SIR ವಿರೋಧಿ ಪ್ರತಿಭಟನಾಕಾರರ ವಿರುದ್ಧ ಕ್ರಮ; ಸರ್ಕಾರದ ಧೋರಣೆ ವಿರುದ್ಧ 20 ದೇಶಗಳಲ್ಲಿ ಪ್ರತಿಭಟನೆ

Date:

ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಹೊಣೆಗಾರಿಕೆಗೆ ಒತ್ತಾಯಿಸಿ, ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮೇಲೆ ಸರ್ಕಾರ ಕೈಗೊಂಡಿರುವ ಕ್ರಮವನ್ನು ಖಂಡಿಸಿ, ಜಗತ್ತಿನ 20ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನೆ ನಡೆಸಲು ದಕ್ಷಿಣ ಏಷ್ಯಾದ ಸಂಘಟನೆಗಳು ಕರೆ ನೀಡಿದ್ದವು.

- Advertisement -

ಲಂಡನ್, ಕೆನಡಾ ಮತ್ತು ಯುಕೆಯಲ್ಲಿರುವ ದಕ್ಷಿಣ ಏಷ್ಯಾದ ವಿವಿಧ ಸಂಘಟನೆಗಳು ಬಿಡುಗಡೆ ಮಾಡಿದ್ದ ಹೇಳಿಕೆಯಲ್ಲಿ, ಭಾರತದಲ್ಲಿ ನಡೆದ ಪ್ರತಿಭಟನೆಗಳಿಗೆ ಬೆಂಬಲವಾಗಿ ಅಕ್ಟೋಬರ್ 17 ಮತ್ತು 18 ರಂದು ಜಾಗತಿಕವಾಗಿ ಒಗ್ಗಟ್ಟಿನ ಪ್ರತಿಭಟನೆಗಳನ್ನು ನಡೆಸುವಂತೆ ಕರೆ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಅಧಿಕೃತ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವುದರ ವಿರುದ್ಧ ಸಾರ್ವಜನಿಕರು ದೊಡ್ಡ ಮಟ್ಟದಲ್ಲಿ ಒಗ್ಗೂಡಿ ಪ್ರತಿಭಟಿಸುತ್ತಿರುವುದು ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸುತ್ತಿರುವುದನ್ನು ಹತ್ತಿಕ್ಕಲು ಪ್ರಧಾನಿ ನರೇಂದ್ರ ಮೋದಿ ಈ ಕ್ರಮಕ್ಕೆ ಮುಂದಾಗಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು.

Advertisements

ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಮತದಾರರ ಅರ್ಹತಾ ಪ್ರಕ್ರಿಯೆಯ ವಿವರಗಳನ್ನು ಬಹಿರಂಗಪಡಿಸಿದ ತನಿಖಾ ವರದಿಗಳ ಮೂಲಕ ಈ ದೇಶಾದ್ಯಂತ ಅಶಾಂತಿ ಉಂಟಾಗಿತ್ತು. ಈ ಪ್ರಕ್ರಿಯೆಯು 30 ರಾಜ್ಯಗಳಲ್ಲಿ ಸುಮಾರು 13 ಕೋಟಿ ನಾಗರಿಕರನ್ನು (ಭಾರತೀಯ ಮತದಾರರ ಶೇ. 13 ರಷ್ಟು) ಮತದಾರರ ಪಟ್ಟಿಯಿಂದ ಹೊರಹಾಕಲಾಗಿದೆ. ಮತದಾರರ ಪಟ್ಟಿಯಿಂದ ಕೈಬಿಡಲ್ಪಟ್ಟವರಲ್ಲಿ ದೀರ್ಘಕಾಲದಿಂದ ಮತದಾರರಾಗಿರುವವರು ಹಾಗೂ ಅಲ್ಪಸಂಖ್ಯಾತ ಸಮುದಾಯಗಳು, ವಿಶೇಷವಾಗಿ ಮುಸ್ಲಿಮ್ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ನಾಗರಿಕ ಸಮಾಜದ ಗುಂಪುಗಳು ತಿಳಿಸಿದ್ದವು.

