ಮೈಕ್ರೋಸಾಫ್ಟ್ ಬಳಿಕ ಈಗ ಯೂಟ್ಯೂಬ್ ಡೌನ್; ಮೀಮ್ಸ್‌ಗಳನ್ನು ಹಂಚಿಕೊಂಡ ನೆಟ್ಟಿಗರು

Date:

ಮೈಕ್ರೋಸಾಫ್ಟ್ ಬಳಿಕ ಈಗ ಭಾರತದಲ್ಲಿ ಕೆಲವು ಬಳಕೆದಾರರಿಗೆ ಯೂಟ್ಯೂಬ್ ಡೌನ್ ಆಗಿದ್ದು ಕೆಲವು ಯೂಟ್ಯೂಬ್ ಬಳಕೆದಾರರಿಗೆ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಯೂಟ್ಯೂಬ್ ಅಪ್ಲಿಕೇಶನ್, ವೆಬ್‌ಸೈಟ್ ಬಳಸುವಾಗ ಮತ್ತು ವಿಡಿಯೋಗಳನ್ನು ಅಪ್‌ಲೋಡ್ ಮಾಡುವಾಗ ಸಮಸ್ಯೆ ಎದುರಾಗಿದೆ ಎಂದು ವರದಿಯಾಗಿದೆ.

- Advertisement -

ಸೋಮವಾರ ಮಧ್ಯಾಹ್ನ 1.30 ಗಂಟೆಯಿಂದ ಯೂಟ್ಯೂಬ್‌ನಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು ಮಧ್ಯಾಹ್ನ 3.15 ಗಂಟೆ ವೇಳೆಗೆ ಹಲವಾರು ಮಂದಿ ಯೂಟ್ಯೂಬ್ ಬಳಕೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಮೀಮ್ಸ್‌ಗಳನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವೆಬ್‌ಸೈಟ್‌ನ ಪ್ರಕಾರ ಶೇಕಡ 43ರಷ್ಟು ಬಳಕೆದಾರರು ಅಪ್ಲಿಕೇಶನ್‌ನಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ. ಶೇಕಡ 33ರಷ್ಟು ಬಳಕೆದಾರರಿಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನು ಶೇಕಡ 23ರಷ್ಟು ಬಳಕೆದಾರರಿಗೆ ಯೂಟ್ಯೂಬ್ ವೆಬ್‌ಸೈಟ್‌ನಲ್ಲಿ ಸಮಸ್ಯೆ ಕಂಡುಬಂದಿದೆ.

ಪ್ರಸ್ತುತ ಯೂಟ್ಯೂಬ್‌ನಲ್ಲಿ ಯಾವ ಸಮಸ್ಯೆ ಉಂಟಾಗಿದೆ ಎಂಬುವುದು ತಿಳಿದುಬಂದಿಲ್ಲ. ಈ ಬಗ್ಗೆ ಯೂಟ್ಯೂಬ್‌ ಸಪೋರ್ಟ್‌ ಪೇಜ್‌ನಲ್ಲಿ ಅಥವಾ ಸಾಮಾಜಿಕ ಮಾಧ್ಯಮ ಚಾನಲ್‌ಗಳಲ್ಲಿ ಯಾವುದೇ ವರದಿ ಮಾಡಲಾಗಿಲ್ಲ.

ಯೂಟ್ಯೂಬ್‌ನಲ್ಲಿ ಸಮಸ್ಯೆಯನ್ನು ಎದುರಿಸುತ್ತಿರುವ ನೆಟ್ಟಿಗರು ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. “ವಿಡಿಯೋ ಅಪ್‌ಲೋಡ್ ಮಾಡಿದ ಬಳಿಕ ಅಪ್‌ಲೋಡ್‌ ಫೀಡ್‌ನಲ್ಲಿ (sic) ವಿಡಿಯೋಗಳು ಕಾಣಿಸುತ್ತಿಲ್ಲ, ಆದರೆ ಅಪ್‌ಲೋಡ್ ಆಗಿದೆ” ಎಂದು ಹೇಳಿದರೆ, ಇನ್ನು ಕೆಲವು ನೆಟ್ಟಿಗರು “ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ” ಎಂದಿದ್ದಾರೆ. ಸದ್ಯ ಎಕ್ಸ್‌ನಲ್ಲಿ (ಟ್ವಿಟ್ಟರ್‌) ಮೀಮ್ಸ್‌ಗಳು ಹರಿದಾಡುತ್ತಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...