ಅಫ್ಘಾನ್‌ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ಪತ್ರಿಕಾಗೋಷ್ಠಿಗೆ ಮಹಿಳೆಯರಿಗೆ ನಿಷೇಧ: ವ್ಯಾಪಕ ವಿರೋಧ

Date:

ಭಾರತಕ್ಕೆ ಮಹತ್ವದ ಆರು ದಿನಗಳ ಪ್ರವಾಸ ಕೈಗೊಂಡಿರುವ ಅಫ್ಘಾನಿಸ್ತಾನದ ಪ್ರಭಾರ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತೆಯರಿಗೆ ಭಾಗವಹಿಸಲು ಅನುಮತಿ ನಿರಾಕರಿಸಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

- Advertisement -

ದಿ ಇಂಡಿಪೆಂಡೆಂಟ್ ಪತ್ರಿಕೆಯ ವರದಿಗಾರ್ತಿ ಹಾಗೂ ಪ್ರಮುಖ ಸುದ್ದಿವಾಹಿನಿಗಳ ಹಿರಿಯ ವರದಿಗಾರ್ತಿಯರು ಸೇರಿದಂತೆ ಮಹಿಳಾ ಪತ್ರಕರ್ತೆಯರಿಗೆ ಪತ್ರಿಕಾಗೋಷ್ಠಿಗೆ ಪ್ರವೇಶ ನಿರಾಕರಿಸಲಾಗಿತ್ತು. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಜೊತೆ ಮಾತುಕತೆ ನಡೆಸಿದ ಬಳಿಕ ಮುತ್ತಾಕಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಫ್ಘಾನ್‌ನ ಪ್ರಭಾರ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಗೆ ಮಹಿಳಾ ಪತ್ರಕರ್ತೆಯರ ನಿಷೇಧವನ್ನು ಪತ್ರಕರ್ತರು ಖಂಡಿಸಿದ್ದಾರೆ. ತಾಲಿಬಾನ್‌ನ ಸ್ತ್ರೀವಿರೋಧಿ ನಿಲುವಿನ ಪ್ರತಿಫಲನ ಇದಾಗಿದೆಯೆಂದು ಅವರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಡಿಕಲ್‌ ಮಾಫಿಯಾಗೆ ಅಮಾಯಕ ಮಕ್ಕಳು ಬಲಿ; ಸರ್ಕಾರಗಳೇ ಜವಾಬ್ದಾರಿ

ದೇಶದಲ್ಲಿ ಇಂತಹ ತಾರತಮ್ಯವಾದಿ ನೀತಿಗಳಿಗೆ ದೇಶದಲ್ಲಿ ಅವಕಾಶ ನೀಡಿದ್ದಕ್ಕಾಗಿ ಭಾರತ ಸರಕಾರವನ್ನು ಕೂಡಾ ಪತ್ರಕರ್ತರು ಖಂಡಿಸಿದ್ದಾರೆ.

‘‘ಭಾರತ ಸರಕಾರದ ಮೂಗಿನ ನೇರದಲ್ಲೇ, ದೇಶದ ರಾಜಧಾನಿಯ ಹೃದಯಭಾಗದಲ್ಲಿ ಅಫ್ಘಾನ್ ವಿದೇಶಾಂಗ ಸಚಿವರ ಮುತ್ತಾಕಿ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು, ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಹೊರಗಿಟ್ಟಿದ್ದಾರೆ. ಇದಕ್ಕೆ ಅವಕಾಶ ನೀಡಲು ಹೇಗೆ ಸಾಧ್ಯ? ಇದಕ್ಕೆ ಯಾರು ಅನುಮೋದನೆ ನೀಡಿದರು?’’ ಎಂದು ಲೇಖಕಿ ಹಾಗೂ ಪತ್ರಕರ್ತೆ ನಯನಿಮಾ ಬಸು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...