ಈ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಪತ್ರಕರ್ತರು, ವಕೀಲರು ಮತ್ತು ಇತರ ಎಲ್ಲರೂ ಎದುರಿಸಿದ ಕಿರುಕುಳದ ಬಗ್ಗೆಯೂ ಹೇಳಿಕೆಯಲ್ಲಿ ವಿವರವಾಗಿ ತಿಳಿಸಲಾಗಿತ್ತು. ಭದ್ರತಾ ಪಡೆಗಳು ಹೊಸ ದೆಹಲಿಯನ್ನು ಭಾರೀ ಬ್ಯಾರಿಕೇಡ್‌ಗಳನ್ನು ಹಾಕಿ ಮಿಲಿಟರಿ ವಲಯವನ್ನಾಗಿ ಮಾರ್ಪಡಿಸಿದ್ದವು. ಒಳಬರುವ ರೈಲುಗಳನ್ನು ರದ್ದುಗೊಳಿಸಲಾಗಿತ್ತು ಮತ್ತು ರಾತ್ರೋರಾತ್ರಿ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವ ಮೂಲಕ ಸಾರಿಗೆ ಸಂಚಾರವನ್ನು ನಿರ್ಬಂಧಿಸಲಾಗಿತ್ತು ಎಂದು ಹೇಳಿಕೆ ತಿಳಿಸಿತ್ತು.

SIR ಪ್ರಕ್ರಿಯೆಯನ್ನು ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ರಾಜಕೀಯ ನಾಯಕರು, ಕಾರ್ಯಕರ್ತರು, ಪತ್ರಕರ್ತರು ಹಾಗೂ ನಾಗರಿಕರನ್ನು ವಶಕ್ಕೆ ಪಡೆಯಲಾಗಿತ್ತು.

SIR ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗಿದೆ ಎಂಬ ಆರೋಪವನ್ನು ವಿರೋಧ ಪಕ್ಷಗಳು ಎತ್ತಿದ್ದವು. ಈ ಹಿನ್ನೆಲೆಯಲ್ಲಿ CJP ಪ್ರತಿಭಟನೆಗೆ ಕರೆ ನೀಡಿತ್ತು. ಆದರೆ, ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರು.

ಪ್ರತಿಭಟನೆಯನ್ನು ತಡೆಯಲು ದೆಹಲಿಯಾದ್ಯಂತ ಭದ್ರತೆ ಬಿಗಿಗೊಳಿಸಲಾಗಿತ್ತು. ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗಿತ್ತು. ಕೆಲವು ಪ್ರದೇಶಗಳಲ್ಲಿ ರೈಲು ಸಂಚಾರಕ್ಕೆ ಅಡಚಣೆಯಾಗಿದ್ದು, ಮೊಬೈಲ್ ಇಂಟರ್ನೆಟ್ ಸೇವೆಯನ್ನೂ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರತಿಭಟನೆಯಲ್ಲಿ ಭಾಗವಹಿಸದ ಸಾಮಾನ್ಯ ಜನರೂ ತೊಂದರೆ ಅನುಭವಿಸಿಬೇಕಾಗಿತ್ತು.

