ರಾಮಮಂದಿರ, ಬದರಿನಾಥದ ನಂತರ ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲೂ ದೇಣಿಗೆ ಲೂಟಿ ಬಯಲು!

Date:

ಅಯೋಧ್ಯೆಯ ರಾಮಮಂದಿರ ದೇಣಿಗೆ ಲೂಟಿ ಪ್ರಕರಣವು ಬಯಲಾಗುತ್ತಿದ್ದಂತೆ, ಉತ್ತರಾಖಂಡದ ಬದರಿನಾಥ ದೇವಾಲಯದಲ್ಲಿ ನಡೆದ ದೇಣಿಗೆ ದುರುಪಯೋಗವೂ ಬಹಿರಂಗವಾಗಿತ್ತು. ಇದೀಗ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಅಗರ್-ಮಾಲ್ವಾ ಜಿಲ್ಲೆಯ ಪ್ರಸಿದ್ಧ ಮಾ ಬಾಗಲಮುಖಿ ದೇವಾಲಯದಲ್ಲಿ ಇದೇ ರೀತಿ ದೇಣಿಗೆ ದುರುಪಯೋಗ ಆರೋಪ ಕೇಳಿಬಂದಿದೆ.

- Advertisement -

ಸರ್ಕಾರದ ಅಧಿಕೃತ ಸಮಿತಿಯ ಕಣ್ಣು ತಪ್ಪಿಸಿ, ಖಾಸಗಿ ವ್ಯಕ್ತಿಗಳ ತಂಡವೊಂದು ದೇವಸ್ಥಾನದ ಆವರಣದಲ್ಲಿ ಭಕ್ತರಿಂದ ಬಂದ ಕೋಟ್ಯಂತರ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ಲೂಟಿ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ದೂರುಗಳು ದಾಖಲಾಗುತ್ತಿದ್ದಂತೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಅಗರ್-ಮಾಲ್ವಾ ಜಿಲ್ಲಾಧಿಕಾರಿ ಪ್ರೀತಿ ಯಾದವ್ ಅವರು ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನೂ ಓದಿ: ರಾಮಮಂದಿರ ಲೂಟಿ ಪ್ರಕರಣದ ಎಫ್‌ಐಆರ್‌: RSS ತಿಮಿಂಗಿಲಗಳ ರಕ್ಷಿಸಲಾಗುತ್ತಿದೆಯೇ?

ಮೂವರು ಸದಸ್ಯರ ತನಿಖಾ ಸಮಿತಿಗೆ ಅಗರ್-ಮಾಲ್ವಾ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಬಿಎಸ್ ಸೋಲಂಕಿ ನೇತೃತ್ವ ವಹಿಸಲಿದ್ದಾರೆ. ಅಗರ್-ಮಾಲ್ವಾ ಜಿಲ್ಲಾ ಖಜಾನೆ ಅಧಿಕಾರಿ ಮನೀಷ್ ಸೋಲಂಕಿ ಮತ್ತು ನಲ್ಖೇಡಾ ಪುರಸಭೆಯ ಮುಖ್ಯ ಪುರಸಭೆ ಅಧಿಕಾರಿ ಮಿನಿ ಅಗರ್‌ವಾಲ್ ತನಿಖಾ ಸಮಿತಿಯ ಇತರೆ ಸದಸ್ಯರಾಗಿದ್ದಾರೆ. ಈ ತಂಡಕ್ಕೆ ಏಳು ದಿನಗಳಲ್ಲಿ ವರದಿ ನೀಡಲು ಗಡುವು ನೀಡಲಾಗಿದೆ.

ಬಿಜೆಪಿ ಆಡಳಿತದಲ್ಲಿ ಅಕ್ರಮ ನಡೆದಿದ್ದು ಹೇಗೆ?

ಮಾ ಬಾಗಲಮುಖಿ ದೇವಾಲಯವು ಸಂಪೂರ್ಣವಾಗಿ ಮಧ್ಯಪ್ರದೇಶ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ನಿಯಂತ್ರಣದಲ್ಲಿದ್ದು, ಸ್ಥಳೀಯ ಉಪವಿಭಾಗಾಧಿಕಾರಿ (SDM) ನೇತೃತ್ವದ ಸಮಿತಿ ಇದರ ಆಡಳಿತವನ್ನು ನೋಡಿಕೊಳ್ಳುತ್ತದೆ. ಆದರೆ, ಕಳೆದ ಎರಡು ವರ್ಷಗಳಿಂದ ದೇವಸ್ಥಾನದ ಆಡಳಿತ ಮಂಡಳಿಗೆ ಯಾವುದೇ ಸಂಬಂಧವಿಲ್ಲದ “ನೋಂದಣಿಯಾಗದ ಖಾಸಗಿ ಸಮಿತಿ”ಯೊಂದು ಕಾನೂನುಬಾಹಿರವಾಗಿ ಸಕ್ರಿಯವಾಗಿತ್ತು.

