ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

Date:

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್ ವಡ್ಕುಟೆ (72) ಅವರು ತೀವ್ರ ಹೃದಯಾಘಾತದಿಂದ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

- Advertisement -

ಲಕ್ನೋ ಪ್ರವಾಸ ಮುಗಿಸಿ ಶುಕ್ರವಾರ ರಾತ್ರಿ ದೆಹಲಿಗೆ ಮರಳಿದ್ದ ಅವರಿಗೆ ಕೆಮ್ಮು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಶನಿವಾರ ಸಂಜೆ ಆರೋಗ್ಯ ಸ್ಥಿರವಾಗಿದ್ದರೂ, ತಡರಾತ್ರಿ ತೀವ್ರ ಹೃದಯಾಘಾತ ಸಂಭವಿಸಿ ಪರಿಸ್ಥಿತಿ ಗಂಭೀರವಾಯಿತು. ವೈದ್ಯರು ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ರಾಘವ್ ಚಡ್ಡಾ ಮತದಾರರ ಪಟ್ಟಿ ವಿವಾದ; ಪಂಜಾಬ್ ಚುನಾವಣಾಧಿಕಾರಿ ಪ್ರತಿಕ್ರಿಯೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಕಳಮ್ನುರಿ ಮೂಲದವರಾದ ರಾಮರಾವ್ ವಡ್ಕುಟೆ ಅವರು ಧನಗರ್ ಸಮುದಾಯದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. ಕಳೆದ ಏಪ್ರಿಲ್ 2026ರಲ್ಲಷ್ಟೇ ಅವರು ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಸಂಸದರಾಗಿ ಆಯ್ಕೆಯಾದ ಕೇವಲ ಏಳೆಂಟು ತಿಂಗಳಲ್ಲೇ ವಡ್ಕುಟೆ ನಿಧನರಾಗಿದ್ದಾರೆ. ಈ ಹಿಂದೆ ಅವರು ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಅಹಲ್ಯಾದೇವಿ ಹೋಳ್ಕರ್ ಕುರಿ ಮತ್ತು ಮೇಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ವಡ್ಕುಟೆ ಅವರ ನಿಧನಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, ಸಂಸದೆ ಸುಪ್ರಿಯಾ ಸುಳೆ, ಶಾಸಕ ರೋಹಿತ್ ಪವಾರ್ ಸೇರಿದಂತೆ ಹಲವು ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ದೆಹಲಿಯಿಂದ ಮಹಾರಾಷ್ಟ್ರದ ಹಿಂಗೋಲಿಗೆ ತರಲಾಗುತ್ತಿದ್ದು, ನವೆಂಬರ್ 24ರ ಮಂಗಳವಾರ ಬೆಳಿಗ್ಗೆ 10:30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಡಿಸೆಂಬರ್ 13ರಿಂದ ಮೂರು ಕುರ್‌ಆನ್ ಪ್ರವಚನ

ಬಸವಕಲ್ಯಾಣ ನಗರದಲ್ಲಿ ಡಿಸೆಂಬರ್ 13, 14 ಮತ್ತು 15ರಂದು ನಡೆಯಲಿರುವ 11ನೇ...

ಹವಾಮಾನ ವರದಿ: 11 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಚಳಿ ಮತ್ತು ಒಣಹವೆ ಮುಂದುವರಿದಿದೆ. ಆದಾಗ್ಯೂ,...

ಬೈಲಹೊಂಗಲ |ಕೆಆರ್‌ಡಿಸಿಎಲ್ ಅಧ್ಯಕ್ಷರಾಗಿ ಶಾಸಕ ಮಹಾಂತೇಶ ಕೌಜಲಗಿ ನೇಮಕ

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಅಧ್ಯಕ್ಷರಾಗಿ ಬೈಲಹೊಂಗಲ ಶಾಸಕ...

ಬೀದರ್‌ | ಶಾಹೀನ್ ಸಮೂಹದಿಂದ ₹22.42 ಕೋಟಿ ವಿದ್ಯಾರ್ಥಿವೇತನ ವಿತರಣೆ

ಬೀದರ್‌ ನಗರದಲ್ಲಿರುವ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು 2026-27ನೇ ಶೈಕ್ಷಣಿಕ...