ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೀವನಗಾಥೆ: ಸಾಕ್ಷ್ಯಚಿತ್ರ ನಿರ್ಮಿಸಲಿದ್ದಾರೆ ನಟ ಆಮೀರ್ ಖಾನ್

Date:

ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಪ್ರತಿಮ ಜೀವನ ಪಯಣವನ್ನು ತೆರೆಯ ಮೇಲೆ ತರಲು ಬಾಲಿವುಡ್‌ ಖ್ಯಾತ ನಟ ಮತ್ತು ನಿರ್ಮಾಪಕ ಆಮೀರ್ ಖಾನ್ ಸಜ್ಜಾಗಿದ್ದಾರೆ. ‘ಆಮೀರ್ ಖಾನ್ ಪ್ರೊಡಕ್ಷನ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸಾಕ್ಷ್ಯಚಿತ್ರ, ಒಡಿಶಾದ ಒಂದು ಸಣ್ಣ ಹಳ್ಳಿಯಲ್ಲಿ ಜನಿಸಿದ ದ್ರೌಪದಿ ಮುರ್ಮು ಅವರು ಭಾರತದ ಮೊದಲ ಬುಡಕಟ್ಟು ಸಮುದಾಯದ ರಾಷ್ಟ್ರಪತಿಯಾಗಿ, ಹಾಗೂ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಎರಡನೇ ಮಹಿಳೆಯಾಗಿ ಬೆಳೆದ ಅಸಾಧಾರಣ ಪಯಣವನ್ನು ಎಳೆಎಳೆಯಾಗಿ ಬಿಂಬಿಸಲಿದೆ.

- Advertisement -

ಈ ಮಹತ್ವಾಕಾಂಕ್ಷೆಯ ಯೋಜನೆಗೆ ಖ್ಯಾತ ಬರಹಗಾರ್ತಿ ಮತ್ತು ನಿರ್ದೇಶಕಿ ಸ್ವಾತಿ ಚಕ್ರವರ್ತಿ ಭಟ್ಕಳ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇವರು ಈ ಹಿಂದೆ ಆಮೀರ್ ಖಾನ್ ಮತ್ತು ಕಿರಣ್ ರಾವ್ ನಿರ್ಮಾಣದ ‘ರುಬಾರು ರೋಶ್ನಿ’ ಸಾಕ್ಷ್ಯಚಿತ್ರಕ್ಕೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇದನ್ನೂ ಓದಿ: ನೀಟ್ ಮರುಪರೀಕ್ಷೆ ಪತ್ರಿಕೆ ಸೋರಿಕೆ ವಿಡಿಯೋ ನಕಲಿ: NTA

ಕಥೆಗೆ ನೈಜತೆ ನೀಡಲು ಮತ್ತು ರಾಷ್ಟ್ರಪತಿಯವರ ಮೂಲ ಬೇರುಗಳನ್ನು ಪ್ರತಿಬಿಂಬಿಸಲು, ಅವರ ಹುಟ್ಟೂರಿನಲ್ಲೇ ಚಿತ್ರೀಕರಣ ನಡೆಸಲಾಗಿದೆ. ಬುಡಕಟ್ಟು ಜೀವನದ ಹಿನ್ನೆಲೆಯಲ್ಲಿ ಅವರ ಬಾಲ್ಯದ ದಿನಗಳನ್ನು ಮತ್ತು ಸಾರ್ವಜನಿಕ ಸೇವೆಗೆ ಬರುವ ಮುನ್ನಿನ ಜೀವನವನ್ನು ಈ ಸಾಕ್ಷ್ಯಚಿತ್ರವು ಬಹಳ ಆಪ್ತವಾಗಿ ಕಟ್ಟಿಕೊಡಲಿದೆ. ಅವರ ಬದುಕು ದೇಶದ ಲಕ್ಷಾಂತರ ಬುಡಕಟ್ಟು ಸಮುದಾಯದವರಿಗೆ ಮತ್ತು ಮಹಿಳೆಯರಿಗೆ ಒಂದು ದೊಡ್ಡ ಸ್ಫೂರ್ತಿಯಾಗಿದ್ದು, ಅಂತಹ ಮಹಾನ್ ವ್ಯಕ್ತಿಯ ಧೈರ್ಯ ಮತ್ತು ಪರಿಶ್ರಮವನ್ನು ಈ ಸಾಕ್ಷ್ಯಚಿತ್ರದ ಮೂಲಕ ದೇಶದ ಮುಂದಿಡುವ ಪ್ರಯತ್ನ ಮಾಡಲಾಗಿದೆ ಎಂದು ತಂಡ ಹೇಳಿಕೊಂಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರಂ-7 ದುರುಪಯೋಗ, ಮತಗಳ್ಳತನದ ವಿರುದ್ಧ ಪೊಲೀಸ್ ತನಿಖೆ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

ಶ್ವೇತಭವನ ಗೆಲ್ಲಲು 2028ರ ತನಕ ಕಾಯಬೇಕು ಡೆಮಾಕ್ರಟ್ಸ್!

ನವೆಂಬರ್ 3ರ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟರು ಭರ್ಜರಿ ಗೆಲುವು ಸಾಧಿಸಿದ್ದಾರೆ....

3 ತಿಂಗಳ ಬಳಿಕ ಐಟಿ ವಿಭಾಗದ ಮೇಲುಸ್ತುವಾರಿ ಹಿಂಪಡೆದ ಚು. ಆಯೋಗ!

ಕೇಂದ್ರ ಚುನಾವಣಾ ಆಯೋಗದಲ್ಲಿ (ECI) ಕಾರ್ಯ ಹಂಚಿಕೆ ಆದೇಶಕ್ಕೆ ಸಂಬಂಧಿಸಿದಂತೆ ಮುಖ್ಯ...

‘ಚಾಯ್ ಪೇ ಚರ್ಚಾ’ – ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ರಾಹುಲ್ ಗಾಂಧಿ ಆಹ್ವಾನ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಪ್ರಮುಖ ಹಿರಿಯ...