ರಾಮಮಂದಿರ ದೇಣಿಗೆ ಲೂಟಿಯ ವರದಿಗಾರ ಅಭಿಷೇಕ್‌ ಉಪಾಧ್ಯಾಯಗೆ ಕಿರುಕುಳ; ಸುಪ್ರೀಂ ಮೊರೆ ಹೋದ ಪತ್ರಕರ್ತ

Date:

ಅಯೋಧ್ಯೆಯ ರಾಮಮಂದಿರ ದೇಣಿಗೆ ಸಂಗ್ರಹದಲ್ಲಿ ನಡೆದ ಅಕ್ರಮ ಹಾಗೂ ಅವ್ಯವಹಾರಗಳ ಕುರಿತು ವರದಿ ಮಾಡಿದ್ದ ಮೊದಲ ಪತ್ರಕರ್ತ ಅಭಿಷೇಕ್‌ ಉಪಾಧ್ಯಾಯ, ತಮ್ಮ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ FIR ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

- Advertisement -

ಗಾಜಿಯಾಬಾದ್‌ನ ಇಂದಿರಾಪುರಂ ಪೊಲೀಸ್‌ ಠಾಣೆಯಲ್ಲಿ ಆಗಸ್ಟ್‌ 18ರಂದು ದಾಖಲಿಸಿರುವ ಎಫ್‌ಐಆರ್‌ ಸುಳ್ಳು ಹಾಗೂ ಕಟ್ಟುಕಥೆಯ ಆರೋಪಗಳನ್ನು ಆಧರಿಸಿದೆ ಎಂದು ಉಪಾಧ್ಯಾಯ ಆರೋಪಿಸಿದ್ದಾರೆ. ತಮ್ಮ ಸ್ವತಂತ್ರ ತನಿಖಾ ಪತ್ರಿಕೋದ್ಯಮವನ್ನು ಹತ್ತಿಕ್ಕಲು ಮತ್ತು ಕಿರುಕುಳ ನೀಡುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಅರ್ಜಿಯಲ್ಲಿ ಹೇಳಿದ್ದಾರೆ. ಎಫ್‌ಐಆರ್‌ ರದ್ದುಗೊಳಿಸುವಂತೆ ಹಾಗೂ ಬಂಧನ ಸೇರಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡುವಂತೆ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಏನಿದು FIR ಕಥೆ?

ಆಗಸ್ಟ್‌ 18ರಂದು ಶಿಪ್ರಾ ಮಾಲ್‌ ಸಮೀಪ ಬೈಕ್‌ಗೆ ಬಾಲೆನೊ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಕಾರಿನ ಚಾಲಕ ತನಗೆ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರ ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಕಾರಿಗೆ ಸಂಬಂಧಿಸಿದಂತೆ ಅಭಿಷೇಕ್‌ ಉಪಾಧ್ಯಾಯ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಈ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಆದರೆ ಆರೋಪಗಳನ್ನು ಉಪಾಧ್ಯಾಯ ನಿರಾಕರಿಸಿದ್ದಾರೆ. ಆಗಸ್ಟ್‌ 18ರಂದು ಮಗಳ ಶಾಲೆಯಿಂದ ವಾಪಸ್‌ ಬರುತ್ತಿದ್ದಾಗ ಶಿಪ್ರಾ ಮಾಲ್‌ ಬಳಿ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬರು ತಮ್ಮ ಕಾರಿನ ಬಳಿ ಗಲಾಟೆ ಸೃಷ್ಟಿಸಿದ್ದರು. ಯಾವುದೇ ಡಿಕ್ಕಿ ಅಥವಾ ದೈಹಿಕ ಘರ್ಷಣೆ ನಡೆದಿಲ್ಲ. ಮಗಳು ಕಾರಿನಲ್ಲಿದ್ದ ಕಾರಣ ಯಾವುದೇ ಜಗಳದಲ್ಲಿ ತೊಡಗದೆ ಸ್ಥಳದಿಂದ ತೆರಳಿದ್ದಾಗಿ ಅವರು ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಬೈಕ್‌ ಸಂಖ್ಯೆಯಲ್ಲೂ ವ್ಯತ್ಯಾಸವಿದೆ ಎಂದು ಉಪಾಧ್ಯಾಯ ಅರ್ಜಿಯಲ್ಲಿ ತಿಳಿಸಿದ್ದಾರೆ. ದೂರಿನಲ್ಲಿ ಸ್ಪ್ಲೆಂಡರ್‌ ಬೈಕ್‌ ಎಂದು ಉಲ್ಲೇಖಿಸಲಾಗಿದ್ದರೂ, ನೀಡಿರುವ ನೋಂದಣಿ ಸಂಖ್ಯೆ ಮತ್ತೊಂದು ಬೈಕ್‌ಗೆ ಸೇರಿದೆ ಎಂದು ಅವರು ಹೇಳಿದ್ದಾರೆ.

