ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಪ್ರಕರಣ; ಮೂರು ತಿಂಗಳ ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ

Date:

ಜನವರಿಯಲ್ಲಿ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂಬೈ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

- Advertisement -

ಬಾಂದ್ರಾ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಆರೋಪಿ ಬಾಂಗ್ಲಾದೇಶಿ ಪ್ರಜೆ ಮೊಹಮ್ಮದ್ ಶರೀಫುಲ್ ಇಸ್ಲಾಂ ವಿರುದ್ಧ ಸಾಕ್ಷ್ಯಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಸೈಫ್‌ ಅಲಿ ಖಾನ್‌ ಮೇಲೆ ದಾಳಿ: ಆರೋಪಿ ಬಂಧನ

ಜನವರಿ 16ರಂದು ಬಾಂದ್ರಾ ಪ್ರದೇಶದ 12ನೇ ಮಹಡಿಯ ಅಪಾರ್ಟ್‌ಮೆಂಟ್‌ನಲ್ಲಿ 54 ವರ್ಷದ ಖಾನ್ ಅವರ ಮೇಲೆ ಚಾಕುವಿನಿಂದ ಇರಿಯಲಾಗಿತ್ತು. ನಂತರ ನಟನಿಗೆ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಐದು ದಿನಗಳ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

ಜನವರಿ 19ರಂದು, ನೆರೆಯ ಥಾಣೆಯ ಶರೀಫುಲ್ ಇಸ್ಲಾಂ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ನಟನ ಬೆನ್ನುಮೂಳೆಯ ಬಳಿ ಸಿಲುಕಿದ್ದ ಚಾಕುವಿನ ತುಂಡು ಮತ್ತು ಅಪರಾಧದ ಸ್ಥಳದಲ್ಲಿ ಕಂಡುಬಂದ ಚಾಕುವಿನ ತುಂಡು ಆರೋಪಿಯಿಂದ ವಶಪಡಿಸಿಕೊಂಡ ಆಯುಧಕ್ಕೆ ಹೊಂದಿಕೆಯಾಗುತ್ತದೆ ಎಂದು ಪೊಲೀಸರು ಕಳೆದ ವಾರ ಇಲ್ಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಆರೋಪಿಯ ಜಾಮೀನು ಅರ್ಜಿಯನ್ನು ವಿರೋಧಿಸಿರುವ ಪೊಲೀಸರು, ಅಪರಾಧವು ತುಂಬಾ “ಗಂಭೀರ ಸ್ವರೂಪದ್ದಾಗಿದೆ” ಮತ್ತು ಆರೋಪಿಯ ವಿರುದ್ಧ “ಬಲವಾದ ಪುರಾವೆಗಳು” ಲಭ್ಯವಿದೆ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...