ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಗೌರವ್ ವಲ್ಲಭ್ ಬಿಜೆಪಿ ಸೇರ್ಪಡೆ

Date:

“ಸನಾತನ ವಿರೋಧಿ ಘೋಷಣೆ ಕೂಗಲಾಗದು” ಎಂದು ಹೇಳಿ ಗುರುವಾರ ಬೆಳಿಗ್ಗೆ ರಾಜೀನಾಮೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಮಧ್ಯಾಹ್ನವಾಗುತ್ತಿದ್ದಂತೆ ಬಿಜೆಪಿ ಸೇರ್ಪಡೆ ಆಗಿದ್ದಾರೆ.

- Advertisement -

ಕಾಂಗ್ರೆಸ್‌ಗೆ ನೀಡಿದ ಎರಡು ಪುಟಗಳ ರಾಜೀನಾಮೆ ಪತ್ರದಲ್ಲಿ ಗೌರವ್ ವಲ್ಲಭ್ ಪಕ್ಷವು ಸಾಗುತ್ತಿರುವ ದಿಕ್ಕಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. “ಪಕ್ಷವು ದಿಕ್ಕಿಲ್ಲದೆ ಸಾಗುತ್ತಿದೆ. ಇಂದು ಕಾಂಗ್ರೆಸ್ ಪಕ್ಷ ಮುನ್ನಡೆಯುತ್ತಿರುವ ದಿಕ್ಕು ತೋಚದ ರೀತಿಯಲ್ಲಿ ನನಗೆ ನೆಮ್ಮದಿ ಇಲ್ಲದಂತಾಗಿದೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ?  ಸನಾತನ ವಿರೋಧಿ ಘೋಷಣೆ ಕೂಗಲಾಗದು: ಕಾಂಗ್ರೆಸ್‌ ವಕ್ತಾರ ಗೌರವ್ ವಲ್ಲಭ್ ರಾಜೀನಾಮೆ

“ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದಾಗಲಿ, ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ನಿಂದಿಸುವುದಾಗಲಿ ನಾನು ಹಗಲಿರುಳು ಮಾಡಲಾರೆ. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳು ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಗೌರವ್ ವಲ್ಲಭ್ ಟ್ವೀಟ್ ಮಾಡಿದ್ದರು.

ಗೌರವ್ ವಲ್ಲಭ್ ಅವರು 2023 ರಲ್ಲಿ ಉದಯಪುರ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಪರಾವಭಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಯು 32,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಗೌರವ್ ವಲ್ಲಭ್ ಅವರು 2019 ರಲ್ಲಿ ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಪೂರ್ವದಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದಾರೆ. ಈ ಚುನಾವಣೆಯಲ್ಲಿ ಗೌರವ್ 18,000 ಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದು ಆಗಿನ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ಸರಯು ರಾಯ್ ನಂತರ ಮೂರನೇ ಸ್ಥಾನದಲ್ಲಿದ್ದರು.

ನಿನ್ನೆ ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮುಖಂಡ, ಬಾಕ್ಸರ್ ವಿಜೇಂದರ್ ಸಿಂಗ್ ಕೂಡ ಬಿಜೆಪಿ ಸೇರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...