ಹಿಂಡನ್‌ಬರ್ಗ್ ಸ್ಪೋಟಕ ವರದಿ; ಅದಾನಿ ಗ್ರೂಪ್‌ನಿಂದ ಹೇಳಿಕೆ ಬಿಡುಗಡೆ

Date:

Advertisements

ಅದಾನಿ ಗ್ರೂಪ್‌ನ ಹಗರಣಗಳಲ್ಲಿ ಸೆಬಿ ಮುಖ್ಯಸ್ಥೆ ಮಾಧವಿ ಬುಚ್ ಮತ್ತು ಪತಿ ಧವಲ್ ಬುಚ್ ಭಾಗಿಯಾಗಿರುವ ಹಿಂಡನ್‌ಬರ್ಗ್ ವರದಿಯ ಬಗ್ಗೆ ಅದಾನಿ ಗ್ರೂಪ್ ಹೇಳಿಕೆ ಬಿಡುಗಡೆ ಮಾಡಿದೆ. “ಹಿಂಡನ್‌ಬರ್ಗ್‌ನ ಇತ್ತೀಚಿನ ಆರೋಪಗಳು ದುರುದ್ದೇಶಪೂರಿತ, ಕಿಡಿಗೇಡಿತನದ್ದು ಮತ್ತು ತಿರುಚಿರುವುದು, ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ” ಎಂದು ಅದಾನಿ ಗ್ರೂಪ್ ಹೇಳಿದೆ.

“ಈ ವರದಿಯು ಸತ್ಯ ಮತ್ತು ಕಾನೂನನ್ನು ನಿರ್ಲಕ್ಷಿಸುವುದರೊಂದಿಗೆ ವೈಯಕ್ತಿಕ ಲಾಭಕ್ಕಾಗಿ ಪೂರ್ವನಿರ್ಧರಿತ ತೀರ್ಮಾನಳನ್ನು ಕೈಗೊಂಡಿದೆ” ಎಂದೂ ಅದಾನಿ ಗ್ರೂಪ್ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

“ಅದಾನಿ ಗ್ರೂಪ್ ವಿರುದ್ಧದ ಈ ಆರೋಪಗಳನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ. ಈ ಆರೋಪವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದ್ದು ಆಧಾರರಹಿತವೆಂದು ಸಾಬೀತುಪಡಿಸಲಾಗಿದೆ. ಈ ಪ್ರಕರಣವನ್ನು 2024ರ ಜನವರಿಯಲ್ಲಿ ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಅದಾನಿ ಗ್ರೂಪ್‌ ಹಗರಣದಲ್ಲಿ ಸೆಬಿ ಮುಖ್ಯಸ್ಥೆ ಮತ್ತು ಪತಿ ಭಾಗಿ: ಹಿಂಡನ್‌ಬರ್ಗ್ ಸ್ಪೋಟಕ ವರದಿ

“ನಮ್ಮ ಸಾಗರೋತ್ತರ ವ್ಯವಹಾರಗಳುಸಂಪೂರ್ಣ ಪಾರದರ್ಶಕವಾಗಿದೆ ಎಂದು ಪುನರುಚ್ಚರಿಸುತ್ತೇವೆ. ಎಲ್ಲಾ ಸಂಬಂಧಿತ ವಿವರಗಳನ್ನು ಹಲವಾರು ಸಾರ್ವಜನಿಕ ದಾಖಲೆಗಳಲ್ಲಿ ನಿಯಮಿತವಾಗಿ ಬಹಿರಂಗಪಡಿಸಲಾಗುತ್ತದೆ” ಎಂದು ತಿಳಿಸಿದೆ.

“ಉಲ್ಲೇಖಿಸಲಾದ ವ್ಯಕ್ತಿಗಳು (ಸೆಬಿಯ ಅಧ್ಯಕ್ಷೆ, ಪತಿ) ಅಥವಾ ವಿಷಯಗಳೊಂದಿಗೆ ಅದಾನಿ ಗ್ರೂಪ್ ಯಾವುದೇ ವಾಣಿಜ್ಯ ಸಂಬಂಧವನ್ನು ಹೊಂದಿಲ್ಲ. ಎಲ್ಲಾ ಕಾನೂನು ಮತ್ತು ನಿಯಂತ್ರಕ ಅಗತ್ಯತೆಗಳ ಪಾರದರ್ಶಕತೆ ಮತ್ತು ಅನುಸರಣೆಗೆ ನಾವು ದೃಢವಾಗಿ ಬದ್ಧರಾಗಿದ್ದೇವೆ” ಎಂದು ಹೇಳಿದೆ.

ಭಾರತೀಯ ಭದ್ರತಾ ಕಾನೂನುಗಳನ್ನು ಉಲ್ಲಂಘಿಸಿರುವ ಅಪಖ್ಯಾತಿ ಪಡೆದ ಶಾರ್ಟ್-ಸೆಲ್ಲರ್‌ ಹಿಂಡನ್‌ಬರ್ಗ್‌ ಆರೋಪಗಳು ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಅಥವಾ ಅಪ್ರಸ್ತುತ, ಅಸಂಬದ್ಧ ವಿಚಾರ ಎಂದಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

Download Eedina App Android / iOS

X