2016ರಿಂದ ಅದಾನಿ ಸಮೂಹದ ತನಿಖೆ ಮಾಡಿಲ್ಲ; ಸುಪ್ರೀಂ ಕೋರ್ಟ್‌ಗೆ ಸೆಬಿ ಮಾಹಿತಿ

Date:

2016ರಿಂದ ಅದಾನಿ ಸಮೂಹದ ಮೇಲೆ ನಿಗಾ ಇಟ್ಟಿಲ್ಲ ಎನ್ನುವ ವಿವರವನ್ನು ಸೆಬಿ ಸುಪ್ರೀಂ ಕೋರ್ಟ್‌ ಮುಂದೆ ಬಹಿರಂಗಪಡಿಸಿದೆ.

ಸೋಮವಾರ ಸುಪ್ರೀಂ ಕೋರ್ಟ್‌ಗೆ ನೀಡಿದ ಉತ್ತರದಲ್ಲಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ)ಯು, 201 ರಿಂದ ಯಾವುದೇ ಅದಾನಿ ಸಮೂಹದ ಯಾವುದೇ ಕಂಪನಿಯನ್ನು ತನಿಖೆ ಮಾಡಿಲ್ಲ ಮತ್ತು ತಮ್ಮ ಹಿಂದಿನ ಹೇಳಿಕೆಯು ತಪ್ಪಾಗಿದೆ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಪೀಠವು, ಅದಾನಿ ಗುಂಪಿನ ವಿರುದ್ಧ ಹಿಂಡೆನ್‌ಬರ್ಗ್ ಸಂಶೋಧನೆಯ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ವಿಸ್ತರಣೆಯನ್ನು ಕೋರಿ ಮಾರುಕಟ್ಟೆ ನಿಯಂತ್ರಕ ಸೆಬಿಯ ಅರ್ಜಿಯನ್ನು ಶೀಘ್ರದಲ್ಲೇ ಪರಿಗಣಿಸಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಹಿನ್ನೆಲೆಯಲ್ಲಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ತನ್ನ ಉತ್ತರದಲ್ಲಿ, ಸೆಬಿ ತನ್ನ ತನಿಖೆ ಪೂರ್ಣಗೊಳಿಸಲು ಸಮಯ ವಿಸ್ತರಣೆಯ ಅಗತ್ಯವಿದೆ ಎಂದು ಪುನರುಚ್ಚರಿಸಿತು. ಆದರೆ ಕಳೆದ ಶುಕ್ರವಾರದಂದು, ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ಮಾರುಕಟ್ಟೆ ನಿಯಂತ್ರಕರು ಕೋರಿರುವ ಆರು ತಿಂಗಳ ವಿಸ್ತರಣೆಯ ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

“ನಾವು ಈಗ 6 ತಿಂಗಳು ಸಮಯ ನೀಡಲು ಸಾಧ್ಯವಿಲ್ಲ. ಕೆಲಸದಲ್ಲಿ ಸ್ವಲ್ಪ ಎಚ್ಚರ ಅಗತ್ಯ. ಒಂದು ತಂಡವನ್ನು ಒಟ್ಟುಗೂಡಿಸಿ. ನಾವು ಆಗಸ್ಟ್ ಮಧ್ಯದಲ್ಲಿ ಪ್ರಕರಣವನ್ನು ಪಟ್ಟಿ ಮಾಡಬಹುದು ಮತ್ತು ನಂತರ ವರದಿಯ ಬಗ್ಗೆ ವಿಚಾರಣೆ ನಡೆಸಬಹುದು. ಇದಕ್ಕೆ ಕನಿಷ್ಠ ಸಮಯ 6 ತಿಂಗಳು ನೀಡಲಾಗುವುದಿಲ್ಲ. ಸೆಬಿ ಅನಿರ್ದಿಷ್ಟ ಅವಧಿಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಮತ್ತು ನಾವು ಅವರಿಗೆ 3 ತಿಂಗಳ ಕಾಲಾವಕಾಶ ನೀಡುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ತನ್ನ ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಕಾಲ ವಿಸ್ತರಣೆ ಕೋರಿ ಸೆಬಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.

ಈ ಸುದ್ದಿ ಓದಿದ್ದೀರಾ?: ಜ್ಞಾನವಾಪಿ ಮಸೀದಿ | ಶಿವಲಿಂಗದ ಆಕೃತಿಯ ಕಾರ್ಬನ್ ಡೇಟಿಂಗ್‌ ಪರೀಕ್ಷೆಗೆ ಹೈಕೋರ್ಟ್ ಅಸ್ತು

ಗೌತಮ್ ಅದಾನಿ ನೇತೃತ್ವದ ವ್ಯವಹಾರ ಸಂಸ್ಥೆಯು ಹಲವು ದಶಕಗಳಿಂದ ತನ್ನ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿ ವಂಚಿಸುತ್ತಿದೆ” ಎಂದು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ಆರೋಪಿಸಿತ್ತು.

ಇನ್ನೊಂದೆಡೆ, ಹಿಂಡೆನ್‍ಬರ್ಗ್ ರಿಸರ್ಚ್‍ನ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅದರ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು. ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಸೆಬಿ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಸುಪ್ರೀಂ ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲ ಮನೋಹರ್ ಲಾಲ್ ಶರ್ಮಾ ಮನವಿ ಮಾಡಿದ್ದಾರೆ.

ಲೋಕಸಭೆಯಲ್ಲೂ ಕೂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಹಲವು ವಿಪಕ್ಷ ನಾಯಕರು ಅದಾನಿ ಪ್ರಕರಣವನ್ನು ಜಂಟಿ ಸಂಸದೀಯ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲಂಗಾಣ | 31 ವರ್ಷದ ವ್ಯಕ್ತಿಯ ಬರ್ಬರ ಹತ್ಯೆ

ಹೈದರಾಬಾದ್‌ನಲ್ಲಿ 31 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ....

ಬ್ಯಾಂಕ್‌ಗಳಿಗೆ 20 ಸಾವಿರ ಕೋಟಿ ರೂ. ವಂಚನೆ: ಏಮ್‌ಟೆಕ್ ಗ್ರೂಪ್ ಕಚೇರಿಗಳ ಮೇಲೆ ಇ.ಡಿ ದಾಳಿ

.ಡಿಸಾಲ ಪಡೆದು ಬ್ಯಾಂಕ್‌ಗಳಿಗೆ ಇಪ್ಪತ್ತು ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು...

ಭಾರತದ ಭವಿಷ್ಯಕ್ಕೆ ಮೋದಿ ಸರ್ಕಾರದ ‘ಕೊಳ್ಳಿ’

ಭಾರತದ ಭವಿಷ್ಯದ ವೈದ್ಯರ ಆಯ್ಕೆಯನ್ನು ನಿಯಂತ್ರಿಸುವ ಮೂಲಕ ಮೋದಿ ಆಡಳಿತವು ತನ್ನ...

ನೀಟ್ ಅಕ್ರಮ: ಹೈಕೋರ್ಟ್ ವಿಚಾರಣೆಗಳಿಗೆ ಸುಪ್ರೀಂ ತಡೆ, ಕೌನ್ಸೆಲಿಂಗ್ ಪ್ರಕ್ರಿಯೆ ಮುಂದುವರಿಕೆ

ನೀಟ್ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವಿಚಾರಣೆಗಳನ್ನು ವರ್ಗಾಯಿಸಬೇಕೆಂದು...