ಈ ಖಾಸಗಿ ತಂಡವು ದೇವಸ್ಥಾನದ ಹೆಸರಿನಲ್ಲೇ ನಕಲಿ ದೇಣಿಗೆ ರಶೀದಿ ಪುಸ್ತಕಗಳನ್ನು ಮುದ್ರಿಸಿತ್ತು. ದೇಶದ ವಿವಿಧ ಮೂಲೆಗಳಿಂದ ಬರುವ ಗಣ್ಯರು, ರಾಜಕಾರಣಿಗಳು ಹಾಗೂ ಸಾಮಾನ್ಯ ಭಕ್ತರಿಂದ ನಗದು, ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ದೇಣಿಗೆಯಾಗಿ ಪಡೆದು, ತಮ್ಮದೇ ಆದ ಖಾಸಗಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿಕೊಳ್ಳುತ್ತಿತ್ತು. ಈ ಲೂಟಿಯ ಮೊತ್ತ ಲಕ್ಷಾಂತರ ಅಥವಾ ಕೋಟ್ಯಂತರ ರೂಪಾಯಿ ದಾಟಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ರಾಮಮಂದಿರ ಲೂಟಿ | ತನಿಖೆ-ಬಂಧನದಿಂದ RSSನ ತಿಮಿಂಗಿಲಗಳು ಪಾರು!

ಹಗರಣದ ಕುರಿತು ಸದ್ಯ ಮಧ್ಯಪ್ರದೇಶದ ರಾಜಕೀಯ ವಲಯದಲ್ಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉಮಂಗ್ ಸಿಂಘಾರ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ರಾಮಮಂದಿರದ ಹಗರಣದ ಬೆನ್ನಲ್ಲೇ ಬಾಗಲಮುಖಿ ದೇವಾಲಯದಲ್ಲೂ ಇಂತಹ ದೊಡ್ಡ ಲೂಟಿ ನಡೆದಿರುವುದು ಹಿಂದೂ ಧರ್ಮದ ಭಕ್ತರ ನಂಬಿಕೆಗೆ ಬಗೆದ ದ್ರೋಹ. ಸರ್ಕಾರ ತಪ್ಪಿತಸ್ಥರನ್ನು ತಕ್ಷಣ ಜೈಲಿಗೆ ಕಳುಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನು ಈಗಾಗಲೇ ಅಯೋಧ್ಯೆಯ ರಾಮಮಂದಿರದಲ್ಲಿ ಕಾಣಿಕೆ ಪೆಟ್ಟಿಗೆಗಳಿಂದ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಸುಮಾರು 70ಕ್ಕೂ ಹೆಚ್ಚು ಬಾರಿ ಕಳ್ಳತನ ನಡೆಸಿರುವುದು ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಈಗಾಗಲೇ 8 ಜನರನ್ನು ಬಂಧಿಸಿ ಸುಮಾರು 80 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆರ್‌ಎಸ್‌ಎಸ್‌ನ ಪ್ರಮುಖ ನಾಯಕರನ್ನು ಈ ಪ್ರಕರಣದಿಂದ ಉತ್ತರ ಪ್ರದೇಶ ಸರ್ಕಾರ ರಕ್ಷಿಸುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪತ್ರದ ಆಧಾರದ ಮೇಲೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (BKTC) ಅಧ್ಯಕ್ಷರ ಕಚೇರಿಯ ಸಿಬ್ಬಂದಿ ಪ್ರಮೋದ್ ನೌಟಿಯಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿ, ಆತನನ್ನು ಅಮಾನತುಗೊಳಿಸಲಾಗಿದೆ. ಇಲ್ಲಿನ ಅಕ್ರಮಗಳ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ನಡುವೆ ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿಯೂ ದೇಣಿಗೆ ಅಕ್ರಮ ಬಯಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಎನ್ ಎಸ್ ಎಸ್ ದಿನಾಚರಣೆ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಳೆಗಟ್ಟುತ್ತಿರುವ ಜೆನ್-ಝಿ ಹೋರಾಟ, ಕೇಂದ್ರ ಸರ್ಕಾರದ...