ತಾಂತ್ರಿಕ ದೋಷ: ಚಂಡೀಗಢ-ಲಕ್ನೋ ವಿಮಾನ ರದ್ದುಗೊಳಿಸಿದ ಇಂಡಿಗೋ

Date:

ಚಂಡೀಗಢದಿಂದ ಲಕ್ನೋಗೆ ಹಾರಲಿದ್ದ ಇಂಡಿಗೋ ವಿಮಾನ 6E 146ರಲ್ಲಿ ಪೈಲಟ್‌ಗೆ ತಾಂತ್ರಿಕ ದೋಷ ಕಂಡುಬಂದ ಕಾರಣ ವಿಮಾನವನ್ನು ರದ್ದುಗೊಳಿಸಲಾಗಿದೆ. ವಿಮಾನ ಹಾರಾಟಕ್ಕೂ ಮುನ್ನ ತಪಾಸಣೆ ಮಾಡುವಾಗ ಪೈಲಟ್‌ಗೆ ತಾಂತ್ರಿಕ ದೋಷ ಕಂಡುಬಂದಿದೆ.

- Advertisement -

ವಿಮಾನ ಟೇಕ್ ಆಫ್ ಆಗಲು ಸಿದ್ಧತೆ ನಡೆಸುತ್ತಿದ್ದಾಗ ತಾಂತ್ರಿಕ ದೋಷ ಕಂಡುಬಂದಿದೆ. ಬಳಿಕ ಎಲ್ಲಾ ಪ್ರಯಾಣಿಕರಿಗೆ ಪರ್ಯಾಯ ವಿಮಾನ ವ್ಯವಸ್ಥೆ ಮಾಡಲಾಗಿದೆ ಅಥವಾ ಪೂರ್ಣ ಮರುಪಾವತಿಯನ್ನು ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | ಕಾಡುವ ಹಲವು ಪ್ರಶ್ನೆಗಳು, ತಜ್ಞರೇನು ಹೇಳುತ್ತಾರೆ?

ಸಮಸ್ಯೆ ಪತ್ತೆಯಾದ ನಂತರ, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ, ಬೇರೆ ವ್ಯವಸ್ಥೆ ಮಾಡಲಾಗಿದೆ ಎಂದು ವಿಮಾನಯಾನ ಸಂಸ್ಥೆ ಖಚಿತಪಡಿಸಿದೆ.

ಸದ್ಯ ತಾಂತ್ರಿಕ ದೋಷವನ್ನು ವಿಮಾನಯಾನ ಸಂಸ್ಥೆಯ ನಿರ್ವಹಣಾ ತಂಡವು ತನಿಖೆ ಮಾಡುತ್ತಿದೆ. ಘಟನೆ ವೇಳೆ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದೂ ಸಂಸ್ಥೆ ಹೇಳಿದೆ.

ಇತ್ತೀಚೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ 260ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ವಿಮಾನದಲ್ಲಿದ್ದ ಓರ್ವ ವ್ಯಕ್ತಿ ಬಿಟ್ಟು 241 ಮಂದಿ ಸಾವನ್ನಪ್ಪಿದರೆ, ವಿಮಾನ ಅಪ್ಪಳಿಸಿದ ಹಾಸ್ಟೆಲ್‌ನಲ್ಲಿಯೂ ಹಲವು ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಬಳಿಕ ವಿಮಾನ ರದ್ದು ಪ್ರಕರಣಗಳು ಹೆಚ್ಚು ಮುನ್ನೆಲೆಗೆ ಬರುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...