ಹರಿಯಾಣ | ಅಂಬೇಡ್ಕರ್ ಪ್ರತಿಮೆ ಧ್ವಂಸ : ಪರಿಸ್ಥಿತಿ ಉದ್ವಿಗ್ನ

Date:

Advertisements

ಹರಿಯಾಣದ ಗುರುಗ್ರಾಮ ಜಿಲ್ಲೆಯ ಕಂಕ್ರೋಲಾ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಘಟನೆ ಬಳಿಕ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಈ ಕುರಿತು ಖೇರ್ಕಿ ದೌಲಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಯುಜಿಸಿ ನಿಯಮಗಳ ವಿರುದ್ಧ ದಕ್ಷಿಣದ 4 ರಾಜ್ಯಗಳ ಜಂಟಿ ನಿರ್ಣಯ; ಕರಡು ಹಿಂಪಡೆಯಲು ಒತ್ತಾಯ

Advertisements

ಗುರುಗ್ರಾಮ ಪುರಸಭೆಯ ಸಿಬ್ಬಂದಿಯೋರ್ವರು ಅಂಬೇಡ್ಕರ್ ಪ್ರತಿಮೆಯ ತಲೆ ದೇಹದಿಂದ ಬೇರ್ಪಟ್ಟಿರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಆ ಬಳಿಕ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಾವು ವಿಧ್ವಂಸಕ ಕೃತ್ಯ ಎಸಗಿದ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಖೇರ್ಕಿ ದೌಲಾ ಪೊಲೀಸ್ ಠಾಣೆಯ ಎಸ್ಎಚ್ಒ ಸತ್ಯೇಂದರ್ ಸಿಂಗ್ ಹೇಳಿದ್ದಾರೆ.

ಭೀಮ್ ಸೇನಾ ನಾಯಕ ಸತ್ಪಾಲ್ ತನ್ವರ್ ಈ ಕುರಿತು ಪ್ರತಿಕ್ರಿಯಿಸಿ, ಪ್ರತಿಮೆಯನ್ನು ಧ್ವಂಸಗೊಳಿಸಿದ ಆರೋಪಿಯನ್ನು ಎರಡು ದಿನಗಳಲ್ಲಿ ಬಂಧಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X