ಡೆರೆಕ್ ಒಬ್ರಿಯಾನ್ ವಿದೇಶಿ ಹೇಳಿಕೆ: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಕ್ಷಮೆ

Date:

ತೃಣಮೂಲ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಡೆರಿಕ್ ಒಬ್ರಿಯಾನ್ ಅವರನ್ನು ವಿದೇಶಿ ಎಂದು ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕ್ಷಮೆಯಾಚಿಸಿದ್ದಾರೆ.

- Advertisement -

ಡೆರಿಕ್ ಒಬ್ರಿಯಾನ್ ಅವರನ್ನು ವಿದೇಶಿ ಎಂದು ಅಜಾಗರುಕತೆಯಿಂದ ಉಚ್ಚರಿಸಿದ್ದಕ್ಕೆ ನಾನು ಅವರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮೂಲಗಳ ಪ್ರಕಾರ ಡೆರಿಕ್ ಒಬ್ರಿಯಾನ್ ಕೂಡ ಅಧೀರ್ ರಂಜನ್ ಚೌಧರಿ ಅವರ ಕ್ಷಮೆಯನ್ನು ಸ್ವೀಕರಿಸಿದ್ದಾರೆ.

ಗುರುವಾರದಂದು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಅಧೀರ್ ರಂಜನ್ ಚೌಧರಿ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಡೆರಿಕ್ ಒಬ್ರಿಯನ್ ವಿದೇಶಿಗರು. ಅವರಿಗೆ ಹಲವು ವಿಷಯಗಳು ಗೊತ್ತು. ಅವರನ್ನೇ ಕೇಳಿ ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

ಇಂಡಿಯಾ ಒಕ್ಕೂಟದೊಂದಿಗೆ ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆ ಮಾತುಕತೆಗಳು ಮುರಿದು ಬಿದ್ದಿರುವುದಕ್ಕೆ ಡೆರಿಕ್ ಒಬ್ರಿಯಾನ್ ವಿರುದ್ಧ ಅಧೀರ್ ರಂಜನ್ ಚೌಧರಿ ಆರೋಪ ಮಾಡಿದ್ದರು. ಡೆರಿಕ್ ಅವರು ಕೂಡ ಅಧೀರ್ ಅವರ ವಿರುದ್ದ ಬಿಜೆಪಿ ಅಪ್ಪಣೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಬಂಗಾಳದಲ್ಲಿ ಮೈತ್ರಿ ಕಾರ್ಯಗತಗೊಳ್ಳದೆ ಇರುವುದಕ್ಕೆ ಮೂರು ಕಾರಣಗಳಿದ್ದು ಆ ಮೂರು ಕಾರಣಗಳು ಅಧೀರ್ ರಂಜನ್‌ ಚೌಧರಿ ಅವರೆ ಆಗಿದ್ದಾರೆ. ಇಂಡಿಯಾ ಒಕ್ಕೂಟ ಅನೇಕ ವಿರೋಧಿಗಳನ್ನು ಹೊಂದಿದೆ. ಅದರಲ್ಲಿ ಬಿಜೆಪಿ ಮತ್ತು ಅಧೀರ್ ರಂಜನ್ ಚೌಧರಿ ಒಕ್ಕೂಟದ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಿದ್ದರು.

ಮಮತಾ ಬ್ಯಾನರ್ಜಿ ವಿರುದ್ಧ ಅಧೀರ್ ರಂಜನ್ ಚೌಧರಿ ಹಲವು ಹೇಳಿಕೆ ನೀಡಿದ ನಂತರ ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂದು ಮಮತಾ ಎರಡು ದಿನಗಳ ಹಿಂದೆ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...