12 ವರ್ಷ ಜೈಲು ಶಿಕ್ಷೆ ಅನುಭವಿಸಿದ ಬಳಿಕ, ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

Date:

ಪತ್ನಿಯನ್ನು ಸುಟ್ಟು ಕೊಂದಿದ್ದಾನೆಂಬ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, 12 ವರ್ಷ ಜೈಲುವಾಸ ಅನುಭವಿಸಿದ ಬಳಿಕ, ತಮಿಳುನಾಡಿನ ವ್ಯಕ್ತಿಯನ್ನು ನಿರ್ದೋಷಿ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಆತನನ್ನು ಪ್ರಕರಣದಿಂದ ಖುಲಾಲೆಗೊಳಿಸಿ ತೀರ್ಪು ನೀಡಿದೆ. ಮೃತ ಮಹಿಳೆಯು ಸಾವನ್ನಪ್ಪಿದ ಸಮಯದಲ್ಲಿ ನೀಡಿದ್ದ ಹೇಳಿಕೆಗಳು ಅಸಂತವಾಗಿವೆ ಎಂಬ ಅಭಿಪ್ರಾಯದ ಮೇಲೆ ಸುಪ್ರೀಂ ಕೋರ್ಟ್‌ ಈ ತೀರ್ಪು ನೀಡಿದೆ.

- Advertisement -

ತಮಿಳುನಾಡಿನಲ್ಲಿ, ಸುಮಾರು 13 ವರ್ಷಗಳ ಹಿಂದೆ ಮಹಿಳೆಯೊಬ್ಬರು ಬೆಂಕಿ ಹೊತ್ತಿಕೊಂಡು ಸಾವನ್ನಪ್ಪಿದ್ದರು. ಗಂಭೀರ ಸುಟ್ಟ ಗಾಯಗಳಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆಕೆ ಸಾವನ್ನಪ್ಪುವುದಕ್ಕೂ ಮುನ್ನ, ಹೇಳಿಕೆಗಳನ್ನು ನೀಡಿದ್ದರು. ಆದರೆ, ಆಕೆ ಎರಡು ರೀತಿಯ ಹೇಳಿಕೆ ನೀಡಿದ್ದರಿಂದ, ಮಹಿಳೆಯ ಹೇಳಿಕೆಯಲ್ಲಿ ವಿರೋಧಾಭಾಸಗಳಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೃತ ಮಹಿಳೆ ತನ್ನ ಮೊದಲ ಹೇಳಿಕೆಯಲ್ಲಿ ತನ್ನ ಗಂಡನ ವಿರುದ್ಧ ಯಾವುದೇ ಆರೋಪ ಮಾಡಿರಲಿಲ್ಲ. ಬದಲಾಗಿ, ಅಡುಗೆ ಮಾಡುವಾಗ ತನಗೆ ಅರಿವಿಲ್ಲದೆ ಬೆಂಕಿ ಹೊತ್ತಿಕೊಂಡಿತ್ತು ಎಂದು ಹೇಳಿದ್ದರು. ಆದರೆ, ಎರಡನೇ ಹೇಳಿಕೆಯಲ್ಲಿ ತನ್ನ ಪತಿಯೇ ತಮಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಿದ್ದರು. ಇನ್ನು, ಆಕೆಗೆ ಚಿಕಿತ್ಸೆ ನೀಡಿದ್ದ ಮತ್ತು ಪರೀಕ್ಷಿಸಿದ್ದ ವೈದ್ಯರು, ‘ಮಹಿಳೆಯನ್ನು ಆಸ್ಪತ್ರೆಗೆ ಕರೆತಂದಾಗ ಆಕೆಯ ದೇಹದಿಂದ ಸೀಮೆಎಣ್ಣೆ ವಾಸನೆ ಬರುತ್ತಿರಲಿಲ್ಲ’ ಎಂದು ಹೇಳಿದ್ದರು. ವೈದ್ಯರ ವರದಿಯು ಮಹಿಳೆಯ 2ನೇ ಹೇಳಿಕೆಗೆ ಪೂರಕವಾಗಿ ಇರಲಿಲ್ಲ.

