ಪಂಜಾಬ್ ಸರ್ಕಾರ ಭದ್ರತೆ ಹಿಂಪಡೆದ ಬಳಿಕ ಹರ್ಭಜನ್ ಸಿಂಗ್‌ಗೆ ಕೇಂದ್ರದಿಂದ CRPF ಭದ್ರತೆ

Date:

ಇತ್ತೀಚೆಗೆ ಎಎಪಿ ತೊರೆದು ಬಿಜೆಪಿಗೆ ಸೇರಿದ ಪಂಜಾಬ್‌ನ ಜಲಂಧರ್‌ನಲ್ಲಿರುವ ಕ್ರಿಕೆಟಿಗ ಮತ್ತು ರಾಜಕಾರಣಿ ಹರ್ಭಜನ್ ಸಿಂಗ್ ಅವರಿಗೆ ನೀಡಿದ್ದ ಭದ್ರತೆಯನ್ನು ಪಂಜಾಬ್ ಸರ್ಕಾರವು ಹಿಂಪಡೆದಿದೆ. ಇದಾದ ಕೂಡಲೇ ಕೇಂದ್ರ ಗೃಹ ಸಚಿವಾಲಯ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಭದ್ರತೆಯನ್ನು ಹರ್ಭಜನ್ ಸಿಂಗ್ ಅವರಿಗೆ ನೀಡಿದೆ.

- Advertisement -

ಹರ್ಭಜನ್ ಸಿಂಗ್ ಅವರ ನಿವಾಸದ ಹೊರಗೆ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಒಂದು ದಿನದ ನಂತರ ಸಿಆರ್‌ಪಿಎಫ್ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? ಬಿಜೆಪಿ ಸೇರಿದ 7 ಸಂಸದರ ವಜಾಗೊಳಿಸಿ: ರಾಜ್ಯಸಭಾ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ ಎಎಪಿ

ರಾಘವ್ ಛಡ್ಡಾ ಜೊತೆಗೆ ಬಿಜೆಪಿಗೆ ಸೇರಿದ ಆರು ಶಾಸಕರಲ್ಲಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೂಡಾ ಒಬ್ಬರು. ಎಎಪಿ ತೊರೆಯುತ್ತಿದ್ದಂತೆ ಸಿಂಗ್ ಅವರಿಗೆ ಈ ಹಿಂದೆ ನೀಡಲಾಗಿದ್ದ 9–10 ಅಧಿಕಾರಿಗಳನ್ನು ಒಳಗೊಂಡ ಪೊಲೀಸ್ ಭದ್ರತೆಯನ್ನು ಶನಿವಾರ ಹಿಂಪಡೆಯಲಾಗಿದೆ. ಇದೀಗ ಭಾನುವಾರ ಜಲಂಧರ್‌ನಲ್ಲಿರುವ ಅವರ ನಿವಾಸದ ಹೊರಗೆ CRPF ನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶನಿವಾರ ಎಎಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ, ಹರ್ಭಜನ್ ಅವರ ಮನೆಯ ಗೋಡೆಯ ಮೇಲೆ “ಗದ್ದಾರ್” (ದೇಶದ್ರೋಹಿ) ಎಂದು ಸ್ಪ್ರೇ ಪೇಂಟ್ ಮೂಲಕ ಬರೆಯಲಾಗಿತ್ತು. ಪಂಜಾಬ್‌ನಲ್ಲಿ ಎಎಪಿ ತೊರೆದು ಬಿಜೆಪಿಗೆ ಸೇರಿದ ಇತರ ಇಬ್ಬರು ರಾಜ್ಯಸಭಾ ಸದಸ್ಯರಾದ ಅಶೋಕ್ ಮಿತ್ತಲ್ ಮತ್ತು ರಾಜಿಂದರ್ ಗುಪ್ತಾ ಅವರ ನಿವಾಸಗಳ ಹೊರಗೆಯೂ ಇದೇ ರೀತಿ ಪ್ರತಿಭಟನೆಗಳು ನಡೆದಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಮದ್ಯದ ಅಮಲಿನಲ್ಲಿ ಪತ್ನಿಯ ಹೊಟ್ಟೆಗೆ ಡಬ್ಬಣದಿಂದ ಚುಚ್ಚಿದ ಪತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಮದ್ಯ ಸೇವಿಸಿ ಮನೆಗೆ ಬಂದ ಪತಿ,...

ಬೀದರ್‌ | ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ ಅತ್ಯಗತ್ಯ : ವೀರಣ್ಣ ದಂಡೆ

ಹಳೆಗನ್ನಡ ಸಾಹಿತ್ಯ, ಶಾಸನಗಳು ಹಾಗೂ ಹಸ್ತಪ್ರತಿಗಳು ನಮ್ಮ ಜ್ಞಾನ ಪರಂಪರೆಯ ಮೂಲ...

ಪಶ್ಚಿಮ ಏಷ್ಯಾ ಸಂಘರ್ಷ: 14 ನಾವಿಕರು ಸೇರಿ 22 ಭಾರತೀಯರ ಸಾವು: ಕೇಂದ್ರ ಮಾಹಿತಿ

​ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ 14 ನಾವಿಕರು ಸೇರಿದಂತೆ 22 ಜನ...

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...