ಟ್ರ್ಯಾಕ್ಟರ್ ಟ್ರಾಲಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿ ಎಂಟು ಮಂದಿ ಯಾತ್ರಿಕರು ಸಾವನ್ನಪ್ಪಿರುವ, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಮೃತರಲ್ಲಿ ಇಬ್ಬರು ಮಕ್ಕಳಾಗಿದ್ದು, ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರಲ್ಲಿ 12 ಮಂದಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಚಾಕುವಿನಿಂದ ಇರಿದು ಎಎನ್‌ಐ ಪತ್ರಕರ್ತನ ಕೊಲೆ
ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಬೆಳಗಿನ ಜಾವ 2.10ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ದಿನೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.
VIDEO | Bulandshahr, Uttar Pradesh: Eight people were killed and 43 others injured after a truck rammed into a tractor-trolley carrying pilgrims in the early hours of Monday.
— Press Trust of India (@PTI_News) August 25, 2025
SSP Dinesh Kumar Singh said, “At around 2:15 am, a tractor carrying over 60 people was hit by a tanker… pic.twitter.com/Tb0A3svlZt
“ಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದಿಂದ ರಾಜಸ್ಥಾನದ ಜಹರ್‌ಪೀರ್‌ಗೆ ತೀರ್ಥಯಾತ್ರೆಗೆ ಹೊರಟ ಯಾತ್ರಿಕರು ಇವರಾಗಿದ್ದು ಟ್ರಾಕ್ಟರ್ ಟ್ರಾಲಿಯಲ್ಲಿ 61 ಮಂದಿ ಇದ್ದರು. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಅವರು ವೆಂಟಿಲೇಟರ್ ಸಹಾಯದಲ್ಲಿದ್ದಾರೆ” ಎಂದು ಸಿಂಗ್ ವಿವರಿಸಿದ್ದಾರೆ.