ಆ ಕಾರಣಕ್ಕಾಗಿ, ಮಹಿಳೆಯ ಹೇಳಿಕೆಗಳು ಅಸಂತವಾಗಿವೆ ಮತ್ತು ಆಕೆಯ ಪತಿಯೇ ಅಪರಾಧ ಎಸಗಿದ್ದಾನೆ ಎಂಬುದನ್ನು ಸಾಬೀತುಪಡಿಸಲು ಬೇರೆ ಯಾವುದೇ ಪುರಾವೆಗಳಿಲ್ಲ ಎಂಬುದನ್ನು ಗಮನಿಸಿದರುವ ಸುಪ್ರೀಂ ಕೋರ್ಟ್‌, ಆರೋಪಿ ಪತಿಯನ್ನು ಆರೋಪಮುಕ್ತ ಎಂದು ಘೋಷಿಸಿದೆ.

ಈ ವರದಿ ಓದಿದ್ದೀರಾ?: ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಭೂತ ಹಕ್ಕು; ಲಿಂಗತ್ವ ಅಲ್ಪಸಂಖ್ಯಾತ ಮಗುವಿಗೆ ಇಲ್ಲವೇ?

“ಮೃತ ಮಹಿಳೆಯು ಮರಣಕ್ಕೂ ಮುನ್ನ ನೀಡಿದ ಹೇಳಿಕೆಗಳಲ್ಲಿ ಪ್ರಮುಖ ವಿರೋಧಾಭಾಸಗಳಿದ್ದರೆ ಮತ್ತು ಆರೋಪಿ ವಿರುದ್ಧ ಯಾವುದೇ ಗಣನೀಯ ಪುರಾವೆಗಳು ಇಲ್ಲದಿದ್ದರೆ ಶಿಕ್ಷೆ ವಿಧಿಸಲಾಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠ ಹೇಳಿದೆ.

“ಮರಣಕ್ಕೂ ಮುನ್ನ ನೀಡುವ ಹೇಳಿಕೆಗಳು ಅನುಮಾನದಿಂದ ಕೂಡಿದ್ದರೆ ಅಥವಾ ಅಸಮಂಜಸವಾಗಿದ್ದರೆ ಯಾವ ಹೇಳಿಕೆಯನ್ನು ನಂಬಬೇಕು ಎಂಬುದನ್ನು ಗುರುತಿಸಲು ನ್ಯಾಯಾಲಯಗಳು ದೃಢೀಕರಣ ಪುರಾವೆಗಳನ್ನು ಹುಡುಕಬೇಕಾಗುತ್ತದೆ. ಅಂತಹ ಪ್ರಕರಣಗಳಲ್ಲಿ ನ್ಯಾಯಾಲಯಗಳು ಎಚ್ಚರಿಕೆಯಿಂದ ವರ್ತಿಸಬೇಕಾಗುತ್ತದೆ. ಈ ಪ್ರಕರಣವೂ ಅಂತಹದ್ದೇ ಪ್ರಕರಣವಾಗಿದೆ. ಪ್ರಕರಣದಲ್ಲಿ, ಮೃತ ಮಹಿಳೆ ಎರಡು ಹೇಳಿಕೆಗಳನ್ನು ನೀಡಿದ್ದಾರೆ. ಎರಡೂ ವಿಭಿನ್ನವಾಗಿವೆ. ವಿಭಿನ್ನ ಹೇಳಿಕೆಗಳ ಆಧಾರದ ಮೇಲೆ ಮೇಲ್ಮನವಿದಾರನನ್ನು ತಪ್ಪಿತಸ್ಥನೆಂದು ಘೋಷಿಸಲಾಗದು” ಎಂದು ಪೀಠ ಹೇಳಿದೆ. ಮದ್ರಾಸ್ ಹೈಕೋರ್ಟ್‌ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದ್ದು, ಆರೋಪಿಯನ್ನು ಖುಲಾಸೆಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...