ಎಸ್‌ಐಆರ್‌ಗೆ ಪ್ರವೇಶ ಪತ್ರ, ತೇರ್ಗಡೆ ಪ್ರಮಾಣಪತ್ರವೂ ಗುರುತಿನ ಚೀಟಿ: ಸುಪ್ರೀಂ ಕೋರ್ಟ್

Date:

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್‌ಐಆರ್) ವೇಳೆ ಗುರುತಿನ ಚೀಟಿಯಾಗಿ 10ನೇ ತರಗತಿ ಪರೀಕ್ಷೆಯ ಪ್ರವೇಶಪತ್ರ ಹಾಗೂ ತೇರ್ಗಡೆ ಪ್ರಮಾಣಪತ್ರವನ್ನು ಪೂರಕ ದಾಖಲೆಯಾಗಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

- Advertisement -

ಈ ವಿಚಾರದ ಕುರಿತಂತೆ ಹಿರಿಯ ವಕೀಲ ಡಿ.ಎಸ್‌. ನಾಯ್ಡು ಅವರು ಪ್ರಸ್ತಾಪಿಸುತ್ತಿದ್ದಂತಯೇ, ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಹಾಗೂ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಹಾಗೂ ವಿಪುಲ್‌ ಪಂಚೋಲಿ ನೇತೃತ್ವದ ನ್ಯಾಯಪೀಠವು ಈ ಆದೇಶ ಹೊರಡಿಸಿದೆ. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪರೀಕ್ಷಾ ಪ್ರವೇಶ ಪತ್ರವನ್ನು ಸ್ವತಂತ್ರ ಗುರುತಿನ ಚೀಟಿಯಾಗಿ ಮಾನ್ಯ ಮಾಡಲು ಅವಕಾಶ ನೀಡಲಾಗುತ್ತದೆಯೇ ಎಂಬುದರ ಕುರಿತು ವಕೀಲರು ತಮ್ಮ ಕಳವಳ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ನ್ಯಾಯಪೀಠ, ಪ್ರವೇಶ ಪತ್ರವನ್ನು ಪೂರಕ ದಾಖಲೆಯಾಗಿ ಪರಿಗಣಿಸಬೇಕು ಎಂದು ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿತು.

ಇದನ್ನು ಓದಿದ್ದೀರಾ? ಪ್ರೀಮಿಯಂ ಲೇಖನ | ಜಾಗತಿಕ ಆರ್ಥಿಕತೆಯ ಅವಳಿ ಅಸ್ತ್ರಗಳು: ಐಎಂಎಫ್, ವಿಶ್ವಬ್ಯಾಂಕ್‌ನ ಒಳಹೊರಗು

‘2026ರ ಫೆಬ್ರುವರಿ 3ರಂದು ಆದೇಶದಲ್ಲಿ ಪ್ಯಾರಾ 3 ರಲ್ಲಿ ಉಲ್ಲೇಖಿಸಲಾದ ದಾಖಲೆಗಳು ಇದುವರೆಗೂ ಅಪ್‌ಲೋಡ್‌ ಮಾಡಿಲ್ಲ. ಫೆಬ್ರುವರಿ 15ರವರೆಗೆ ಸ್ವೀಕರಿಸಲಾದ ಅರ್ಜಿಗಳು ಚುನಾವಣಾ ನೋಂದಣಿ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಗುರುವಾರ ಸಂಜೆ 5 ಗಂಟೆ ಒಳಗಾಗಿ ನ್ಯಾಯಾಂಗ ಅಧಿಕಾರಿಗಳ ಮುಂದೆ ಸಲ್ಲಿಸಬೇಕು. ಜನನ ಪ್ರಮಾಣಪತ್ರವಾಗಿ ಪ್ರವೇಶಪತ್ರದ ಜೊತೆಗೆ ತೇರ್ಗಡೆ ಪ್ರಮಾಣಪತ್ರವನ್ನು ಸಲ್ಲಿಸಬಹುದಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ಹೆಚ್ಚುವರಿ ನ್ಯಾಯಾಧೀಶರ ನಿಯೋಜನೆ: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಲ್ಲಿ 80 ಲಕ್ಷ ಮತದಾರರ ಪಟ್ಟಿ ಅಳಿಸುವಿಕೆಯಿಂದ ಎದುರಿಸುತ್ತಿರುವ ಆಕ್ಷೇಪಣೆಗಳನ್ನು ಸಂಗ್ರಹಿಸಲು ಮಂಗಳವಾರ ಪಶ್ಚಿಮ ಬಂಗಾಳದ 250 ಮಂದಿ ನ್ಯಾಯಾಧೀಶರ ನಿಯೋಜನೆ ಜೊತೆಗೆ ಜಾರ್ಖಂಡ್‌ ಹಾಗೂ ಒಡಿಶಾದ ನ್ಯಾಯಾಧೀಶರನ್ನು ಹೆಚ್ಚುವರಿಯಾಗಿ ನಿಯೋಜಿಸಲು ಸುಪ್ರೀಂಕೋರ್ಟ್‌ ಸಮ್ಮತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...