ಮಹಾ ಕುಂಭಮೇಳ ಕಾಲ್ತುಳಿತ | ವಿವಿಐಪಿ ಪಾಸ್ ರದ್ದು, ವಾಹನ ಸಂಚಾರ ನಿಷೇಧ

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುವ ಸ್ಥಳದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಸುಮಾರು 40ಕ್ಕೂ ಅಧಿಕ ಮಂದಿ ಸಾವನ್ನಪ್ಪಿ 60ರಷ್ಟು ಜನರು ಗಾಯಗೊಂಡ ಬಳಿಕ ಸರ್ಕಾರ ಕೆಲವು ನಿಯಮ, ಸೂಚನೆಗಳನ್ನು ಬದಲಾಯಿಸಿದೆ. ಆಡಳಿತವು ಪ್ರಮುಖವಾಗಿ ಐದು ಬದಲಾವಣೆಯನ್ನು ಮಾಡಿದೆ ಎಂದು ಹೇಳಲಾಗಿದೆ.

- Advertisement -

ಈ ಅವಘಡವಾದ ಬೆನ್ನಲ್ಲೇ ಮಹಾ ಕುಂಭಮೇಳದ ಸ್ಥಳಕ್ಕೆ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹಾಗೆಯೇ ವಿವಿಐಪಿಗಳ ಪಾಸ್‌ ಅನ್ನು ರದ್ದುಪಡಿಸಲಾಗಿದೆ. ಹಾಗೆಯೇ ಏಕಮುಖ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಭಕ್ತರ ನೂಕುನುಗ್ಗಲು ನಿಯಂತ್ರಿಸುವ ಯತ್ನ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಮಹಾ ಕುಂಭಮೇಳ ಕಾಲ್ತುಳಿತ | ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌

ಇನ್ನು ಪ್ರಯಾಗ್‌ರಾಜ್‌ಗೆ ಇತರೆ ಜಿಲ್ಲೆಗಳಿಂದ ಬರುವ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾ ಗಡಿಯಲ್ಲೇ ವಾಹನಗಳನ್ನು ನಿಲ್ಲಿಸಬೇಕಾಗುತ್ತದೆ. ಹಾಗೆಯೇ ಫೆಬ್ರವರಿ 4ರವರೆಗೆ ನಗರಕ್ಕೆ ಚತುಷ್ಚಕ್ರ (ಕಾರು) ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇನ್ನು ಜನದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ರೈಲ್ವೇ ನಿಲ್ದಾಣದಲ್ಲಿರುವ ಭಕ್ತರಿಗೆ ವ್ಯವಸ್ಥೆ ಕಲ್ಪಿಸಲು, ರೈಲ್ವೆ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಇನ್ನು ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲು ಸಾರಿಗೆ ನಿಗಮಕ್ಕೆ ಸೂಚಿಸಲಾಗಿದೆ.

ಅವಘಡ ಸಂಭವಿಸಿದ ಬಳಿಕ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬದಲು ಮೊದಲೇ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸುವುದು ಅಗತ್ಯ. ಇದೇ ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಕಳೆದ ವರ್ಷ ನಡೆದ ಕಾಲ್ತುಳಿತದಲ್ಲಿ ಸುಮಾರು 121 ಜನರು ಸಾವನ್ನಪ್ಪಿದ್ದರು. ಹಾಗೆಯೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೂಕುನುಗ್ಗಲು, ಕಾಲ್ತುಳಿತ ಸಂಭವಿಸುವ ಸಾಧ್ಯತೆ ಅಧಿಕವಾಗಿರುತ್ತದೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದರೂ ಸರಿಯಾದ ವ್ಯವಸ್ಥೆ ಇಲ್ಲದಿದ್ದರೆ ಹೇಗೆ? ಅವಘಡ ಸಂಭವಿಸಿದ ಬಳಿಕ ಕ್ರಮಕೈಗೊಳ್ಳುವುದಕ್ಕೂ ಬದಲಾಗಿ ಮೊದಲೇ ಎಚ್ಚರಿಕೆ ಉತ್ತಮವಲ್ಲವೇ ಎಂಬ ಅಭಿಪ್ರಾಯ ಸಾಮಾಜಿಕ ಮಾಧ್ಯಮದಲ್ಲಿ ಕೇಳಿಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...