ನಟ ಧನುಷ್ ವಿರುದ್ಧ ಬಹಿರಂಗ ಪತ್ರ ಬರೆದ ನಟಿ ನಯನತಾರಾ

Date:

Advertisements

ತಮ್ಮ ಸಿನಿಮಾದ ದೃಶ್ಯಗಳನ್ನು ಬಳಸಿಕೊಂಡಿದ್ದಾರೆಂದು ಆರೋಪಿಸಿ ನಟಿ ನಯನತಾರಾ ಅವರಿಗೆ ನಟ ಧನುಷ್ ಲೀಗಲ್‌ ನೋಟಿಸ್‌ ಕಳಿಸಿದ್ದಾರೆ. ಪರಿಹಾರವಾಗಿ 10 ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ತಮಗೆ ನೋಟಿಸ್ ಕಳಿಸಿರುವ ಧನುಷ್ ವಿರುದ್ಧ ನಯನತಾರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟಿ ನಯನತಾರಾ ನಿರ್ಮಾಣ ಮಾಡಿರುವ ‘Nayanthara: Beyond the Fairytale’ ಸಾಕ್ಷ್ಯಚಿತ್ರದಲ್ಲಿ ಧನುಷ್ ಅವರ ‘ನಾನುಮ್ ರೌಡಿ ಧಾನ್’ ಸಿನಿಮಾದ ಮೂರು ಸೆಕೆಂಡ್‌ ದೃಶ್ಯವನ್ನು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಧನುಷ್ ನೋಟಿಸ್ ಕಳಿಸಿದ್ದಾರೆ.

ನೋಟಿಸ್ ಕಳಿಸಿರುವ ಧನುಷ್ ವಿರುದ್ಧ ನಯನತಾರಾ ಸುದೀರ್ಘ ಪತ್ರ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “2015ರಲ್ಲಿ ಬಿಡುಗಡೆಯಾದ ‘ನಾನುಮ್ ರೌಡಿ ಧಾನ್’ ಚಿತ್ರದ ದೃಶ್ಯವನ್ನು ನಮ್ಮ ಸಿನಿಮಾದಲ್ಲಿ ಬಳಸಿಕೊಳ್ಳಲು ಧನುಷ್ ಅವರ ಅನುಮತಿ ಕೇಳಿದ್ದೆ. ಆದರೆ, ಅವರು ಅನುಮತಿ ನೀಡಲು ನೀಡಲು ನಿರಾಕಸಿದರು. ಬಳಿಕ, ಸಾಕ್ಷ್ಯಚಿತ್ರವನ್ನು ಮರು ಚಿತ್ರೀಕರಣ ಮಾಡಿದ್ದೇವೆ” ಎಂದು ನಯನತಾರಾ ಹೇಳಿದ್ದಾರೆ.

Advertisements

“ಪ್ರೀತಿ ಮತ್ತು ಮದುವೆ ಸೇರಿದಂತೆ ಜೀವನದ ಅಮೂಲ್ಯ ಕ್ಷಣಗಳ ಕುರಿತ ದೃಶ್ಯಗಳನ್ನು ಸಾಕ್ಷ್ಯಚಿತ್ರದಲ್ಲಿ ಬಳಸಲಾಗಿದೆ. ಆ ದೃಶ್ಯಗಳು ಜನರ ಫೋನ್‌ಗಳಲ್ಲಿ ಸೆರೆಹಿಡಿದವುಗಳಾಗಿವೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

“ಅಭಿಮಾನಿಗಳು ನೋಡುವ ಧನುಷ್‌ಗೂ, ಅಸಲಿ ಧನುಷ್‌ಗೂ ವ್ಯತ್ಯಾಸಗಳಿವೆ. ಅವರು ಇಷ್ಟು ಕೀಳುಮಟ್ಟಕ್ಕೆ ಇಳಿದಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಯಾವುದೇ ಹಿನ್ನೆಲೆಯಿಲ್ಲದೆ, ಅಭಿಮಾನಿಗಳ ಬೆಂಬಲದಿಂದ ಒಂಟಿ ಮಹಿಳೆಯಾಗಿ ಈ ಮಟ್ಟಕ್ಕೆ ಬೆಳೆದು ಬಂದಿದ್ದೇನೆ. ಧನುಷ್ ಅವರ ನೋಟಿಸ್‌ಗೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ” ಎಂದು ನಯನತಾರಾ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X