ದೆಹಲಿಯ ಪ್ರಮುಖ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್ ಅನ್ನು ಪ್ರತಿಭಟನೆ ಆರಂಭವಾಗುವ ಮೊದಲೇ ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರು. ನಗರದಲ್ಲಿ 20,000ಕ್ಕೂ ಹೆಚ್ಚು ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ದೆಹಲಿಯ ಗಡಿಗಳು, ಪ್ರಮುಖ ರಸ್ತೆಗಳು ಹಾಗೂ ಕೇಂದ್ರ ಭಾಗಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿತ್ತು. ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳು ಮತ್ತು ಜನರ ಸಂಚಾರದ ಮೇಲೆ ನಿರ್ಬಂಧ ವಿಧಿಸಲಾಗಿತ್ತು. ನಿರ್ಬಂಧಗಳ ನಡುವೆಯೂ ಕನಾಟ್ ಪ್ಲೇಸ್ ಮತ್ತು ಮಹಾತ್ಮ ಗಾಂಧಿ ಸ್ಮಾರಕದ ಸುತ್ತಮುತ್ತ ಕೆಲ ಸಂಘಟನೆಗಳು ಪ್ರತಿಭಟಿಸಲು ಮುಂದಾದವು. ಜಂತರ್ ಮಂತರ್‌ಗೆ ತೆರಳಲು ಪ್ರಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದರು. ಅವರಲ್ಲಿ ಕೆಲವರನ್ನು ತಾತ್ಕಾಲಿಕ ಬಂಧನ ಕೇಂದ್ರವಾಗಿ ಗುರುತಿಸಲಾಗಿದ್ದ ಛತ್ರಸಾಲ್ ಕ್ರೀಡಾಂಗಣಕ್ಕೆ ಕರೆದೊಯ್ಯಲಾಯಿತು. ವರದಿಗಳ ಪ್ರಕಾರ, ಸಂಜೆಯ ವೇಳೆಗೆ ನಗರಾದ್ಯಂತ ವಶಕ್ಕೆ ಪಡೆದವರ ಸಂಖ್ಯೆ 3,000 ದಾಟಿತ್ತು.

ಈ ಕ್ರಮಗಳಿಂದ ಸಾಮಾನ್ಯ ಜನರಿಗೂ ತೊಂದರೆಯಾಯಿತು. ಹಲವು ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ರೈಲು ಪ್ರಯಾಣಿಕರು ಸಂಚಾರ ವ್ಯತ್ಯಯ ಎದುರಿಸಿದರು. ಮೊಬೈಲ್ ಇಂಟರ್ನೆಟ್ ಸ್ಥಗಿತದಿಂದ ಡಿಜಿಟಲ್ ಪಾವತಿ ಮತ್ತು ಮಾಹಿತಿ ಪಡೆಯುವುದಕ್ಕೂ ಕೆಲವು ಪ್ರದೇಶಗಳಲ್ಲಿ ಸಮಸ್ಯೆಯಾಯಿತು.

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯೊಂದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಯಿತು. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮತ್ತು ಪಕ್ಷದ ನಾಯಕರಾದ ಸೌರವ್ ದಾಸ್ ಹಾಗೂ ಆಶುತೋಷ್ ರಂಕಾ ಅವರನ್ನು ಮುಂಬೈನಿಂದ ಬಂದ ವಿಮಾನ ದೆಹಲಿಯಲ್ಲಿ ಇಳಿದ ಕೆಲವೇ ಕ್ಷಣಗಳಲ್ಲಿ ವಿಮಾನದೊಳಗೇ ವಶಕ್ಕೆ ಪಡೆಯಲಾಯಿತು. ಯೂಟ್ಯೂಬರ್ ಧ್ರುವ್ ರಾಠಿ ಮತ್ತು CJPಯ ಕಾನೂನು ತಂಡದ ಮುಖ್ಯಸ್ಥೆ ರತ್ನಾ ಸಿಂಗ್ ಅವರನ್ನೂ ವಶಕ್ಕೆ ಪಡೆಯಲಾಗಿತ್ತು.

