ಆರೋಪಿಯನ್ನು ಹಿಡಿದರೂ FIRನಲ್ಲಿ ಹೆಸರಿಲ್ಲ; ಯುಪಿ ಪೊಲೀಸರ ನಡೆಗೆ ಸುಪ್ರೀಂ ಅಸಮಾಧಾನ

Date:

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ತನಿಖೆಯಲ್ಲಿ ಉತ್ತರ ಪ್ರದೇಶ ಪೊಲೀಸರ ನಡೆಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯದ ಎಲ್ಲ ಪ್ರಕರಣಗಳ ತನಿಖೆಯನ್ನೂ ಸಿಬಿಐಗೆ ವಹಿಸಿಬಿಡಬೇಕಾಗುತ್ತದೆ ಎಂದು ಕಟುವಾಗಿ ಟೀಕಿಸಿದೆ.

- Advertisement -

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.30ರಂದು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್‌ದೇವ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು. ಪ್ರಕರಣದ ಅರ್ಜಿದಾರ ಮಹಿಳೆಯೇ ನ್ಯಾಯಾಲಯದಲ್ಲಿ ಖುದ್ದು ಹಾಜರಾಗಿ ವಾದ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮಹಿಳೆಯ ದೂರಿನ ಪ್ರಕಾರ, ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬರು ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು. ತಕ್ಷಣವೇ ಮಹಿಳೆ ಆತನನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದರು. ಆದರೆ, ಪೊಲೀಸರು ದಾಖಲಿಸಿದ FIR ನಲ್ಲಿ ಆರೋಪಿಯ ಹೆಸರನ್ನು ಉಲ್ಲೇಖಿಸದೆ, ‘ಅಪರಿಚಿತ ಬೈಕ್ ಸವಾರ’ ಎಂದು ನಮೂದಿಸಿದ್ದರು. ಆರೋಪಿಯ ಹೆಸರಿನ ಕಾಲಂ ಅನ್ನೂ ಖಾಲಿ ಬಿಡಲಾಗಿತ್ತು.

ಈ ಬಗ್ಗೆ ಪ್ರಶ್ನಿಸಿದ ನ್ಯಾಯಪೀಠ, ಸ್ಥಳದಲ್ಲೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರೂ ಎಫ್‌ಐಆರ್‌ನಲ್ಲಿ ಆತನ ಹೆಸರನ್ನು ಏಕೆ ದಾಖಲಿಸಿಲ್ಲ ಎಂದು ಪೊಲೀಸರ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು. “ಪ್ರತಿಯೊಂದು ವಿಚಾರದಲ್ಲೂ ನಿಮಗೆ ಯಾವುದೋ ಉದ್ದೇಶವಿದೆ. ಈ ರೀತಿ ನಡೆದುಕೊಂಡರೆ ಜನರು ಪೊಲೀಸರನ್ನು ಹೇಗೆ ನಂಬುತ್ತಾರೆ? ಉತ್ತರ ಪ್ರದೇಶ ಪೊಲೀಸರ ಎಲ್ಲ ತನಿಖೆಗಳನ್ನೂ ಸಿಬಿಐಗೆ ವಹಿಸಿಬಿಡಬಹುದು. ಪೊಲೀಸರನ್ನೇ ವಿಸರ್ಜಿಸಿಬಿಡಬಹುದು. ಈ ಅಸಂಬದ್ಧ ನಡೆಗೆ ಕೊನೆ ಹಾಡಬೇಕಿದೆ” ಎಂದು ಪೀಠ ಕಟುವಾಗಿ ಹೇಳಿರುವುದಾಗಿ ಬಾರ್‌ ಆ್ಯಂಡ್‌ ಬೆಂಚ್ ವರದಿ ಮಾಡಿದೆ.

ಅಲಹಾಬಾದ್‌ ಹೈಕೋರ್ಟ್‌ ಪ್ರಕರಣದ ಸ್ಥಿತಿಗತಿ ವರದಿ ಕೇಳಿದ ಬಳಿಕ ಪೊಲೀಸರು ತಮ್ಮ ವರದಿಯಲ್ಲಿ ಬದಲಾವಣೆ ಮಾಡಿ, ಬೈಕ್ ಸವಾರನ ಹೆಸರನ್ನು ‘ತುಷಾರ್’ ಎಂದು ಸೇರಿಸಿದ್ದರು. ಬಳಿಕ ಆತನಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಅಲ್ಲದೆ, ವಶಪಡಿಸಿಕೊಂಡ ಬೈಕ್‌ಗೆ ನೋಂದಣಿ ಫಲಕವೇ ಇರಲಿಲ್ಲ. ಆದರೆ, ತನಿಖೆಯ ಸಂದರ್ಭದಲ್ಲಿ ಅದಕ್ಕೆ ನೋಂದಣಿ ಸಂಖ್ಯೆ ನೀಡಲಾಗಿದೆ ಎಂದೂ ಅವರು ದೂರಿದ್ದಾರೆ.

