ಪಶ್ಚಿಮ ಬಂಗಾಳ |ಮಮತಾ ಅವರನ್ನು ಭೇಟಿಯಾದ ಎಸ್‌ಪಿ ನಾಯಕ ಅಖಿಲೇಶ್ ಯಾದವ್

Date:

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೀವ್ರ ಹಿನ್ನಡೆಯನ್ನು ಕಂಡಿದೆ. ಈ ಬೆನ್ನಲ್ಲೇ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗುರುವಾರ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ, ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ. ಕಾಲಿಘಾಟ್ ನಿವಾಸದಲ್ಲಿ ಯಾದವ್ ಅವರನ್ನು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಬರಮಾಡಿಕೊಂಡರು.

- Advertisement -

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಬಳಿಕ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ. ಆದರೆ ಈ ಗೆಲುವು ಮತದಾನದ ಕಳವು, ಎಸ್‌ಐಆರ್ ವಂಚನೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ: ಮೋದಿಯನ್ನು ‘ಸೋಲಿಲ್ಲದ ಸರದಾರ’ ಮಾಡಿದ ಚುನಾವಣಾ ಆಯೋಗ!

ಇವೆಲ್ಲವುದರ ವಿರುದ್ಧವಾಗಿ ಸದ್ಯ ಮತ್ತೆ ಇಂಡಿಯಾ ಒಕ್ಕೂಟದ ನಾಯಕರುಗಳು ಒಗ್ಗಟ್ಟಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಖಿಲೇಶ್ ಯಾದವ್ ಮತ್ತು ಮಮತಾ ಬ್ಯಾನರ್ಜಿ ಭೇಟಿಯು ರಾಜಕೀಯವಾಗಿ ಅಧಿಕ ಮಹತ್ವವನ್ನು ಪಡೆದಿದೆ.

ಎಸ್‌ಪಿ ಮುಖ್ಯಸ್ಥರು ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಏಕತೆಗೆ ಬೆಂಬಲವನ್ನು ನೀಡುವುದಾಗಿ ಪುನರುಚ್ಚರಿಸಿದ್ದಾರೆ ಎಂದು ವರದಿಯಾಗಿದೆ.

294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಟಿಎಂಸಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಕೇವಲ 80 ಸ್ಥಾನಗಳನ್ನು ಗಳಿಸಿದೆ. ಆದರೆ ಎಸ್‌ಐಆರ್ ನಡೆದು ಯಾವೆಲ್ಲ ಕ್ಷೇತ್ರಗಳಲ್ಲಿ ಮತದಾರರ ಹೆಸರು ಹೆಚ್ಚಾಗಿ ತೆಗೆದುಹಾಕಲಾಗಿದೆಯೋ ಆ ಕ್ಷೇತ್ರಗಳಲ್ಲಿ ಟಿಎಂಸಿ ಸ್ಥಾನ ಕಳೆದುಕೊಂಡಿರುವುದು ವಿಪಕ್ಷಗಳ ಅನುಮಾನವನ್ನು ಇನ್ನಷ್ಟು ಹೆಚ್ಚಿಸಿದೆ.

ಮಮತಾ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ನ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್, ಮಹಾರಾಷ್ಟ್ರ ಶಿವಸೇನೆ-ಯುಬಿಟಿ ನಾಯಕ ಉದ್ಧವ್ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮೊದಲಾದವರು ಕರೆ ಮಾಡಿ ಮಮತಾ ಬ್ಯಾನರ್ಜಿ ಬಳಿ ಮಾತನಾಡಿದ್ದಾರೆ. “ನಾವು ನಿಮ್ಮೊಂದಿಗೆ ಇದ್ದೇವೆ” ಎಂದು ಭರವಸೆ ನೀಡಿದ್ದಾರೆ.

ಈ ಸೋಲಿನ ನಂತರ ಮಮತಾ ಬ್ಯಾನರ್ಜಿ, “ನಾನು ಈಗ ಮುಕ್ತ ಪಕ್ಷಿ, ಜನರ ಸೇವೆಗಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ, ಆದರೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಚುನಾವಣಾ ಆಯೋಗವನ್ನು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...