ಪ್ರತಿಭಟನೆಯ ವರದಿ ಮಾಡುತ್ತಿದ್ದ ಪತ್ರಕರ್ತರನ್ನೂ ವಿವಿಧ ಸ್ಥಳಗಳಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ನವಭಾರತ್ ಟೈಮ್ಸ್, ಸ್ಕ್ರಾಲ್ ಮತ್ತು ನ್ಯೂಸ್‌ಲಾಂಡ್ರಿ ಮಾಧ್ಯಮ ಸಂಸ್ಥೆಗಳ ಪತ್ರಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಲಾಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಅಥವಾ ಬೆಂಬಲ ಸೂಚಿಸಲು ಮುಂದಾದ ಹಲವು ಪ್ರಮುಖ ಪ್ರತಿಪಕ್ಷ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ವಶಕ್ಕೆ ಪಡೆದವರಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ತ್ರಿಪುರಾದ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಸೇರಿದ್ದಾರೆ. ಜಂತರ್ ಮಂತರ್‌ಗೆ ತೆರಳುತ್ತಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಲೋಧಿ ಎಸ್ಟೇಟ್‌ನಲ್ಲಿರುವ ಅವರ ನಿವಾಸದ ಹೊರಗೆ ವಶಕ್ಕೆ ಪಡೆಯಲಾಯಿತು. ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್‌ನ ಇತರ ನಾಯಕರು ಸೌತ್ ಅವೆನ್ಯೂನ ಬಸ್ ನಿಲ್ದಾಣವೊಂದರಲ್ಲಿ ಧರಣಿ ನಡೆಸುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಯಿತು.

ಇದನ್ನೂ ಓದಿ: ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಅಧ್ಯಕ್ಷೆ ನೇಹಾ ಬೋರಾ, CPI(ML) ಲಿಬರೇಷನ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಸೇರಿದಂತೆ ಹಲವು ಕಾರ್ಯಕರ್ತರು ಹಾಗೂ ರಾಜಕೀಯ ಮುಖಂಡರನ್ನು ಐಎನ್‌ಎ ಮಾರುಕಟ್ಟೆಯ ಸಮೀಪ ನಡೆದ ಪ್ರತಿಭಟನೆಗಳ ವೇಳೆ ವಶಕ್ಕೆ ಪಡೆಯಲಾಗಿತ್ತು.

ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ನಟ ಇಮ್ರಾನ್ ಖಾನ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿತ್ತು. ಕಾರ್ಯಕರ್ತ ತುಷಾರ್ ಗಾಂಧಿ ಅವರ ಸಂಘಟನೆಯ ಸದಸ್ಯರೂ ಈ ಸಂದರ್ಭದಲ್ಲಿ ವಶಕ್ಕೆ ಒಳಗಾಗಿದ್ದರು.

ಪೊಲೀಸರ ಕ್ರಮ ದೇಶಾದ್ಯಂತ ಟೀಕೆಗೆ ಗುರಿಯಾಯಿತು. ಇದು ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ದಾಳಿ ಎಂದು ಕೆಲ ನಾಯಕರು ಆರೋಪಿಸಿದರು. ಈ ದಮನಕಾರಿ ಕ್ರಮಗಳನ್ನೇ ಖಂಡಿಸಿ ಜಗತ್ತಿನಾದ್ಯಂತ 20 ದೇಶಗಳಲ್ಲಿ ಪ್ರತಿಭಟನೆಗಳು ನಡೆದವು. ಆಸ್ಟಿನ್, ಚಿಕಾಗೋ, ಲಾಸ್ ಏಂಜಲೀಸ್, ಮಾಂಟ್ರಿಯಲ್, ನ್ಯೂಯಾರ್ಕ್, ಫಿಲಡೆಲ್ಫಿಯಾ, ಟೊರೊಂಟೊ, ವ್ಯಾಂಕೋವರ್, ಬರ್ಲಿನ್, ಡಬ್ಲಿನ್, ಎರ್ಲಾಂಗನ್, ಫ್ರೈಬರ್ಗ್, ಗಾಟಿಂಗೆನ್, ಗೋಥೆನ್‌ಬರ್ಗ್, ಹೆಲ್ಸಿಂಕಿ, ಲಂಡನ್, ಪ್ರೇಗ್, ದಿ ಹೇಗ್, ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್ ನಗರಗಳಲ್ಲಿ ಈ ಪ್ರತಿಭಟನೆಗಳು ಯಶಸ್ವಿಯಾಗಿ ಜರುಗಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ – ಯೂನುಸ್ – ಶೇರ್ ಖಾನ್!

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...