ಘಟನೆ ನಡೆದ ಸ್ಥಳದ ಸಮೀಪದ ಅಂಗಡಿಗಳ ಮಾಲೀಕರನ್ನು ಪೊಲೀಸರು ಸಂಪರ್ಕಿಸಿ ಸಿಸಿಟಿವಿ ದೃಶ್ಯಗಳನ್ನು ಅಳಿಸುವಂತೆ ಅಥವಾ ನೀಡದಂತೆ ಒತ್ತಡ ಹೇರಿದ್ದಾರೆ ಎಂಬ ಗಂಭೀರ ಆರೋಪವನ್ನೂ ಉಪಾಧ್ಯಾಯ ಮಾಡಿದ್ದಾರೆ. ಸಿಸಿಟಿವಿ ದೃಶ್ಯಗಳು ಸೇರಿದಂತೆ ಎಲ್ಲ ಎಲೆಕ್ಟ್ರಾನಿಕ್‌ ಸಾಕ್ಷ್ಯಗಳನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್‌ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪುನಃಪುನಃ ಮನವಿ ಮಾಡಿದರೂ ಎಫ್‌ಐಆರ್‌ನ ಸಂಪೂರ್ಣ ಪ್ರತಿಯನ್ನು ತಮಗೆ ನೀಡಿಲ್ಲ ಎಂದು ಉಪಾಧ್ಯಾಯ ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ನ ಹಿಂದಿನ ನಿರ್ದೇಶನಗಳಂತೆ ಎಫ್‌ಐಆರ್‌ ಅನ್ನು ವೆಬ್‌ಸೈಟ್‌ನಲ್ಲೂ ಅಪ್‌ಲೋಡ್‌ ಮಾಡಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಆಗಸ್ಟ್‌ 20ರ ರಾತ್ರಿ ಸುಮಾರು 12 ಮಂದಿ ಪೊಲೀಸರ ತಂಡ ತಮ್ಮ ಮನೆಗೆ ಬಂದಿತ್ತು. ಆ ವೇಳೆ ತಾವು ಮನೆಯಲ್ಲಿ ಇರಲಿಲ್ಲ. ಪತ್ನಿ ಹಾಗೂ ಇಬ್ಬರು ಪುತ್ರಿಯರು ಮಾತ್ರ ಮನೆಯಲ್ಲಿದ್ದರು ಎಂದು ಉಪಾಧ್ಯಾಯ ಹೇಳಿದ್ದಾರೆ. ಈ ಬೆಳವಣಿಗೆಯಿಂದ ಬಂಧನದ ಭೀತಿ ಎದುರಾಗಿದೆ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ದೇಣಿಗೆ ಹಗರಣ

ತಮ್ಮ ವಿರುದ್ಧದ ಪೊಲೀಸ್‌ ಕ್ರಮವನ್ನು ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮಗಳ ಕುರಿತು ತಾವು ನಡೆಸಿರುವ ತನಿಖಾ ವರದಿಗಳಿಗೆ ಸಂಬಂಧಿಸಿ ನೋಡಬೇಕಿದೆ ಎಂದು ಉಪಾಧ್ಯಾಯ ಹೇಳಿದ್ದಾರೆ. ರಾಮಮಂದಿರ ದೇಣಿಗೆ ವಿಚಾರದಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳು ಸೇರಿದಂತೆ ಸರ್ಕಾರದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ವಿರುದ್ಧದ ಆರೋಪಗಳ ಕುರಿತು ತಮ್ಮ ಇತ್ತೀಚಿನ ವರದಿಗಳನ್ನು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಬಂಧನದ ಭೀತಿ ಇರುವುದರಿಂದ ಅಲಹಾಬಾದ್‌ ಹೈಕೋರ್ಟ್‌ ಮೊರೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. ಎಫ್‌ಐಆರ್‌ ರದ್ದುಗೊಳಿಸುವುದು ತಮ್ಮ ಪ್ರಮುಖ ಬೇಡಿಕೆಯಾಗಿದ್ದು, ಮಧ್ಯಂತರವಾಗಿ ಬಂಧನ ಸೇರಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡುವಂತೆ ಕೋರಿದ್ದಾರೆ.

ಪರ್ಯಾಯವಾಗಿ, ಪ್ರಕರಣದ ತನಿಖೆಯನ್ನು ಉತ್ತರ ಪ್ರದೇಶ ಪೊಲೀಸರ ಬದಲಾಗಿ ಸಿಬಿಐ ಸೇರಿದಂತೆ ಬೇರೆ ತನಿಖಾ ಸಂಸ್ಥೆಗೆ ವಹಿಸುವಂತೆಯೂ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕಾನೂನುಬದ್ಧ ಯಾವುದೇ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧವಿರುವುದಾಗಿ ಉಪಾಧ್ಯಾಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...