370ನೇ ವಿಧಿ | ದುಃಖದಾಯಕ, ದುರದೃಷ್ಟಕರ: ಗುಲಾಂ ನಬಿ ಆಜಾದ್

Date:

ಸಂವಿಧಾನದ 370 ನೇ ವಿಧಿಯಡಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪನ್ನು “ದುಃಖದಾಯಕ ಮತ್ತು ದುರದೃಷ್ಟಕರ” ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಸೋಮವಾರ ಶ್ರೀನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

- Advertisement -

‘ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠ ನೀಡಿದ ತೀರ್ಪಿನಿಂದ ಈ ಭಾಗದ ಜನರು ಸಂತುಷ್ಟರಾಗಿಲ್ಲ. ಆದರೆ ನಾವು ತೀರ್ಪನ್ನು ಒಪ್ಪಿಕೊಳ್ಳಬೇಕು’ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ ಮತ್ತು ಮುಂದಿನ ವರ್ಷ ಸೆಪ್ಟೆಂಬರ್ 30 ರೊಳಗೆ ವಿಧಾನಸಭೆಗೆ ಚುನಾವಣೆ ನಡೆಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.

ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಗೃಹಬಂಧನ ಆರೋಪ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯ ಕುರಿತು ಸುಪ್ರಿಂ ಕೋರ್ಟ್ ತೀರ್ಪು ನೀಡುವ ಮೊದಲು ಮೊದಲು ತಮ್ಮನ್ನು ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದರು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.

ಎನ್‌ಸಿ ವಕ್ತಾರ ಸಾರಾ ಹಯಾತ್ ಶಾ ಅವರು ಅಬ್ದುಲ್ಲಾ ನಿವಾಸದ ಹಸಿರು ಬಣ್ಣದ ಗೇಟ್‌ನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪಿಡಿಪಿ ಹೇಳಿದ ನಂತರ ಒಮರ್ ಅಬ್ದುಲ್ಲಾ ಹೀಗೆ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಮುನ್ನವೇ, ಪೊಲೀಸರು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ನಿವಾಸದ ಬಾಗಿಲುಗಳನ್ನು ಮುಚ್ಚಿದ್ದಾರೆ ಮತ್ತು ಅವರನ್ನು ಅಕ್ರಮ ಗೃಹಬಂಧನದಲ್ಲಿ ಇರಿಸಿದ್ದಾರೆ” ಎಂದು ಪಿಡಿಪಿ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂಬ ಹೇಳಿಕೆಯನ್ನು ನಿರಾಕರಿಸಿದ್ದಾರೆ ಮತ್ತು ಅದನ್ನು “ಆಧಾರರಹಿತ” ಎಂದಿದ್ದಾರೆ.

‘ಇದು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಕಾರಣಗಳಿಂದ ಯಾರನ್ನೂ ಗೃಹಬಂಧನದಲ್ಲಿ ಇರಿಸಲಾಗಿಲ್ಲ ಅಥವಾ ಬಂಧಿಸಲಾಗಿಲ್ಲ. ಇದು ವದಂತಿಗಳನ್ನು ಹರಡುವ ಪ್ರಯತ್ನವಾಗಿದೆ’ ಎಂದು ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...