ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

Date:

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್ ಸುಗತನ್ ತಲೆಮರೆಸಿಕೊಂಡಿದ್ದ ಸಮಯದಲ್ಲಿ ಅವರ ನಕಲಿ ಸಹಿ ಹಾಕಿ ಹಾಜರಾತಿ ನಮೂದಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ಅಡಿಯಲ್ಲಿ ಪಡೆದ ದಾಖಲೆಗಳನ್ನು ಆಧರಿಸಿ ಎಲ್‌ಡಿಎಫ್ ನಾಯಕರು ಈ ಗಂಭೀರ ಆರೋಪವನ್ನು ಮಾಡಿದ್ದಾರೆ.

- Advertisement -

ಬಿಜೆಪಿ ಕೌನ್ಸಿಲರ್ ಆರ್. ಸುಗತನ್ (ವಾಳೋಟ್ಟುಕೋಣಂ ವಾರ್ಡ್) ಅವರ ವಿರುದ್ಧ ಸುಮಾರು 19 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಮುಖ್ಯವಾಗಿ ವಟ್ಟಿಯೂರ್ಕಾವು ಮತ್ತು ನೆಡುಮಂಗಾಡ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಿಜೆಪಿ ಕೌನ್ಸಿಲರ್ ವಿರುದ್ಧ ಪ್ರಕರಣಗಳು ನಮೂದಾಗಿವೆ. ಎರಡು ಕೊಲೆ ಯತ್ನ ಪ್ರಕರಣಗಳೂ ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇದನ್ನೂ ಓದಿ: ಕೇರಳ | ಕೋಮು ವಿಭಜನೆ ಉತ್ತೇಜಿಸುವ ಭಾಷಣದ ಮೂಲಕವೇ ಬಿಜೆಪಿ ಪ್ರಚಾರ ಶುರು

ಇತ್ತೀಚೆಗೆ ವ್ಯಕ್ತಿಯೊಬ್ಬನ ತಲೆಗೆ ಹೊಡೆದು ಕೊಲೆ ಯತ್ನ ನಡೆಸಿದ ಪ್ರಕರಣದಲ್ಲಿ ಪೊಲೀಸ್ ಬಂಧನದಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದರು. ಈ ಅವಧಿಯಲ್ಲಿ ಪಾಲಿಕೆಯಲ್ಲಿ ನಡೆದ ಮೂರು ಪ್ರಮುಖ ಸಭೆಗಳಿಗೆ (ಫೆಬ್ರವರಿ 26, ಮಾರ್ಚ್ 11 ಮತ್ತು ಏಪ್ರಿಲ್ 27) ಸುಗತನ್ ಗೈರುಹಾಜರಾಗಿದ್ದರು.

ನಿಯಮದ ಪ್ರಕಾರ, ಕೌನ್ಸಿಲರ್ ಒಬ್ಬರು ಸತತವಾಗಿ 3 ಸಭೆಗಳಿಗೆ ಗೈರುಹಾಜರಾದರೆ ಅವರ ಕೌನ್ಸಿಲರ್ ಸದಸ್ಯತ್ವ ರದ್ದಾಗುವ ಸಾಧ್ಯತೆ ಇರುತ್ತದೆ. ಈ ಸದಸ್ಯತ್ವ ರದ್ದತಿಯನ್ನು ತಪ್ಪಿಸಲು ಮತ್ತು ಅವರು ಸಭೆಗೆ ಬಂದಿದ್ದರು ಎಂದು ತೋರಿಸಲು, ಮೇಯರ್ ಕಚೇರಿಯಲ್ಲಿದ್ದ ಹಾಜರಾತಿ ಪುಸ್ತಕದಲ್ಲಿ ಅವರ ನಕಲಿ ಸಹಿ (Forged Signature) ಹಾಕಲಾಗಿದೆ ಎಂಬುದು ಎಲ್‌ಡಿಎಫ್ ನಾಯಕರ ಪ್ರಮುಖ ಆರೋಪವಾಗಿದೆ.

ದೂರು ದಾಖಲಾದ ಬೆನ್ನಲ್ಲೇ ಪೊಲೀಸರು ಹಾಜರಾತಿ ಪುಸ್ತಕದಲ್ಲಿನ ಸಹಿಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ಮುಂದಾಗಿದ್ದಾರೆ. ಮತ್ತೊಂದೆಡೆ, ತಮ್ಮ ಮೇಲಿನ ನಕಲಿ ಸಹಿ ಆರೋಪವನ್ನು ಕೌನ್ಸಿಲರ್ ಆರ್. ಸುಗತನ್ ತಳ್ಳಿಹಾಕಿದ್ದು, ಪೋಲಿಸರ ತನಿಖೆಗೆ ಮತ್ತು ಸಿಸಿಟಿವಿ ತನಿಖೆಗೆ ಸಿದ್ಧರಿರುವುದಾಗಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...

ಬೀದರ್‌ | ಮೊಬೈಲ್‌ಗಿಂತ ಕಲೆಯತ್ತ ಮಕ್ಕಳ ಆಸಕ್ತಿ ಹೆಚ್ಚಲಿ: ಸಿದ್ರಾಮ ಸಿಂಧೆ

ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ...