ಟೈಮ್ಸ್‌ ಆಫ್ ಇಂಡಿಯಾ, ಇ.ಟಿ, ಪಿಟಿಐ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅನಿಲ್ ಅಂಬಾನಿ

Date:

ಖಾಸಗಿ ಸುದ್ದಿ ವಾಹಿನಿ ಎನ್‌ಡಿಟಿವಿ (NDTV) ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಉದ್ಯಮಿ ಅನಿಲ್ ಅಂಬಾನಿ, ಇದೀಗ ಟೈಮ್ಸ್ ಆಫ್ ಇಂಡಿಯಾ (TOI), ಎಕನಾಮಿಕ್ ಟೈಮ್ಸ್ (ET) ಮತ್ತು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಸುದ್ದಿ ಸಂಸ್ಥೆಗಳ ವಿರುದ್ಧವೂ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ತಮ್ಮ ಒಡೆತನದ ಕಂಪನಿಗಳ ಮೇಲಿನ ಸಿಬಿಐ ಮತ್ತು ಇ.ಡಿ ತನಿಖೆಗಳ ಕುರಿತು ದಾರಿತಪ್ಪಿಸುವ ಹಾಗೂ ಮಾನಹಾನಿಕರ ವರದಿಗಳನ್ನು ಪ್ರಕಟಿಸಲಾಗಿದೆ ಎಂದು ಆರೋಪಿಸಿ ಅವರು 2 ಕೋಟಿ ರೂ. ಮೊತ್ತದ ಮಾನನಷ್ಟ ಮೊಕದ್ದಮೆ ದಾಖಮೇಲಿಸಿದ್ದಾರೆ.

- Advertisement -

ಇಂದು (ಮೇ.20) ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸುಬ್ರಮೋಣಿಯಂ ಪ್ರಸಾದ್ ಅವರಿದ್ದ ಪೀಠವು, ಬೆನೆಟ್ ಕೋಲ್‌ಮನ್ ಅಂಡ್ ಕಂಪನಿ ಲಿಮಿಟೆಡ್ (BCCL) ಹಾಗೂ ಟೈಮ್ಸ್ ಆಫ್ ಇಂಡಿಯಾ, ಎಕನಾಮಿಕ್ ಟೈಮ್ಸ್ ಮತ್ತು ಪಿಟಿಐ ಸಂಪಾದಕರಿಗೆ ನೋಟಿಸ್ ಜಾರಿ ಮಾಡಿ, ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನು ಓದಿದ್ದೀರಾ? ಭಾರತದ ಷೇರುಪೇಟೆಯಿಂದ ಕಾಲ್ಕೀಳುತ್ತಿರುವ ವಿದೇಶಿ ಬಂಡವಾಳ; ಕರಾಳ ದಿನಗಳ ಮುನ್ಸೂಚನೆ!

ತಮ್ಮ ಒಡೆತನದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್, ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ ಮತ್ತು ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್ ಕಂಪನಿಗಳ ಸಾಲದ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿವೆ. ಆದರೆ, ಈ ತನಿಖೆಗಳ ಕುರಿತು ಆಧಾರರಹಿತ ಮೂಲಗಳು ಮತ್ತು ಊಹಾಪೋಹಗಳ ಆಧಾರದ ಮೇಲೆ ವರದಿಗಳನ್ನು ಪ್ರಕಟಿಸಲಾಗುತ್ತಿದೆ. ಇದು ತಮ್ಮ ಪ್ರತಿಷ್ಠೆ ಹಾಗೂ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದು ಅನಿಲ್ ಅಂಬಾನಿ ದೂರಿದ್ದಾರೆ.

“ತನಿಖೆಗಳು ಕಂಪನಿಗಳಿಗೆ ಸೀಮಿತವಾಗಿದ್ದರೂ, ನನ್ನನ್ನು ವೈಯಕ್ತಿಕವಾಗಿ ಗುರಿಯಾಗಿಸಲಾಗುತ್ತಿದೆ. ತನಿಖೆಯ ಅವಧಿಯಲ್ಲಿ ಈ ಕಂಪನಿಗಳ ದೈನಂದಿನ ವ್ಯವಹಾರಗಳಲ್ಲಿ ನಾನು ಯಾವುದೇ ರೀತಿಯಲ್ಲಿ ತೊಡಗಿಸಿಕೊಂಡಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, 2025ರ ನವೆಂಬರ್ 28 ಹಾಗೂ ಡಿಸೆಂಬರ್ 5ರಂದು ಈ ಸುದ್ದಿ ಸಂಸ್ಥೆಗಳಿಗೆ ವರದಿಗಳನ್ನು ಹಿಂಪಡೆದು, ಬೇಷರತ್ ಕ್ಷಮೆಯಾಚಿಸುವಂತೆ ಕೋರಿ ಕಾನೂನು ನೋಟಿಸ್ ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ ನ್ಯಾಯಾಲಯದ ಮೊರೆ ಹೋಗಿರುವುದಾಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....