ಮೋದಿ ವಿರುದ್ಧದ ಹೇಳಿಕೆ: 11 ವರ್ಷದ ಬಳಿಕ ಶಾಸಕನಿಗೆ 100 ರೂಪಾಯಿ ದಂಡ

Date:

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ವಿರುದ್ಧ 2014ರ ಚುನಾವಣೆ ಸಂದರ್ಭದಲ್ಲಿ ಮಾನಹಾನಿಕರ ಹೇಳಿಕೆ ನೀಡಿದ ಆರೋಪ ಎದುರಿಸತ್ತಿದ್ದ ಉತ್ತರ ಪ್ರದೇಶದ ಸಮಾಜವಾದಿ ಶಾಸಕ ನಹೀದ್ ಹಸನ್ ಅವರಿಗೆ ಕೈರಾನಾ ನ್ಯಾಯಾಲಯ, 11 ವರ್ಷಗಳಲ್ಲಿ 129 ವಿಚಾರಣೆಗಳನ್ನು ನಡೆಸಿದ ಬಳಿಕ 100 ರೂಪಾಯಿ ದಂಡ ವಿಧಿಸಿದೆ.

- Advertisement -

ದಂಡ ಪಾವತಿಸಲು ವಿಫಲರಾದಲ್ಲಿ ಒಂದು ತಿಂಗಳು ಸೆರೆಮನೆ ವಾಸ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎನ್‌ಡಿಎದ ಪ್ರಧಾನಿ ಅಭ್ಯರ್ಥಿ ಹಾಗೂ ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದಲ್ಲಿ ಹಸನ್‌ ಅವರಿಗೆ ಶಿಕ್ಷೆ ವಿಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಹದ್ದು ಮೀರಿದ ವರ್ತನೆ- ಗೆರೆ ಎಳೆಯುವುದೇ ಕಾಯ್ದಿರಿಸಿರುವ ಸುಪ್ರೀಮ್ ತೀರ್ಪು?

2014ರ ಮಾರ್ಚ್ 28ರಂದು ಶಾಮ್ಲಿಯ ಆಜಾದ್ ಚೌಕದಲ್ಲಿ ನಡೆದ ಸಮಾರಂಭದಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧವೂ ಹೇಳಿಕೆ ನೀಡಿದ ಆರೋಪವನ್ನು ಹಸನ್ ಎದುರಿಸುತ್ತಿದ್ದರು.

ಕೈರಾನಾದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದ ಹಸನ್, ಇಬ್ಬರೂ ಅವಿವಾಹಿತರಾಗಿರುವ ಬಗ್ಗೆ ಮತ್ತು ಆನೆ ಬಿಎಸ್‌ಪಿಯ ಚಿಹ್ನೆಯಾಗಿರುವ ಬಗ್ಗೆ ಅಣಕವಾಡಿದ್ದರು. ಮರುದಿನ ಶಾಮ್ಲಿ ಕೋತ್ವಾಲಿ ಠಾಣೆಯಲ್ಲಿ ಅವರ ವಿರುದ್ಧ ಭಾರತೀಯ ದಂಡಸಂಹಿತೆ ಸೆಕಷನ್ 171(ಜಿ) (ಚುನಾವಣೆಯ ಸಂಬಂಧ ಸುಳ್ಳು ಹೇಳಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

ಪೊಲೀಸರು ಆ ಬಳಿಕ ಆರೋಪಪಟ್ಟಿ ಸಲ್ಲಿಸಿದ್ದು, ಸುಧೀರ್ಘ ಕಾನೂನು ಹೋರಾಟ ನಡೆದಿತ್ತು. ಕೈರಾನದಿಂದ ಮೂರನೇ ಬಾರಿ ಶಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಹಸನ್ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಹುಕುಂ ಸಿಂಗ್ ವಿರುದ್ಧ ಪರಾಭವಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...