ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪ: ಬಾಲಿವುಡ್ ನಟ ಶರದ್ ಕಪೂರ್ ವಿರುದ್ಧ ಎಫ್‌ಐಆರ್

Date:

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಾಲಿವುಡ್ ನಟ ಶರದ್ ಕಪೂರ್ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತನ್ನನ್ನು ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸಿದ್ದಾರೆ ಎಂದು 32 ವರ್ಷದ ಸಂತ್ರಸ್ತೆ ಆರೋಪಿಸಿದ್ದಾರೆ.

- Advertisement -

ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನಟ ಶರದ್ ಕಪೂರ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಶರದ್ ಕಪೂರ್ ಮಹಿಳೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಸಂವಹನ ನಡೆಸುತ್ತಿದ್ದರು. ಫೇಸ್‌ಬುಕ್‌ನಲ್ಲಿ ಮೆಸೇಜ್ ಮಾಡುತ್ತಿದ್ದ ಇಬ್ಬರೂ ವಿಡಿಯೋ ಕರೆ ಮೂಲಕವೂ ಮಾತನಾಡುತ್ತಿದ್ದರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್, ರೌಡಿ ಶೀಟರ್‌ ತೆರೆಯುವ ಬಗ್ಗೆ ನೋಟಿಸ್

ಮಹಿಳೆಯನ್ನು ನಟ ಕಚೇರಿಗೆ ಬರುವಂತೆ ಆಹ್ವಾನಿಸಿದ್ದರು. ಆದರೆ ಮಹಿಳೆ ಕಳುಹಿಸಿದ ವಿಳಾಸಕ್ಕೆ ಹೋದ ಬಳಿಕ ಅದು ನಟನ ಕಚೇರಿಯಲ್ಲ, ಮನೆ ಎಂದು ತಿಳಿದುಬಂದಿದೆ. ಶರದ್ ಅನುಚಿತವಾಗಿ ವರ್ತಿಸಿರುವುದು ಮಾತ್ರವಲ್ಲದೇ ಬಲವಂತವಾಗಿ ಸ್ಪರ್ಶಿಸಿ ಕೋಣೆಗೆ ಕರೆದಿದ್ದಾರೆ ಎಂದು ಸಂತ್ರಸ್ತೆಯು ದೂರಿನಲ್ಲಿ ಹೇಳಿದ್ದಾರೆ.

“ಶರದ್ ನನ್ನ ಮೇಲೆ ದೌರ್ಜನ್ಯ ಎಸಗಲು ಪ್ರಯತ್ನಿಸಿದರು. ಈ ಘಟನೆ ನಡೆದ ಬಳಿಕ ಶರದ್ ನನಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ.

ಜೋಶ್, ಕಾರ್ಗಿಲ್ ಎಲ್‌ಒಸಿ, ಲಕ್ಷ್ಯ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಶರದ್ ಮೊದಲು 1994ರಲ್ಲಿ ಮೇರಾ ಪ್ಯಾರಾ ಭಾರತ್‌ ಸಿನಿಮಾದ ಮೂಲಕ ತನ್ನ ವೃತ್ತಿ ಜೀವನ ಆರಂಭಿಸಿದರು. ಇತ್ತೀಚೆಗೆ 2022ರಲ್ಲಿ ‘ನೋ ಮೀನ್ಸ್ ನೋ’ ಮತ್ತು ‘ದಿ ಗುಡ್ ಮಹಾರಾಜ’ ಸಿನಿಮಾದಲ್ಲಿ ನಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...