಈಗ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ತಮ್ಮ ಮಕ್ಕಳ ಕನಸಿಗೆ ಬೆಂಬಲ ನೀಡಲು, ಮಕ್ಕಳ ಭವಿಷ್ಯಕ್ಕಾಗಿ ಈ ಕುಟುಂಬಗಳು ಅಗಾಧ ಪ್ರಮಾಣದ ಶೈಕ್ಷಣಿಕ ಸಾಲಗಳನ್ನು ತೆಗೆದುಕೊಂಡಿದ್ದರು. ಈಗ ವ್ಯವಸ್ಥೆಯ ವೈಫಲ್ಯದಿಂದಾಗಿ ಅವರೆಲ್ಲ ಕನಸುಗಳು ನುಚ್ಚುನೂರಾಗಿದೆ” ಎಂದು ಹೇಳಿದ್ದಾರೆ.

“ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಜೀವನದ ಎಲ್ಲ ಉಳಿತಾಯ ಹಣವನ್ನು ವ್ಯಯಿಸಿದ, ಸಾಲವನ್ನು ಮಾಡಿಕೊಂಡ ಈ ಕುಟುಂಬಗಳು ಈಗ ಮಕ್ಕಳನ್ನು ಕಳೆದುಕೊಂಡು ಸಂಪೂರ್ಣವಾಗಿ ನಿರ್ಗತಿಕರಾಗಿವೆ. ಈ ನಿಟ್ಟಿನಲ್ಲಿ ಸರ್ಕಾರವು ತಕ್ಷಣ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಶ್ನೆಪತ್ರಿಕೆ ಸೋರಿಕೆಯ ಬಿಕ್ಕಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡ ಎಲ್ಲ ವಿದ್ಯಾರ್ಥಿಗಳ ಕುಟುಂಬಗಳಿಗೆ ಸರ್ಕಾರ ಒಂದು ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿಜೀತ್ ದೀಪ್ಕೆ ಒತ್ತಾಯಿಸಿದ್ದಾರೆ.

ಇನ್ನು ಈ ಪತ್ರದಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದೀಪ್ಕೆ ಒತ್ತಾಯಿಸಿದ್ದಾರೆ. “ಕಾಕ್ರೋಚ್ ಜನತಾ ಪಾರ್ಟಿ ಕಳೆದ ಒಂದು ತಿಂಗಳಿನಿಂದ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿದೆ, ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಈ ಜೀವಗಳ ನಷ್ಟಕ್ಕೆ ಯಾರಾದರೂ ಹೊಣೆಗಾರಿಕೆಯನ್ನು ಹೊರಬೇಕು ಎಂಬುದಷ್ಟೇ ವಿದ್ಯಾರ್ಥಿಗಳಾದ ನಮ್ಮ ಆಶಯ. ನಮ್ಮ ಶೈಕ್ಷಣಿಕ ವ್ಯವಸ್ಥೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರ ನಂಬಿಕೆಯನ್ನು ಮತ್ತೆ ಗಳಿಸಲು ಹೊಣೆಗಾರಿಕೆ ಹೊರುವುದು ಅತ್ಯಗತ್ಯ. ಆದ್ದರಿಂದ, ಶಿಕ್ಷಣ ಸಚಿವರನ್ನು ವಜಾಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...