ಒಮಾನ್ ಕರಾವಳಿಯಲ್ಲಿ ಭಾರತದ ಹಡಗಿನ ಮೇಲೆ ವೈಮಾನಿಕ ದಾಳಿ: ನಾವಿಕ ಬಲಿ, 13 ಮಂದಿ ರಕ್ಷಣೆ!

Date:

ಒಮಾನ್ ಕರಾವಳಿಯ ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಭಾರತದ ಸರಕು ದೋಣಿಯ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಭಾರತೀಯ ನಾವಿಕರೊಬ್ಬರು ಮೃತಪಟ್ಟಿದ್ದು, 13 ಮಂದಿ ಅಪಾಯದಿಂದ ಪಾರಾಗಿದ್ದಾರೆ.

- Advertisement -

ಮೃತ ನಾವಿಕನನ್ನು ಗುಜರಾತ್ ಮೂಲದ ಗಂಧರ್ ನಹಿಮ್ ಅಜೀಜ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್, ನವೆಂಬರ್ 2ರಂದು ಈ ದುರಂತ ಸಂಭವಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

 14 ಭಾರತೀಯ ನಾವಿಕರನ್ನು ಹೊತ್ತೊಯ್ಯುತ್ತಿದ್ದ ‘ಎಮ್‌ಎಸ್‌ವಿ ಅಲ್ ಜುಸುಫಿ’ (MSV Al Jusufi) ಎಂಬ ವಾಣಿಜ್ಯ ದೋಣಿ ಒಮಾನ್ ಸಮುದ್ರ ಗಡಿ ಭಾಗದಲ್ಲಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ವೈಮಾನಿಕ ವಸ್ತುವೊಂದು ಬಂದು ಅಪ್ಪಳಿಸಿದೆ. ದಾಳಿಯ ತೀವ್ರತೆಗೆ ತೀವ್ರವಾಗಿ ಗಾಯಗೊಂಡಿದ್ದ ಗಂಧರ್ ಅಜೀಜ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಒಮಾನ್ ಕೋಸ್ಟ್ ಗಾರ್ಡ್ ಸಿಬ್ಬಂದಿ, ದೋಣಿಯಲ್ಲಿದ್ದ ಉಳಿದ 13 ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ರಕ್ಷಿಸಿ ದಂಡೆಗೆ ಕರೆತಂದಿದ್ದಾರೆ.

Advertisements

ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಸಚಿವ ಸೋನೊವಾಲ್, “ಮೃತ ನಾವಿಕನ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದೇನೆ. ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಕೇಂದ್ರ ಸಚಿವಾಲಯವು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ರಕ್ಷಿಸಲ್ಪಟ್ಟ 13 ನಾವಿಕರಿಗೆ ಅಗತ್ಯ ವೈದ್ಯಕೀಯ ಹಾಗೂ ತುರ್ತು ನೆರವು ಒದಗಿಸಲಾಗುತ್ತಿದ್ದು, ನಾವಿಕರ ಶೀಘ್ರ ವಾಪಸಾತಿ ಹಾಗೂ ಮೃತದೇಹವನ್ನು ತಾಯ್ನಾಡಿಗೆ ತರಲು ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಆದರೆ, ಈ ವೈಮಾನಿಕ ದಾಳಿಯನ್ನು ನಡೆಸಿದವರು ಯಾರು ಮತ್ತು ದಾಳಿಗೆ ಬಳಕೆಯಾದ ವಸ್ತು ಯಾವುದು ಎಂಬ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಫೆಬ್ರವರಿ 28ರಿಂದ ಆರಂಭಗೊಂಡಿರುವ ಸಂಘರ್ಷದ ಪರಿಣಾಮವಾಗಿ, ಪಶ್ಚಿಮ ಏಷ್ಯಾದ ಸಮುದ್ರ ಮಾರ್ಗಗಳಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ಗಣನೀಯವಾಗಿ ಹೆಚ್ಚಾಗಿವೆ. ಪ್ರಮುಖ ಇಂಧನ ಸಾರಿಗೆ ರಸ್ತೆಯಾಗಿರುವ ಹೊರ್ಮುಜ್ ಜಲಸಂಧಿ, ಪರ್ಷಿಯನ್ ಕೊಲ್ಲಿ ಹಾಗೂ ಒಮಾನ್ ಕೊಲ್ಲಿ ಪ್ರದೇಶಗಳಲ್ಲಿ ಸುರಕ್ಷತೆಯ ಅಭಾವ ಎದುರಾಗಿದೆ. ಅಂತಾರಾಷ್ಟ್ರೀಯ ಕಡಲ ಸಂಸ್ಥೆಯ (IMO) ಇತ್ತೀಚಿನ ವರದಿ ಪ್ರಕಾರ, ಅಕ್ಟೋಬರ್ 27ರವರೆಗೆ ಈ ಭಾಗದಲ್ಲಿ 121 ಹಡಗುಗಳ ಮೇಲೆ ದಾಳಿಗಳು ನಡೆದಿದ್ದು, ಸುಮಾರು 24 ನಾವಿಕರು ಪ್ರಾಣ ಕಳೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR ಹೋರಾಟದಲ್ಲಿ ನೀವೇಕೆ ಭಾಗವಹಿಸಿದಿರಿ’; ಬೇಷರತ್ ಕ್ಷಮೆ ಕೇಳುವಂತೆ ನಟ ಇಮ್ರಾನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಸೂಚನೆ

ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮುಂಬೈನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದಕ್ಕೆ...

ಬೀದರ್ | ಅವೈಜ್ಞಾನಿಕ ಚರಂಡಿ: ರಸ್ತೆ ಮೇಲೆ ಕೊಳಚೆ ನೀರು, ಜನರ ಆಕ್ರೋಶ

ಬೀದರ್ ನಗರದ ಶಹಾಪುರ ಗೇಟ್ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಚರಂಡಿಯಿಂದಾಗಿ ಕೊಳಚೆ...

20 ವರ್ಷಗಳಲ್ಲಿ 171 ಐಐಟಿ ವಿದ್ಯಾರ್ಥಿಗಳ ಸಾವು; ಎಸ್‌ಟಿ-ಎಸ್‌ಸಿ ವಿದ್ಯಾರ್ಥಿಗಳೇ ಹೆಚ್ಚು: ಆರ್‌ಟಿಐ ವರದಿ ಬಹಿರಂಗ

ದೇಶದ ಅತ್ಯಂತ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ...

ಬೀದರ್‌ | ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಗೆ ಆಗ್ರಹ: ನಾಳೆ ಡಿಸಿ ಕಚೇರಿ ಮುತ್ತಿಗೆ

ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಪಡಿಸುವುದು, ಸಕ್ಕರೆ ಕಾರ್ಖಾನೆಗಳಲ್ಲಿ ತಕ್ಷಣ...