ಇದನ್ನೂ ಓದಿ: ಬಿಹಾರ ಪೊಲೀಸರಿಂದ ಕೊಲೆಯಾದ ಭರತ್ ತಿವಾರಿ: ‘ಯುಪಿ ಮಾಡೆಲ್‌’ನ ಹೊಸ ಆಯಾಮವೇ?

ಪೊಲೀಸರು ಸಲ್ಲಿಸಿರುವ ಪ್ರಾಥಮಿಕ ವರದಿ ಪಕ್ಷಪಾತದಿಂದ ಕೂಡಿದೆ ಎಂದು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಆರೋಪಿಯನ್ನು ಸ್ಥಳದಲ್ಲೇ ಹಿಡಿದಿದ್ದರೂ ಎಫ್‌ಐಆರ್‌ನಲ್ಲಿ ಆತನ ಹೆಸರನ್ನು ದಾಖಲಿಸಲು ನಿಮಗೆ ಇಷ್ಟವಿರಲಿಲ್ಲವೇ? ಪರಿಸ್ಥಿತಿಗೆ ಅನುಗುಣವಾಗಿ ಹೆಸರನ್ನು ಬದಲಿಸಿ, ನಿಮಗೆ ಬೇಕಾದವರ ಹೆಸರನ್ನು ಸೇರಿಸುವ ಉದ್ದೇಶವಿತ್ತೇ? ಅಲ್ಲಿ ನಡೆಯುತ್ತಿರುವುದು ಇದೇನಾ?” ಎಂದು ಪೊಲೀಸರ ನಡೆಯನ್ನು ಪ್ರಶ್ನಿಸಿತು.

ಉತ್ತರ ಪ್ರದೇಶ ಪೊಲೀಸರು ಸಲ್ಲಿಸಿದ್ದ ಪ್ರತಿಕ್ರಿಯಾ ಅಫಿಡವಿಟ್‌ ಕೂಡ ಸಮಾಧಾನಕರವಾಗಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಸ್ಥಳದಲ್ಲೇ ಆರೋಪಿಯನ್ನು ಹಿಡಿದಿದ್ದರೂ ಎಫ್‌ಐಆರ್‌ನಲ್ಲಿ ಅಪರಿಚಿತ ವ್ಯಕ್ತಿ ಎಂದು ನಮೂದಿಸಲು ಕಾರಣವೇನು ಎಂಬುದನ್ನು ಮುಂದಿನ ವಿಚಾರಣೆಯಲ್ಲಿ ವಿವರಿಸುವಂತೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗೆ ಹಾಜರಾಗಲು ಸೂಚಿಸಿತು.

ಅಲ್ಲದೆ, ಎಫ್‌ಐಆರ್‌ನಲ್ಲಿ ಆರಂಭದಲ್ಲಿ ತುಷಾರ್ ಹೆಸರನ್ನು ಕೈಬಿಟ್ಟು, ನಂತರದ ಅಫಿಡವಿಟ್‌ನಲ್ಲಿ ಆತನ ಹೆಸರನ್ನು ಸೇರಿಸಿದ್ದೇಕೆ ಎಂಬುದಕ್ಕೂ ವಿವರಣೆ ನೀಡುವಂತೆ ಪೊಲೀಸರಿಗೆ ನಿರ್ದೇಶನ ನೀಡಿತು. ಈ ಸಂಬಂಧ ಹೊಸದಾಗಿ ಅಫಿಡವಿಟ್‌ ಸಲ್ಲಿಸುವಂತೆಯೂ ಪೀಠ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...

ಗ್ಯಾನೇಶ್ ಕುಮಾರ್ ವಿರುದ್ಧ ಅ. 2ರಂದು ಬೃಹತ್ ಪ್ರತಿಭಟನೆ: ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್

ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತ ಕಾರ್ಯವೈಖರಿಯನ್ನು ಒತ್ತಾಯಿಸಿ ಹಾಗೂ ಮುಖ್ಯ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...