ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋ‍ಷಿ

Date:

ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಜ್ಞಾನಶೇಖರನ್ ದೋಷಿ ಎಂದು ಚೆನ್ನೈ ಮಹಿಳಾ ನ್ಯಾಯಾಲಯ ತೀರ್ಪು ನೀಡಿದೆ. ಈ ಘಟನೆ ನಡೆದ ಕೇವಲ ಐದು ತಿಂಗಳಲ್ಲಿ ತೀರ್ಪು ಹೊರಬಿದ್ದಿದೆ.

- Advertisement -

ಚೆನ್ನೈ ಮಹಿಳಾ ನ್ಯಾಯಾಲಯದ ನ್ಯಾಯಾಧೀಶೆ ರಾಜಲಕ್ಷ್ಮಿ ಬುಧವಾರ(ಮೇ 28) ಈ ತೀರ್ಪು ನೀಡಿದ್ದಾರೆ. ಜ್ಞಾನಶೇಖರನ್ ವಿರುದ್ಧ ದಾಖಲಾಗಿರುವ ಎಲ್ಲಾ 11 ಆರೋಪಗಳಲ್ಲಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ. ಜೂನ್ 2ರಂದು ಶಿಕ್ಷೆ ಪ್ರಕಟಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜಕೀಯಗೊಳಿಸಲಾಗುತ್ತಿದೆ: ಮದ್ರಾಸ್ ಹೈಕೋರ್ಟ್

2024ರ ಡಿಸೆಂಬರ್ 23ರ ರಾತ್ರಿ ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ತನ್ನ ಗೆಳೆಯನೊಂದಿಗೆ ಇದ್ದಾಗ ಜ್ಞಾನಶೇಖರನ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜ್ಞಾನಶೇಖರನ್ ವಿದ್ಯಾರ್ಥಿನಿಯನ್ನು 40 ನಿಮಿಷಗಳ ಕಾಲ ತನ್ನ ವಶದಲ್ಲಿಟ್ಟುಕೊಂಡು ಆಕೆ ಮತ್ತು ಆಕೆಯ ಗೆಳೆಯನ ವಿಡಿಯೋ ಮಾಡಿ ಆ ದೃಶ್ಯಗಳನ್ನು ಬಳಸಿಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ.

ಲೈಂಗಿಕ ಕಿರುಕುಳ ತಡೆ(PoSH) ಸಮಿತಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಅದೇ ದಿನ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಸೆಂಬರ್ 25ರಂದು ಗ್ರೇಟರ್ ಚೆನ್ನೈ ಪೊಲೀಸರು ಜ್ಞಾನಶೇಖರನ್ ಬಂಧನ ಮಾಡಿದ್ದಾರೆ.

ಚೆನ್ನೈನ ಕೊಟ್ಟೂರುಪುರಂನ ಜ್ಞಾನಶೇಖರನ್ ವಿರುದ್ಧ ಈಗಾಗಲೇ ಭಾರತೀಯ ದಂಡ ಸಂಹಿತೆಯ(ಐಪಿಸಿ) ಅಡಿಯಲ್ಲಿ ಏಳು ಪ್ರಕರಣಗಳು ಬಾಕಿ ಉಳಿದಿವೆ. ಈ ಪ್ರಕರಣಕ್ಕೆ ಸಂಬಂಧಿಸಿ ಹೊಸ ಭಾರತೀಯ ನ್ಯಾಯ ಸಂಹಿತೆ(ಬಿಎನ್ಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡು ಸರ್ಕಾರವು ಕಠಿಣ ಗೂಂಡಾ ಕಾಯ್ದೆಯನ್ನು ಸಹ ಹಾಕಿದೆ. ಈ ಗೂಂಡಾ ಕಾಯ್ದೆಯು ಒಂದು ವರ್ಷದವರೆಗೆ ಜಾಮೀನು ಪಡೆಯಲು ಅವಕಾಶ ನೀಡುವುದಿಲ್ಲ.

ಜ್ಞಾನಶೇಖರನ್ ಬಂಧನದ ನಂತರ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಕಾರ್ಯಕರ್ತರೊಂದಿಗಿನ ಚಿತ್ರಗಳು ಹರಿದಾಡಿ ರಾಜಕೀಯ ವಿವಾದ ಎದ್ದಿತ್ತು. ಆರಂಭದಲ್ಲಿ ಆರೋಪಿ ಡಿಎಂಕೆಗೆ ಸೇರಿದವನು ಎಂಬುದನ್ನು ನಿರಾಕರಿಸಿತ್ತು. ಆದರೆ ವಿಪಕ್ಷ ಹಲವು ಚಿತ್ರಗಳನ್ನು ವೈರಲ್‌ಗೊಳಿಸಿತ್ತು. ಇದರಿಂದಾಗಿ ತೀವ್ರ ರಾಜಕೀಯ ಸಂಚಲನ ಉಂಟಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...