ಸೂರ್ಯನ ಅಧ್ಯಯನಕ್ಕಾಗಿ ನಭಕ್ಕೆ ಹಾರಿದ ಆದಿತ್ಯ ಎಲ್-1

Date:

ಚಂದ್ರಯಾನ 3ರ ಯಶಸ್ಸಿನ ಬೆನ್ನಲ್ಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಮತ್ತೊಂದು ಸಾಹಸಕ್ಕೆ ಮುಂದಾಗಿದೆ. ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಎಲ್-1 ನೌಕೆಯನ್ನು ಪಿಎಸ್‌ಎಲ್‌ವಿ-ಸಿ 57 ರಾಕೆಟ್ ಮೂಲಕ ಸೆ.2ರಂದು ಶನಿವಾರ ಆಂಧಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಿದೆ.

ಶನಿವಾರವೇ ಆದಿತ್ಯ ಎಲ್-1 ಅನ್ನು ಕೆಳಸ್ತರದ ಭೂ ಕಕ್ಷೆಯೊಳಗೆ ಸೇರಿಸಲಾಗುವುದು. ಕ್ರಮೇಣ ಭೂ ಕಕ್ಷೆಯ ಎತ್ತರವನ್ನು ಹೆಚ್ಷಿಸುತ್ತಾ ಹೋಗಲಾಗುತ್ತದೆ. ಇಂದು ಉಡಾವಣೆಯಾಗಲಿರುವ ಎಲ್-1 ನೌಕೆಯು ನಿಗದಿತ ಬಿಂದು ತಲುಪಲು 125 ದಿನ ತೆಗೆದುಕೊಳ್ಳಲಿದೆ.

ಭೂಮಿಯಿಂದ 15 ಲಕ್ಷ ಕಿಮೀ ದೂರದಲ್ಲಿರುವ ಲಾಂಗ್ರೇಜ್ ಎಲ್-1 ಬಿಂದುವಿನಲ್ಲಿ ಆದಿತ್ಯ ಎಲ್-1 ಅಂತರಿಕ್ಷ ವೀಕ್ಷಣಾಲಯವನ್ನು ಇರಿಸಲಾಗುವುದು. ಆದಿತ್ಯ ಎಲ್-1 ನೌಕೆಯಲ್ಲಿ ವಿವಿಧ ರೀತಿಯ ಏಳು ಸಾಧನಗಳನ್ನು ಅಳವಡಿಸಲಾಗಿದೆ. ಇದು ಯಾವುದೇ ಅಡಚಣೆಯಿಲ್ಲದೇ ನಿರಂತರವಾಗಿ ಸೂರ್ಯನಲ್ಲಿ ನಡೆಯುವ ಸೌರ ಚಟುವಟಿಕೆಗಳನ್ನು ಗಮನಿಸುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಂದ್ರ ಮತ್ತು ಮಂಗಳನ ಅಧ್ಯಯನದ ನಂತರ ಸೂರ್ಯನ ಅಧ್ಯಯನಕ್ಕೆ ಮುಂದಾದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ. ಈ ಯೋಜನೆಯಿಂದ ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಷ್ಠೆ ಮತ್ತು ಸಾಮರ್ಥ್ಯ ಹೆಚ್ಚಾಗಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಒತ್ತಡದಿಂದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕಾರ; ಹೈಕೋರ್ಟ್‌ಗೆ ಹೋಗುತ್ತೇವೆಂದ ಕಾಂಗ್ರೆಸ್‌

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು...

‘ನಾವು ಮತ ಹಾಕುತ್ತೇವೆ, ಆದರೆ ಬಿಜೆಪಿಗಲ್ಲ’; 1,200 ಕುಟುಂಬಗಳು ಹೀಗೆ ಹೇಳಿದ್ದೇಕೆ?

ನಾವು ಒಡೆದ ಮನೆಯಲ್ಲಿ ಬದುಕುತ್ತಿದ್ದೇವೆ. ಬಿಜೆಪಿ ಸರ್ಕಾರ ನಮ್ಮ ಮನೆಗಳನ್ನು ಒಡೆದುರುಳಿಸಿದೆ....

‘ಇಂಡಿಯಾ’ ಒಕ್ಕೂಟ ತೊರೆಯಲು ನಿರಾಕರಿಸಿದ್ದಕ್ಕೆ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಜೈಲು’

'ಇಂಡಿಯಾ' ಮೈತ್ರಿಕೂಟವನ್ನು ತೊರೆಯಲು ನಿರಾಕರಿಸಿದ್ದಕ್ಕೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ, ಜೆಎಂಎಂ ನಾಯಕ...

ಮೋದಿಯವರ ದ್ವೇಷ ಭಾಷಣ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಯತ್ನ: ರಾಹುಲ್ ಗಾಂಧಿ

"ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವ ಮುಸ್ಲಿಮರಿಗೆ...