ಶೈಕ್ಷಣಿಕ ಒತ್ತಡ; 13 ವರ್ಷದ ಬಾಲಕಿ ಆತ್ಮಹತ್ಯೆ

Date:

13 ವರ್ಷದ ಬಾಲಕಿಯೊಬ್ಬಳು ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಬಾಲಕಿಯು ತನ್ನ ಡೈರಿಯಲ್ಲಿ ಶೈಕ್ಷಣಿಕ ಒತ್ತಡಕ್ಕೆ ಒಳಗಾಗಿದ್ದಾಗಿಯೂ, ತನ್ನ ಸಾಮಾಜಿಕ ವಲಯದಿಂದ ದೂರ ಉಳಿದಿರುವುದಾಗಿಯೂ ಬರೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಪೊಲೀಸರ ಪ್ರಕಾರ, ಬುಧವಾರ ರಾತ್ರಿ ಅದಿತಿ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರುದಿನ ಬೆಳಿಗ್ಗೆ, ಆಕೆಯ ತಾಯಿ ಆಕೆಯನ್ನು ಎಬ್ಬಿಸಲು ಕೋಣೆಗೆ ಹೋದಾಗ, ಬಾಗಿಲು ಲಾಕ್ ಆಗಿರುವುದನ್ನು ಗಮನಿಸಿದ್ದಾರೆ. ಪದೇ ಪದೇ ಕರೆದರೂ, ಅದಿತಿ ಬಾಗಿಲು ತೆರೆಯಲಿಲ್ಲ. ಕಿಟಕಿಯಿಂದ ನೋಡಿದಾಗ, ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ್ದಾರೆ. ಬಳಿಕ, ಪೊಲೀಸರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಸ್ಥಳಕ್ಕೆ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆಕೆಯ ಡೈರಿ ಸೇರಿದಂತೆ ಕೆಲವು ಮುಖ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಆಕೆಯ ಡೈರಿಯಲ್ಲಿ; ‘ಗುರುವಾರ ಪರೀಕ್ಷೆ ಇದೆ. ಎಲ್ಲಿಂದ ಅಧ್ಯಯನವನ್ನು ಪ್ರಾರಂಭಿಸಬೇಕೆಂದು ತಿಳಿಯುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ. ಮಾತ್ರವಲ್ಲ, ತನ್ನ ಸ್ನೇಹಿತ ವಲಯದಿಂದಲೂ ತಾನು ಹೊರಗುಳಿದಿರುವುದಾಗಿಯೂ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದಿತಿ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಕೆಯ ತಾಯಿ ಹರ್ದೋಯ್‌ನಲ್ಲಿರುವ ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತಂದೆ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...