ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; ರಸ್ತೆ ಬದಿ ಕೆಲಸ ಮಾಡುತ್ತಿದ್ದ 6 ಮಂದಿ ಪೌರ ಕಾರ್ಮಿಕರ ದುರ್ಮರಣ

Date:

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಯ ಒಂದು ಭಾಗವನ್ನು ಸ್ವಚ್ಛಗೊಳಿಸುತ್ತಿದ್ದ ಐವರು ಪೌರ ಕಾರ್ಮಿಕರು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಹರಿಯಾಣದ ನುಹ್‌ ಜಿಲ್ಲೆಯ ಇಬ್ರಾಹಿಂ ಬಾಸ್ ಗ್ರಾಮದ ಬಳಿ ನಡೆದಿದೆ.

- Advertisement -

ಶನಿವಾರ ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಎಕ್ಸ್‌ಪ್ರೆಸ್‌ವೇನ ಒಂದು ಭಾಗವನ್ನು ಪೌರ ಕಾರ್ಮಿಕರು ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ, ವೇಗವಾಗಿ ಬಂದ ಪಿಕಪ್ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಆರು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅಪಘಾತ ಎಸಗಿರುವ ವಾಹನ ಚಾಲಕ, ವಾಹನವನ್ನು ಸ್ಥಳದಲ್ಲೇ ಬಿಟ್ಟು, ಪರಾರಿಯಾಗಿದ್ದಾನೆ. ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಗೊಂಡವರನ್ನು ಅಸ್ಪತ್ರೆಗೆ ಕಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪೊಲೀಸ್‌ ತಂಡಗಳು ತನಿಖೆ ನಡೆಸುತ್ತಿವೆ ಎಂದು ಫಿರೋಜ್‌ಪುರ್ ಝಿರ್ಕಾದ ಡಿಎಸ್‌ಪಿ ಅಜೈಬ್ ಸಿಂಗ್ ಹೇಳಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಸಾವನ್ನಪ್ಪಿದ ಕಾರ್ಮಿಕರಲ್ಲಿ ಐವರು ಖೇರಿ ಕಲಾನ್ ಗ್ರಾಮಕ್ಕೆ ಸೇರಿದವರು. ಒಬ್ಬರು ಜಿಮ್ರಾವತ್ ಗ್ರಾಮಕ್ಕೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಬರಪೀಡಿತ ಪ್ರದೇಶದಲ್ಲಿ ಕೃಷಿ ಪುನರುಜ್ಜೀವನಕ್ಕೆ ನಾಂದಿ ಹಾಡಿದ ವಿಧವೆಯರು, ಒಂಟಿ ಮಹಿಳೆಯರು

ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. “ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಘಟನೆ ಬಗ್ಗೆ ನಿಖರ ಮಾಹಿತಿಗಾಗಿ ಎಲ್ಲ ಸಂಭಾವ್ಯ ಪುರಾವೆಗಳನ್ನು ಸಂಗ್ರಹಿಸುತ್ತಿದ್ದೇವೆ. ಎಲ್ಲ ಆಯಾಮಗಳಲ್ಲಿಯೂ ಕೂಲಂಕಷವಾಗಿ ತನಿಖೆ ನಡೆಸುತ್ತೇವೆ” ಎಂದು ಪರಿಶೀಲಿಸಲಾಗುತ್ತಿದೆ” ಎಂದು ಫಿರೋಜ್‌ಪುರ್ ಝಿರ್ಕಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (SHO) ಅಮನ್ ಸಿಂಗ್ ಹೇಳಿದ್ದಾರೆ.

ದೆಹಲಿಯಿಂದ ಅಲ್ವಾರ್ ಕಡೆಗೆ ಅತಿ ವೇಗವಾಗಿ ಹೋಗುತ್ತಿದ್ದ ಪಿಕಪ್ ವ್ಯಾನ್, ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಮಿಕರ ಗುಂಪಿನ ಮೇಲೆ ನುಗ್ಗಿದೆ ಎಂದು ಹೇಳಲಾಗಿದೆ.

ಈ ಘಟನೆಯು ಹೈ-ಸ್ಪೀಡ್ ಎಕ್ಸ್‌ಪ್ರೆಸ್‌ವೇಗಳಲ್ಲಿ ಕೆಲಸ ಮಾಡುವ ನಿರ್ವಹಣಾ ಸಿಬ್ಬಂದಿಯ ಸುರಕ್ಷತಾ ಕ್ರಮಗಳ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ. ಇದು ಉತ್ತಮ ರಕ್ಷಣಾತ್ಮಕ ಪ್ರೋಟೋಕಾಲ್‌ಗಳ ತುರ್ತು ಅಗತ್ಯವನ್ನು ಎತ್ತಿ ತೋರಿಸುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...