ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಬಳಿಕ ಪಾಕಿಸ್ತಾನದಿಂದ ಎಲ್ಲಾ ವಸ್ತುಗಳ ಆಮದನ್ನು ಭಾರತ ನಿಷೇಧಿಸಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ತಕ್ಷಣ ನಿಷೇಧ ವಿಧಿಸಲಾಗುತ್ತದೆ ಎಂದು ಭಾರತ ತಿಳಿಸಿದೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕದವರೂ ಸೇರಿ ಬಹುತೇಕರು ಪ್ರವಾಸಿಗರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊಣೆ ಹೊತ್ತಿಕೊಳ್ಳುತ್ತಿದ್ದಂತೆ ಭಾರತ-ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಿದೆ.
ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು
ಸಿಂಧೂ ಜಲ ಒಪ್ಪಂದ ಅಮಾನತು, ಪಾಕಿಸ್ತಾನ ಪ್ರಜೆಗಳ ವೀಸಾ ರದ್ದು ಹೀಗೆ ಕೇಂದ್ರ ಸರ್ಕಾರಗಳ ವಿವಿಧ ಘೋಷಣೆಗಳ ಬೆನ್ನಲ್ಲೇ ಪಾಕಿಸ್ತಾನ, ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ರದ್ದುಗೊಳಿಸಿತು. ಇದೀಗ ಭಾರತ ಇಸ್ಲಾಮಾಬಾದ್ ಮೇಲಿನ ನಿರ್ಬಂಧಗಳನ್ನು ವಿಸ್ತರಿಸಿ ಎಲ್ಲಾ ಸರಕುಗಳ ನೇರ ಮತ್ತು ಪರೋಕ್ಷ ಆಮದಿನ ಮೇಲೆ ನಿಷೇಧ ವಿಧಿಸಿದೆ.
ಮೇ 2ರಂದು ಅಧಿಸೂಚನೆಯನ್ನು ಹೊರಡಿಸಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಈ ಆದೇಶವನ್ನು ಹೊರಡಿಸಿದೆ. ನಿಷೇಧವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
