ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರದ ಟಿಕೆಟ್ ಬುಕಿಂಗ್ ರದ್ದುಗೊಳಿಸಿ ಹಿಮಾಚಲದತ್ತ ಮುಖ ಮಾಡಿದ ಪ್ರವಾಸಿಗರು

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಪ್ರವಾಸಿಗರು ಈಗ ಜಮ್ಮು ಮತ್ತು ಕಾಶ್ಮೀರ ಬದಲಾಗಿ ಹಿಮಾಚಲ ಪ್ರದೇಶದತ್ತ ಮುಖ ಮಾಡಿದ್ದಾರೆ ಎಂದು ವರದಿಯಾಗಿದೆ.

- Advertisement -

ದೇಶೀಯ ಮತ್ತು ಅಂತಾರಾಷ್ಟ್ರೀಯ ಟಿಕೆಟ್ ಬುಕಿಂಗ್‌ಗಳಲ್ಲಿ ಸರಿಸುಮಾರು ಶೇಕಡ 15-20ರಷ್ಟು ಪ್ರವಾಸಿಗರು ಕಾಶ್ಮೀರ ಪ್ರವಾಸದಿಂದ ಹಿಂದೆ ಸರಿದಿದ್ದಾರೆ. ಮನಾಲಿ, ಶಿಮ್ಲಾ ಮತ್ತು ಧರ್ಮಶಾಲಾ ಸೇರಿದಂತೆ ಹಿಮಾಚಲ ಪ್ರದೇಶದ ಜನಪ್ರಿಯ ತಾಣಗಳಿಗೆ ಪ್ರವಾಸ ಹೋಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಘೋಷಿಸಿದ ಜಮ್ಮು ಕಾಶ್ಮೀರ ಸರ್ಕಾರ

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದರೂ ಜನರು ‘ಕಾದು ನೋಡುವ’ ನೀತಿಯನ್ನು ಅಳವಡಿಸಿಕೊಂಡಿರುವುದರಿಂದ ಜನರ ಸಂಖ್ಯೆ ನಿಧಾನವಾಗಿ ಹೆಚ್ಚಾಗಬಹುದು ಎಂಬ ನಿರೀಕ್ಷೆಯಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಕಾಂಗ್ರಾದ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ನ ಅಧ್ಯಕ್ಷ ಅಶ್ವನಿ ಬಂಬಾ, “ಭಯೋತ್ಪಾದನಾ ದಾಳಿಯ ನಂತರ ಪ್ರವಾಸ ನಿರ್ವಾಹಕರು ಮತ್ತು ಪ್ರವಾಸಿಗರು ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಬುಕಿಂಗ್‌ ಮಾಡುವ ಬಗ್ಗೆ ವಿಚಾರಿಸಿದ್ದಾರೆ. ಈ ಏರಿಕೆಯು ಗಮನಾರ್ಹವಾಗಿರುತ್ತದೆ” ಎಂದು ತಿಳಿಸಿದ್ದಾರೆ.

“ವಾಸ್ತವವಾಗಿ ಕೇವಲ 15-20% ಪ್ರವಾಸಿಗರು ಮಾತ್ರ ಜಮ್ಮು ಮತ್ತು ಕಾಶ್ಮೀರ ಬದಲಾಗಿ ಹಿಮಾಚಲ ಪ್ರದೇಶದತ್ತ ಮುಖ ಮಾಡಿದ್ದಾರೆ. ಉಳಿದವರು ಈ ಬೇಸಿಗೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಹೊರಗೆ ಹೋಗದಿರುವ ನಿರ್ಧಾರ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಉಗ್ರರ ದಾಳಿ ಬೆದರಿಕೆ: ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಮುಚ್ಚಿದ ಸರ್ಕಾರ

“ಪ್ರಸ್ತುತ ರಾಜ್ಯಾದ್ಯಂತ ಹೋಟೆಲ್‌ಗಳ ಜನಸಂಖ್ಯೆ ಸುಮಾರು ಶೇಕಡ 40ರಷ್ಟಿದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಇತರ ರಾಜ್ಯಗಳಿಂದ ಪ್ರಯಾಣಿಸುವ ಪ್ರವಾಸಿ ಗುಂಪುಗಳ ಬುಕಿಂಗ್‌ಗಳನ್ನು ಬದಲಾಯಿಸಿದೆ. ಕಾಶ್ಮೀರದಲ್ಲಿ ತಕ್ಷಣದ ಬುಕಿಂಗ್‌ಗಳನ್ನು ರದ್ದುಗೊಳಿಸಲಾಗಿಲ್ಲ” ಎಂದರು.

ಹಿಮಾಚಲದಲ್ಲಿ, ಮನಾಲಿಯಲ್ಲಿ ಗರಿಷ್ಠ ಸಂಖ್ಯೆಯ ಬುಕಿಂಗ್‌ಗಳು ಸುಮಾರು 20% ರಷ್ಟಿದ್ದರೆ, ಧರ್ಮಶಾಲಾ, ದಲ್‌ಹೌಸಿರ್ ಮತ್ತು ಶಿಮ್ಲಾದಲ್ಲಿ ತೀರಾ ಕಡಿಮೆ ಇವೆ. ಧರ್ಮಶಾಲಾದಲ್ಲಿ ಐಪಿಎಲ್ ಪಂದ್ಯಗಳಿಗೆ ಈಗಾಗಲೇ ಮುಂಗಡ ಬುಕಿಂಗ್ ಮಾಡಲಾಗಿದೆ ಎಂದು ಅಶ್ವನಿ ಬಂಬಾ ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...