“ಸನಾತನ ವಿರೋಧಿ ಘೋಷಣೆ ಕೂಗಲಾಗದು” ಎಂದು ಹೇಳಿ ಗುರುವಾರ ಬೆಳಿಗ್ಗೆ ರಾಜೀನಾಮೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಮಧ್ಯಾಹ್ನವಾಗುತ್ತಿದ್ದಂತೆ ಬಿಜೆಪಿ ಸೇರ್ಪಡೆ ಆಗಿದ್ದಾರೆ.
ಕಾಂಗ್ರೆಸ್‌ಗೆ ನೀಡಿದ ಎರಡು ಪುಟಗಳ ರಾಜೀನಾಮೆ ಪತ್ರದಲ್ಲಿ ಗೌರವ್ ವಲ್ಲಭ್ ಪಕ್ಷವು ಸಾಗುತ್ತಿರುವ ದಿಕ್ಕಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. “ಪಕ್ಷವು ದಿಕ್ಕಿಲ್ಲದೆ ಸಾಗುತ್ತಿದೆ. ಇಂದು ಕಾಂಗ್ರೆಸ್ ಪಕ್ಷ ಮುನ್ನಡೆಯುತ್ತಿರುವ ದಿಕ್ಕು ತೋಚದ ರೀತಿಯಲ್ಲಿ ನನಗೆ ನೆಮ್ಮದಿ ಇಲ್ಲದಂತಾಗಿದೆ” ಎಂದು ಹೇಳಿದ್ದರು.
ಇದನ್ನು ಓದಿದ್ದೀರಾ? ಸನಾತನ ವಿರೋಧಿ ಘೋಷಣೆ ಕೂಗಲಾಗದು: ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ರಾಜೀನಾಮೆ
“ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದಾಗಲಿ, ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ನಿಂದಿಸುವುದಾಗಲಿ ನಾನು ಹಗಲಿರುಳು ಮಾಡಲಾರೆ. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳು ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಗೌರವ್ ವಲ್ಲಭ್ ಟ್ವೀಟ್ ಮಾಡಿದ್ದರು.
#WATCH | Delhi: Former Congress leader Gourav Vallabh joins BJP, in the presence of BJP General Secretary Vinod Tawde. pic.twitter.com/NAc0kX22vW
— ANI (@ANI) April 4, 2024
ಗೌರವ್ ವಲ್ಲಭ್ ಅವರು 2023 ರಲ್ಲಿ ಉದಯಪುರ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಪರಾವಭಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಯು 32,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.
ಗೌರವ್ ವಲ್ಲಭ್ ಅವರು 2019 ರಲ್ಲಿ ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಪೂರ್ವದಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದಾರೆ. ಈ ಚುನಾವಣೆಯಲ್ಲಿ ಗೌರವ್ 18,000 ಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು ಆಗಿನ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ಸರಯು ರಾಯ್ ನಂತರ ಮೂರನೇ ಸ್ಥಾನದಲ್ಲಿದ್ದರು.
ನಿನ್ನೆ ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮುಖಂಡ, ಬಾಕ್ಸರ್ ವಿಜೇಂದರ್ ಸಿಂಗ್ ಕೂಡ ಬಿಜೆಪಿ ಸೇರಿದ್ದರು.